LATEST NEWS
ಬೀದರ್ ಮೂಲದ ಮಹಿಳೆ ಕೊ*ಲೆ ಪ್ರಕರಣ; ಉಡುಪಿಯಲ್ಲೇ ಅಂತ್ಯಸಂಸ್ಕಾರ ನೆರವೇರಿಸಿದ ಸಂಬಂಧಿಕರು
ಉಡುಪಿ: ಸಾಲಿಗ್ರಾಮ ಸಮೀಪದ ಕಾರ್ಕಡ ಎಂಬಲ್ಲಿ ತನ್ನ ಪತಿಯಿಂದಲೇ ಪತ್ನಿ ಹತ್ಯೆಗೀಡಾದ ಪ್ರಕರಣಕ್ಕೆ ಸಂಬಂಧಿಸಿ ಪತಿ ಕಿರಣ್ ಉಪಾಧ್ಯಾಯನನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಬೀದರ್ ಮೂಲದ ಜಯಶ್ರೀ ಮೃತದೇಹದ ಅಂತ್ಯಸಂಸ್ಕಾರವನ್ನು ಸಂಬಂಧಿಕರು ಉಡುಪಿಯಲ್ಲಿಯೇ ನೆರವೇರಿಸಿದ್ದಾರೆ. ಇಂದ್ರಾಳಿಯ ಹಿಂದು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.
ಪೊಲೀಸರು ಶವ ಮಹಜರು, ಮರಣೋತ್ತರ ಪರೀಕ್ಷೆ ಮೊದಲಾದ ಕಾನೂನು ಪ್ರಕ್ರಿಯೆಗಳ ಬಳಿಕ ಶವವನ್ನು ಸಂಬಂಧಿಕರಿಗೆ ಒಪ್ಪಿಸಿದ್ದಾರೆ. ಶವಸಂಸ್ಕಾರ ನಡೆಸಲು ದೂರದ ಬೀದರ್‌ಗೆ ಹೋಗಲು ಅಸಾಧ್ಯವಾಗಿದ್ದರಿಂದ ಸಂಬಂಧಿಕರು ಉಡುಪಿಯಲ್ಲಿಯೇ ಅಂತ್ಯಸಂಸ್ಕಾರ ಮಾಡಿದ್ದಾರೆ. ಈ ವೇಳೆ ಬ್ರಹ್ಮಾವರ ವಲಯ ವೃತ್ತ ನಿರೀಕ್ಷಕ ದಿವಾಕರ್ ಪಿ.ಎಂ, ಉಡುಪಿಯ ಸಮಾಜಸೇವಕ ನಿತ್ಯಾನಂದ ಒಳಕಾಡುವರ ನೆರವಿನಿಂದ ಇಂದ್ರಾಳಿಯ ಹಿಂದು ರೂದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಸಿದರು. ಹೆಡ್ ಕಾನ್ಟೇಬಲ್ ರಾಘವೇಂದ್ರ, ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಈ ವೇಳೆ ಸಹಕರಿಸಿದರು.
LATEST NEWS
ಕಮ್ಯುನಿಸ್ಟ್ ನಾಯಕ ಸಿತಾರಾಮ್ ಯೆಚೂರಿ ಇನ್ನಿಲ್ಲ..!
ನವದೆಹಲಿ : ಕಮ್ಯುನಿಸ್ಟ್ ನಾಯಕ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಅಲ್ಪಕಾಲದ ಅಸೌಖ್ಯದಿಂದ ಇಹಲೋಕ ತ್ಯಜಿಸಿದ್ದಾರೆ. 72 ವರ್ಷ ವಯಸ್ಸಾಗಿದ್ದ ಯೆಚೂರಿ ಅವರು ಉಸಿರಾಟದ ತೊಂದರೆಗಾಗಿ ಆಗಸ್ಟ್ 19 ರಂದು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಎರಡು ದಿನಗಳಿಂದ ಶ್ವಾಸಕೋಶದ ಸೋಂಕು ಉಲ್ಭಣವಾಗಿದ್ದು ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
1952 ರಲ್ಲಿ ಚೆನೈನಲ್ಲಿ ಜನಿಸಿದ್ದ ಇವರು ಶಾಲಾ ಶಿಕ್ಷಣವನ್ನು ಹೈದರಾಬಾದ್‌ನಲ್ಲಿ ಪೂರೈಸಿದ್ದರು. 1969 ರಲ್ಲಿ ತೆಲಂಗಾಣ ಪ್ರತ್ಯೇಕತಾ ಹೋರಾಟ ಆರಂಭವಾದ ಬಳಿಕ ದೆಹಲಿಗೆ ತೆರಳಿದ್ದ ಯೆಚೂರಿ ದೆಹಲಿಯ ಜೆಎನ್‌ಯುನಲ್ಲಿ ಎಂಎ ಪದವಿ ಮುಗಿಸಿದ್ದರು. ಪಿಹೆಚ್‌ಡಿ ಆರಂಭಿಸಿದ್ದರಾದ್ರೂ ತುರ್ತು ಪರಿಸ್ಥಿತಿಯ ಕಾರಣದಿಂದ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. 1970 ರಿಂದ ಜೆಎನ್‌ಯುನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಮೂರು ಭಾರಿ ಆಯ್ಕೆಯಾಗಿದ್ದರು. ಬಳಿಕ 1984 ರಲ್ಲಿ ಸಿಪಿಐಎಂನ ಕೇಂದ್ರ ಸಮಿತಿಗೆ ಆಯ್ಕೆಯಾಗಿ ಪಕ್ಷದಲ್ಲಿ ಇದುವರೆಗೂ ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ.
FILM
ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ
ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ರನ್ನು ನೋಡಲು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ. ಅತ್ತಿಗೆ ಜೊತೆ ದರ್ಶನ್ ಸಹೋದರ ದಿನಕರ್ ಕೂಡ ಆಗಮಿಸಿದ್ದಾರೆ.
ಚಾರ್ಜ್‌ಶೀಟ್ ಪ್ರತಿ ಸಮೇತ ಇಬ್ಬರು ವಕೀಲರೊಂದಿಗೆ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಜೈಲಿಗೆ ಭೇಟಿ ನೀಡಿ, ದರ್ಶನ್ ಜೊತೆ ಕಾನೂನು ಸಮರದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ, ಪತಿಗಾಗಿ ಡ್ರೈ ಫ್ರೂಟ್ಸ್, ಬಿಸ್ಕೆಟ್ ಹಾಗೂ ದೇವರ ಪ್ರಸಾದೊಂದಿಗೆ ಆಗಮಿಸಿದ್ದಾರೆ.
ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11ರಂದು ದರ್ಶನ್‌ರನ್ನು ಬಂಧಿಸಿದ್ದರು.
LATEST NEWS
ಶಿಕ್ಷಕಿ, ನಿಟ್ಟೂರು ನಿವಾಸಿ ರೋಸಿ ಫಿಲೋಮಿನಾ ಪಿಂಟೋ ವಿಧಿವಶ
ಉಡುಪಿ: ನಿಟ್ಟೂರು ಪ್ರೌಢಶಾಲಾ ಶಿಕ್ಷಕಿ ನಿಟ್ಟೂರು ನಿವಾಸಿ ರೋಸಿ ಫಿಲೋಮಿನಾ ಪಿಂಟೋ(72 ವ) ಸೆ. 12ರಂದು ಮೃತಪಟ್ಟಿದ್ದಾರೆ.
ಅವರು 33 ವರ್ಷಗಳಿಂದ ನಿಟ್ಟೂರು ಫ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೆವೆ ಸಲ್ಲಿಸಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಮತ್ತು ಇಂಟರ್ಯಾಕ್ಟ್ ಕ್ಲಬ್ ನ ಸಂಯೋಜಕಿಯಾಗಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಪಾಲನಾ ಪರಿಷತ್‌ನ ಪ್ರಥಮ ಮಹಿಳಾ ಕಾರ್ಯದರ್ಶಿಯಾಗಿ, ಮಹಿಳಾ ಸಂಘಟನೆಯ ಅಧ್ಯಕ್ಷೆಯಾಗಿ, ಚೇತನಾ ಮತ್ತು ಪ್ರಗತಿ ಮಹಿಳಾ ಮಂಡಲಗಳ ಸ್ಥಾಪಕಾಧ್ಯಕ್ಷೆಯಾಗಿದ್ದರು. ಮೃತರು ಇಬ್ಬರು ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
- LATEST NEWS3 days ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್
- FILM2 days ago
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್ಫರ್ಮ್!
- DAKSHINA KANNADA4 days ago
WATCH : ಕದ್ರಿ ಪಾರ್ಕ್ ನ ರಸ್ತೆಯಲ್ಲಿ ‘ಅಪರೇಷನ್ ಹೆಬ್ಬಾವು’; ಭಾರಿ ಗಾತ್ರದ ಹಾವನ್ನು ಕಂಡು ಬೆಚ್ಚಿ ಬಿದ್ದ ಜನ
- FILM2 days ago
ರೇಣುಕಾಸ್ವಾಮಿ ಚಾರ್ಜ್ಶೀಟ್ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ..!