bangalore
ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಡೇಟ್ ಫಿಕ್ಸ್…
ಬೆಂಗಳೂರು : ಕೊನೆಗೂ ಕನ್ನಡ ಕಿರುತೆರೆಯ ವೀಕ್ಷಕರು ಕಾಯುತ್ತಿದ್ದ ಕನ್ನಡದ ಬಿಗ್ ಬಾಸ್ ಸೀಸನ್ 10 ಶೋ ಕುರಿತ ಬಿಗ್ ಅಪ್ ಡೇಟ್ ಸಿಕ್ಕಿದ್ದು, ಅಕ್ಟೋಬರ್ 7 ಮತ್ತು 8 ರಂದು ಎರಡು ದಿನಗಳ ಕಾಲ ಪ್ರವೇಶದ ಸಂಚಿಕೆಗಳು ಪ್ರಸಾರವಾಗಲಿದೆ.
ಕಿಚ್ಚ ಸುದೀಪ್ ನಿರಂತರವಾಗಿ ಹೋಸ್ಟ್ ಮಾಡಿಕೊಂಡು ಬಂದಿರುವ ಬಿಗ್ ಬಾಸ್ ಕನ್ನಡ ರಿಲಯಾಲಿಟಿ ಶೋ ಈ ಬಾರಿ ಸಾಕಷ್ಟು ಕುತೂಹಲವನ್ನು ಉಂಟು ಮಾಡಿದೆ.
ಸಿನೆಮಾ, ರಾಜಕೀಯ, ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು ಮಾಡಿ ಸುದ್ದಿಯಾದವರನ್ನು ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನೋಡ್ಬೋದು ಎಂಬ ಮಾತುಗಳು ಕೇಳಿ ಬರುತ್ತಿದೆ.
ಕೆಜಿಎಫ್ ಖ್ಯಾತಿಯ ರೂಪ ರಾಯಪ್ಪ,ನಾಗಿಣಿ ಸೀರಿಯಲ್ ಮೂಲಕ ಜನಪ್ರಿಯತೆ ಪಡೆದ ಸೀರಿಯಲ್ ನಟಿ ನಮ್ರತಾ ಗೌಡ, ರೀಲ್ಸ್ ಮಾಡುತ್ತಾ ಜನಪ್ರಿಯತೆ ಪಡೆದ ಭೂಮಿ ಬಸವರಾಜ್ ಸೇರಿದಂತೆ, ಬುಲೆಟ್ಪ್ರಕಾಶ್ ಪುತ್ರ ರಕ್ಷಕ್,
ಲಕ್ಷ್ಮಣ ಧಾರವಾಹಿ ನಟಿ ಸುಕೃತ ನಾಗ್, ಗೀತಾ ಸೀರಿಯಲ್ ನ ಪ್ರಮುಖ ಪಾತ್ರಧಾರಿ ಭವ್ಯಾ ಗೌಡ, ಹಾಗೇ ಸೋಷಿಯಲ್ ಮೀಡಿಯಾದಲ್ಲಿ ಬ್ರೇಕಪ್ ಸುದ್ದಿ ಹರಿದಾಡಿಸಿ ಸುದ್ದಿಯಾದ ವರುಣ್ -ವರ್ಷಾ ಹೆಸರು ಕೂಡ ಬಿಗ್ ಬಾಸ್ ರೇಸ್ ನಲ್ಲಿದೆ.
ಇದೀಗ ಅಧಿಕೃತವಾಗಿ ವಾಹಿನಿ ಪ್ರೋಮೋ ವೊಂದನ್ನು ರಿಲೀಸ್ ಮಾಡಿದ್ದು, ಬಿಗ್ ಬಾಸ್ 10ರ ಶೋಗೆ ಕ್ಷಣಗಣನೆ ಶುರುವಾಗಿದೆ.
ಅ.7 ಮತ್ತು 8 ರಂದು ಎರಡು ದಿನಗಳ ಕಾಲ ಪ್ರವೇಶದ ಸಂಚಿಕೆಗಳು ಪ್ರಸಾರವಾಗಲಿದ್ದು, ಅ. 9ರಿಂದ ಬಿಗ್ ಬಾಸ್ ಮನೆಯಲ್ಲಿ ನಿಜವಾದ ಆಟ ಶುರುವಾಗಲಿದೆ.
bangalore
ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!
Film: ತೆಲುಗು ನಟ ನರೇಶ್ ಈಗಾಗಲೇ ಮೂರನೇ ಪತ್ನಿ ರಮ್ಯಾ ರಘುಪತಿಯವರಿಂದ ಡಿವೋರ್ಸ್ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ ರಮ್ಯಾ ಡಿವೋರ್ಸ್ ನೀಡಲು ಒಪ್ಪುತ್ತಿಲ್ಲ. ಹೀಗಿರುವಾಗಲೇ ಪವಿತ್ರಾ ಲೋಕೇಶ್ ಜೊತೆ ನರೇಶ್ ಸಹಜೀವನ ನಡೆಸುತ್ತಿದ್ದಾರೆ.
ಬಹುದಿನಗಳ ನಂತರ ನರೇಶ್ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಎಮೋಷನಲ್ ಪೋಸ್ಟ್ ಮಾಡಿದ್ದಾರೆ. “ನಾನು ನನ್ನ ಜೀವನದಲ್ಲಿ ಸಂಕಷ್ಟದಲ್ಲಿದ್ದಾಗ, ಈ ಒಂದು ಹಾಡು ನನಗೆ ಸ್ಫೂರ್ತಿ ನೀಡಿತು. ಆ ಸಮಯದಲ್ಲಿ ನಾನು ನನ್ನ ಕರಿಯರ್ ಕಳೆದುಕೊಂಡೆ. ನಾನು ಆರ್ಥಿಕ ಸಮಸ್ಯೆ ಎದುರಿಸಿದೆ. ನನ್ನ ಆತ್ಮೀಯರು ನನ್ನನ್ನು ಅಗಲಿದ್ದರು. ಕ್ಷುಲ್ಲಕ ಪ್ರಕರಣದಲ್ಲಿ ಸಂಬಂಧಿಕರಿಂದ ಕಿರಿಕಿರಿ, ಜೋಕರ್‌ನಿಂದ ತೊಂದರೆ ಎದುರಾದರೂ ನನ್ನ ಬೆಂಬಲಕ್ಕೆ ನಿಂತಿದ್ದು ನನ್ನ ತಾಯಿ ಮತ್ತು ಸ್ನೇಹಿತ ವಿಜಯ್ ವಾಧ್ವಾ ಮಾತ್ರ.ಈಗ ಈ ರೀತಿ ಬದಲಾಗಿದ್ದೇನೆ. ಈ ಹಾಡು ನನಗೆ ಸ್ಫೂರ್ತಿ ನೀಡಿದ್ದು ಮಾತ್ರವಲ್ಲ. ಮತ್ತೆ ಬಲವಾಗಿ ಎದ್ದು ನಿಲ್ಲುವಂತೆ ಮಾಡಿದೆ. ಈಗಲೂ ಪ್ರೇರೇಪಿಸುತ್ತದೆ. ಈಗ ನಾನು ನನ್ನ ವೃತ್ತಿಜೀವನದ 50ನೇ ವರ್ಷದಲ್ಲಿದ್ದೇನೆ. ಈ ಮಹತ್ತರವಾದ ಮೈಲಿಗಲ್ಲನ್ನು ಸಾಧಿಸಲು ನನಗೆ ತುಂಬಾ ಸಹಾಯ ಮಾಡಿದ ಎಲ್ಲರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ” ಎಂದು ನರೇಶ್ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
bangalore
ಮಾಲಿವುಡ್ ನ ಹಿರಿಯ ನಟಿ ಆರ್. ಸುಬ್ಬಲಕ್ಷ್ಮಿ ಇನ್ನಿಲ್ಲ..!
Film: ಮಲಯಾಳಂ ಚಿತ್ರದ ಖ್ಯಾತ ಹಿರಿಯ ನಟಿ ಹಾಗೂ ಸಂಗೀತ ಕ್ಷೇತ್ರದಲ್ಲೂ ಹಲವು ಸಾಧನೆ ಮಾಡಿರುವ ಆರ್. ಸುಬ್ಬಲಕ್ಷ್ಮಿ ಅವರು ನಿಧನ ಹೊಂದಿದರು.
ಕಾಯಿಲೆಯಿಂದ ಬಳಲುತ್ತಿದ್ದ ಆರ್. ಸುಬ್ಬಲಕ್ಷ್ಮಿ ಅವರಿಗೆ 87 ವಯಸ್ಸಾಗಿತ್ತು. ಸಿನಿಮಾ ರಮಗದಲ್ಲಿ ಹಲವಾರು ವರ್ಷಗಳ ಕಾಲ ನಟನೆ ಮಾಡಿ ಅಲ್ಲದೆ ಚಿತ್ರಕಲೆ, ಸಂಗೀತ ಕ್ಷೇತ್ರದಲ್ಲೂ ಸಾಧನೆ ಮಾಡಿರುವ ಹಿರಿಯ ನಟಿ.
ಇವರಿಗೆ ವಯಸ್ಸಾದರೂ ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದಲ್ಲಿ ಅಜ್ಜಿ ಪಾತ್ರ ಮಾಡಿ ಫೆಮಸ್ ಆಗಿದ್ದರು. ಹಾಗೂ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಈ ನಟಿಯ ನಿಧನಕ್ಕೆ ಸಿನಿಮಾ ತಾರೆಯರು ಅಲ್ಲದೆ ಮುಖ್ಯಮಂತ್ರಿಗಳು ಕೂಡ ಸಂತಾಪ ಸೂಚಿಸಿದ್ದಾರೆ.
bangalore
ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್ ರಾಜ್‌ಕುಮಾರ್ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..
ಇನ್ನು ಮೊನ್ನೆಯಷ್ಟೇ ನಟ ಅರ್ಜುನ್ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ ವಿಚಾರಿಸಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..
- FILM4 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA7 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!