Connect with us

LATEST NEWS

ನೂಪುರ್ ಶರ್ಮಾ ತಲೆಗೆ ಒಂದು ಕೋಟಿ ಘೋಷಿಸಿದವನನ್ನು ಬಂಧಿಸಿದ ದೆಹಲಿ ಪೊಲೀಸ್‌

Published

on

ನವದೆಹಲಿ: ಪ್ರವಾದಿ ಮಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಬೆದರಿಕೆ ಹಾಕಿ, ಅವರ ತಲೆಗೆ ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಕ್ಕಾಗಿ ಭೀಮಸೇನಾ ಮುಖ್ಯಸ್ಥ ನವಾಬ್ ಸತ್ಪಾಲ್ ತನ್ವರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.


ಪ್ರವಾದಿ ಮಹಮ್ಮದ್ ಕುರಿತ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರ ಆಕ್ಷೇಪಾರ್ಹ ಹೇಳಿಕೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ದೇಶದ ಹಲವೆಡೆ ಪ್ರತಿಭಟನೆಗಳು ನಡೆದಿದ್ದವು.

ಈ ಕುರಿತು, ಫೇಸ್‌ಬುಕ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿದ್ದ ತನ್ವರ್, ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಿದ್ದರು.

ಈ ಮೂಲಕ ಅವರು ಕೋಮು ಸೌಹಾರ್ದತೆ ಹದಗೆಡಿಸುವ ಯತ್ನ ನಡೆಸಿದ್ದಾರೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಟ್ವಿಟರ್ ಸೇರಿದಂತೆ ಹಲವು ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ಸೌಹಾರ್ದ ಹದಗೆಡಿಸುವ ಪೋಸ್ಟ್‌ಗಳನ್ನು ಹಾಕಿರುವ ಬಗ್ಗೆ ಹಲವು ದೂರುಗಳನ್ನು ಸ್ವೀಕರಿಸಿರುವುದಾಗಿಯೂ ಪೊಲೀಸರು ಹೇಳಿದ್ದಾರೆ.

ದೂರುಗಳು ಮತ್ತು ಸಾಮಾಜಿಕ ಮಾಧ್ಯಮಗಳ ಪರಿಶೀಲನೆ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 19 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಂತಹ ಒಂದು ಪ್ರಕರಣದಲ್ಲಿ ತನ್ವರ್ ಅವರನ್ನು ಬಂಧಿಸಲಾಗಿದೆ. ಹಲವಾರು ಟ್ವಿಟರ್ ಹ್ಯಾಂಡಲ್‌ಗಳು ಮತ್ತು ಫೇಸ್‌ಬುಕ್ ಪ್ರೊಫೈಲ್ ಹೊಂದಿರುವ ಭೀಮ್ ಸೇನೆಯ ಮುಖ್ಯಸ್ಥ ಎಂದು ಹೇಳಿಕೊಂಡಿರುವ ತನ್ವರ್,

ಶರ್ಮಾ ತಲೆಗೆ ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಿದ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಕೋಮು ಹಿಂಸೆಯನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಎಫ್‌ಐಆರ್ ದಾಖಲಾದ ನಂತರ, ತನ್ವರ್ ಪಂಜಾಬ್,

ಉತ್ತರ ಪ್ರದೇಶ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ತಲೆಮರೆಸಿಕೊಳ್ಳಲು ಪ್ರಯತ್ನಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಗುರುಗ್ರಾಮ್‌ನಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತನಗೆ ಕೆಲವು ವೈದ್ಯಕೀಯ ಸಮಸ್ಯೆಗಳಿವೆ ಎಂದು ತನ್ವರ್ ಹೇಳಿದ್ದು, ವೈದ್ಯಕೀಯ ಪರೀಕ್ಷೆಗೊಳಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಮಧ್ಯೆ,

ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತರುವ ಮತ್ತು ಕೋಮು ಸೌಹಾರ್ದತೆ ಹದಗೆಡಿಸಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ದೆಹಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

FILM

PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!

Published

on

ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.


ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.


ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.

ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.

ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.

 

ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

 

 

Continue Reading

LATEST NEWS

Trending