ಮಂಗಳೂರು/ಕೆನಡಾ: ಕೆನಾಡದ ಉಪ ಪ್ರಧಾನಮಂತ್ರಿ ಹಾಗೂ ಹಣಕಾಸು ಸಚಿವೆ ಕ್ರಿಸ್ಟಿಯಾ ಫ್ರೀಲ್ಯಾಂಡ್ ಕೆನಾಡದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರ “ಅಮೆರಿಕಾ ಮೊದಲು” ಆರ್ಥಿಕ ರಾಷ್ಟ್ರೀಯತೆಯ ಆತಂಕದ ಕುರಿತು ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಕೆನಾಡಾದ ಉಪ ಪ್ರಧಾನ ಮಂತ್ರಿ ಮತ್ತು ಹಣಕಾಸು ಸಚಿವೆ ಇಂದು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ 4 ವರ್ಷಗಳಲ್ಲಿ ಟ್ರುಡೋ ಸರ್ಕಾರದಿಂದ ಹೊರಬಂದ ಎರಡನೇ ಹಣಕಾಸು ಸಚಿವೆ ಆಗಿದ್ದಾರೆ.
ಕೆನಡಾದ ಎಲ್ಲಾ ಸರಕುಗಳು ಮತ್ತು ಸೇವೆಗಳ ಮೇಲೆ 25% ಲೆವಿಯನ್ನು ಸ್ಲ್ಯಾಪ್ ಮಾಡುವುದಾಗಿ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಳೆದ ತಿಂಗಳು ನೀಡಿದ ಹೇಳಿಕೆಯಿಂದ ಕೆನಡಾ ಮತ್ತು ಯುಎಸ್ ನಡುವಿನ ಸಂಬಂಧ ಹಳಸಿದೆ.
ನಮ್ಮ ದೇಶ ಇಂದು ಗಂಭೀರ ಸವಾಲನ್ನು ಎದುರಿಸುತ್ತಿದೆ. ಯುನೈಟೆಡ್ ಸ್ಟೇಟ್ಸ್ನಲ್ಲಿನ ಆಡಳಿತವು ಆಕ್ರಮಣಕಾರಿ ಆರ್ಥಿಕ ರಾಷ್ಟ್ರೀಯತೆಯ ನೀತಿಯನ್ನು ಅನುಸರಿಸುತ್ತಿದೆ. ಇದರಲ್ಲಿ 25% ಸುಂಕಗಳ ನೀತಿಯೂ ಸೇರಿದೆ. “ನಾವು ಆ ಬೆದರಿಕೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.
ರಾಜೀನಾಮೆ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕ್ರಿಸ್ಟಿಯಾ ಕೆನಡಾದ ಪ್ರಧಾನಿಗೆ ಸುದೀರ್ಘ ರಾಜೀನಾಮೆ ಪತ್ರ ಬರೆದಿದ್ದಾರೆ. ಟ್ರೂಡೊ ಅವರು ತನಗೆ ಹಣಕಾಸು ಸಚಿವೆಯ ಬದಲು, ಸಂಪುಟದಲ್ಲಿ ಮತ್ತೊಂದು ಪಾತ್ರವನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
“ಶುಕ್ರವಾರ ನೀವು ಇನ್ನು ಮುಂದೆ ನಾನು ನಿಮ್ಮ ಹಣಕಾಸು ಸಚಿವೆಯಾಗಿ ಸೇವೆ ಸಲ್ಲಿಸಲು ಬಯಸುವುದಿಲ್ಲ ಎಂದು ನನಗೆ ಹೇಳಿದ್ದೀರಿ. ನನಗೆ ಕ್ಯಾಬಿನೆಟ್ ನಲ್ಲಿ ಮತ್ತೊಂದು ಸ್ಥಾನವನ್ನು ನೀಡಿದ್ದೀರಿ” ಎಂದು ಫ್ರೀಲ್ಯಾಂಡ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಿದ ಟ್ರುಡೋಗೆ ಬರೆದ ಪತ್ರದಲ್ಲಿ ಬರೆದಿದ್ದಾರೆ.
“ಕಳೆದ ಹಲವಾರು ವಾರಗಳಿಂದ, ಕೆನಡಾದ ಮುಂದಿನ ಉತ್ತಮ ಮಾರ್ಗದ ಕುರಿತು ನಿಮ್ಮ ಮತ್ತು ನನ್ನ ನಡುವೆ ಹಲವು ಭಿನ್ನಾಭಿಪ್ರಾಯಗಳು ಮೂಡಿದ್ದವು” ಫ್ರೀಲ್ಯಾಂಡ್ ಟ್ರುಡೊಗೆ ಹೇಳಿದರು. ಆದರೆ ಅವರ ರಾಜೀನಾಮೆಗೆ ಪ್ರಧಾನಮಂತ್ರಿ ಕಚೇರಿಯು ಇನ್ನೂ ಯಾವುದೇ ಸಾರ್ವಜನಿಕ ಪ್ರತಿಕ್ರಿಯೆ ನೀಡಿಲ್ಲ.
4.28 ಶತಕೋಟಿ ಡಾಲರ್ ಮೊತ್ತದ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಯೋಜನೆಯನ್ನು ಅಧ್ಯಕ್ಷರು ಘೋಷಿಸಿದ್ದಾರೆ. ಇದರೊಂದಿಗೆ ವಿದ್ಯಾರ್ಥಿ ಸಾಲದಿಂದ ಮುಕ್ತರಾದವರ ಸಂಖ್ಯೆ ಸುಮಾರು 5 ದಶಲಕ್ಷಕ್ಕೆ ತಲುಪಿದೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಿದೆ.
ಮಂಗಳೂರು/ಕೀವ್: ಉಕ್ರೇನ್ ನ 8 ಸ್ಪೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜನ್ ನಗರದ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದೇ ನಗರದಲ್ಲಿ ಇತ್ತೀಚೆಗೆ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ ನಡೆದಿದ್ದು, ಭಾರತದ ಪ್ರಧಾನಿ ಸೇರಿದಂತೆ ಹಲವು ವಿಶ್ವ ನಾಯಕರು ಆಗಮಿಸಿದ್ದರು.
ಇತ್ತೀಚೆಗೆ ಉಕ್ರೇನ್ ಮೇಲೆ ಕ್ಷೀಪಣಿ ದಾಳಿ ನಡೆಸಿದ್ದ ರಷ್ಯಾಗೆ ಡ್ರೋನ್ ದಾಳಿ ಮೂಲಕ ಉಕ್ರೇನ್ ತಿರುಗೇಟು ನೀಡಿದ್ದು, ಉಕ್ರೇನ್ ದಿಢೀರ್ ಕ್ರಮಕ್ಕೆ ರಷ್ಯಾದ ಕಜಾನ್ ಜನತೆ ಬೆಚ್ಚಿ ಬಿದ್ದಿದ್ದಾರೆ.
ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದರೆ ಕಟ್ಟಡಗಳು ವ್ಯಾಪಕವಾಗಿ ಹಾನಿಗೊಳಗಾಗಿರುವುದಾಗಿ ವರದಿಗಳು ತಿಳಿಸಿವೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜಾನ್ ನಗರದ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ. ದಾಳಿಯಲ್ಲಿ 3 ಕಟ್ಟಡಗಳು ಹಾನಿಗೊಳಗಾಗಿದ್ದು, ಜನರನ್ನು ಅಲ್ಲಿಂದ ಸ್ಥಳಾಂತರಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಆಡಳಿತವು ಜನರಿಗೆ ಊಟ, ಬಟ್ಟೆಗಳನ್ನು ಒದಗಿಸಿದೆ ಎಂದು ತಿಳಿದುಬಂದಿದೆ.
ಕಜನ್ ಮಾಸ್ಕೋದಿಂದ ಪೂರ್ವಕ್ಕೆ ಸುಮಾರು 800 ಕಿಲೋಮೀಟರ್ ದೂರದಲ್ಲಿದೆ. ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಪ್ರಕಾರ, ರಷ್ಯಾದ ವಾಯು ರಕ್ಷಣಾ ವ್ಯವಸ್ಥೆಯ ಕಜಾನ್ ನಗರದಲ್ಲಿ ಡ್ರೋನ್ ಅನ್ನು ಉರುಳಿಸಿದ್ದು, ಕೆಲವು ಡ್ರೋನ್ ಗಳು ಅದನ್ನು ಭೇದಿಸಿ ದಾಳಿನಡೆಸಿವೆ ಎಂದು ತಿಳಿಸಿದೆ.
9/11 ಶೈಲಿಯ ದಾಳಿ
ಉಕ್ರೇನ್ ದಾಳಿಯು, ಸಪ್ಟೆಂಬರ್ 11, 2001ರಂದು ನ್ಯೂಯಾರ್ಕ್ ವಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಕ್ಕೆ ವಿಮಾನದ ಮೂಲಕ ದಾಳಿ ನಡೆಸಿದ ಘಟನೆಯನ್ನು ನೆನಪಿಸುವಂತಿದೆ.
ಸೆಪ್ಟೆಂಬರ್ 11, 2001ರಂದು ಅಮೆರಿಕಗೆ ಅಲ್ ಕೈದಾ ಉಗ್ರ ಸಂಘಟನೆ ಶಾಕ್ ಕೊಟ್ಟಿದ್ದರು. ಈ ಭೀಕರ ಉಗ್ರ ದಾಳಿಯಲ್ಲಿ 2977 ಅಮಾಯಕರು ಮೃತರಾಗಿದ್ದರು.
ಅಲ್ ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ ಅಧಿನಾಯಕ ಒಸಾಮಾ ಬಿನ್ ಲಾಡೆನ್ ನೇತೃತ್ವದಲ್ಲಿ ಅಮೆರಿಕದ ಮೇಲೆ ಉಗ್ರ ದಾಳಿ ನಡೆಸಿತ್ತು. ನ್ಯೂಯಾರ್ಕ್ ನ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರದ ಮೇಲೆ ವಿಮಾನ ದಾಳಿ ನಡೆದಿತ್ತು. ಸೆಪ್ಟೆಂಬರ್ 11, 2001 ಈ ಘಟನೆ ನಡೆದಿದ್ದು ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಉಕ್ರೇನ್ ನ ಈ ದಢೀರ್ ದಾಳಿಯು 9/11ರ ಅಟ್ಯಾಕ್ ಸ್ಮರಿಸುವಂತೆ ಮಾಡಿದೆ.
ಮಂಗಳೂರು/ನವದೆಹಲಿ: ಭಾರತದ ವಿರುದ್ಧ ಯಾವಾಗ್ಲೂ ಕುತಂತ್ರಿ ಚೀನಾ ಕತ್ತಿಮಸಿಯುತ್ತಲೇ ಇರುತ್ತೆ. ಸುಮ್ಮನೆ ಇರಲಾರದೇ ಗಡಿಯಲ್ಲಿ ಭಾರತವನ್ನು ಕೆಣಕುತ್ತೆ. ಇತ್ತೀಚೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಚೀನಾ ವಿದೇಶಾಂಗ ಸಚಿವ ವಾಂಗ್ ಯಿಯನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದರು.
ಆದರೆ, ಭೂತಾನ್ ಭಾಗ ಎನ್ನಲಾಗುವ ಪ್ರದೇಶದಲ್ಲಿ ಕಳೆದ ಎಂಟು ವರ್ಷಗಳಲ್ಲಿ ಚೀನಾ 22 ಗ್ರಾಮಗಳನ್ನು ನಿರ್ಮಾಣ ಮಾಡಿದೆ. ಉಪಗ್ರಹ ಚಿತ್ರಗಳನ್ನು ಆಧರಿಸಿ ಈ ವರದಿಯನ್ನು ತಯಾರಿಸಲಾಗಿದೆ. ಭಾರತದ ಸಿಕ್ಕಿಂ ಸಮೀಪ ಈ ಗ್ರಾಮಗಳ ನಿರ್ಮಾಣವಾಗಿದ್ದು, ಕಳವಳ ವ್ಯಕ್ತವಾಗಿದೆ.
ಚೀನಾದ ಸೇನಾಪಡೆಗಳಿಗೆ ಸುಲಭ ಸಂಚಾರ
ಡೋಕ್ಲಾಂನಲ್ಲಿ ಗ್ರಾಮ ನಿರ್ಮಾಣವಾಗುತ್ತಿರುವುದರಿಂದ ಈ ಪ್ರಸ್ಥಭೂಮಿಯ ಅತ್ಯಂತ ದಕ್ಷಿಣಕ್ಕೆ ಚೀನಾದ ಸೇನಾಪಡೆಗಳು ಸಂಚಾರ ಮಾಡಲು ಅವಕಾಶ ದೊರೆಯುತ್ತದೆ. ಇದು ಭಾರತಕ್ಕೆ ತೀರ ಸಮೀಪವಾಗಿದ್ದು, ಇದು ಚೀನಾದ ಮಿಲಿಟರಿ ನೆಲೆಗಳಿಗೂ ಸಮೀಪದಲ್ಲಿದೆ.
ಡೋಕ್ಲಾಂ ಬಿಕ್ಕಟ್ಟು
2017ರಲ್ಲಿ ಡೋಕ್ಲಾಂನ ಈ ಪ್ರದೇಶವು ಭಾರತ ಮತ್ತು ಚೀನಾದ ಸೈನಿಕರ ನಡುವೆ 73 ದಿನಗಳ ಕಾಲದ ಬಿಕ್ಕಟ್ಟಿನ ಪ್ರದೇಶವಾಗಿತ್ತು. ಹೀಗಾಗಿ ಈ ಪ್ರಸ್ಥಭೂಮಿಯ ದಕ್ಷಿಣಕ್ಕೆ ಚೀನಾದ ಸೇನೆಗಳು ತಲುಪುವ ರಸ್ತೆ ಮಾರ್ಗಗಳ ನಿರ್ಮಾಣವನ್ನು ತಡೆಯಲು ಭಾರತ ಸರಕಾರ ಮಧ್ಯಪ್ರವೇಶಿಸಿತ್ತು.
ಇದೀಗ ಮತ್ತೆ ಡೋಕ್ಲಾಂನಲ್ಲಿ ಗ್ರಾಮಗಳ ನಿರ್ಮಾಣ ವೇಗ ಪಡೆಯುತ್ತಿದ್ದು ಉಪಗ್ರಹ ಚಿತ್ರಗಳು ಭಾರತದ ಆತಂಕಕ್ಕೆ ಕಾರಣವಾಗಿದೆ.