Connect with us

    DAKSHINA KANNADA

    ಅಬ್ಬಕ್ಕನ ನಾಡಿನಲ್ಲಿ ಅತೀ ಎತ್ತರದಲ್ಲಿ ಶಾಶ್ವತವಾಗಿ ಅರಳಿದ ತಿರಂಗಾ

    Published

    on

    ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ಹೊರವಲಯದ ಅತ್ಯಂತ ಎತ್ತರ ಧ್ವಜಸ್ತಂಭದಲ್ಲಿ ಇಂದು ಬೃಹತ್ ರಾಷ್ಟ್ರ ಧ್ವಜಾರೋಹಣ ನೆರವೇರಿತು.

    ತೊಕ್ಕೊಟ್ಟುವಿನ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಂಡ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಸಕ ಯುಟಿ ಖಾದರ್ “ಈ ಧ್ವಜ ಶಾಶ್ವತವಾಗಿ ಇರಲಿದೆ. ಈ ಧ್ವಜ ರಾಷ್ಟ್ರದ ಸಂಕೇತವಾಗಿ ಹಾರಾಡಲಿದೆ.

    ಮುಂದಿನ ಪೀಳಿಗೆಗೆ ಮಾರ್ಗ ದರ್ಶನದ ಸಂಕೇತ ಆಗಲಿದೆ. ನಾವು ಅಭಿವೃದ್ಧಿ ಕಡೆ ಒತ್ತು ನೀಡಬೇಕು. ನಮ್ಮ ಮನಸ್ಸಿನಿಂದ ದ್ವೇಷವನ್ನು ಕಿತ್ತು ಎಸೆಯಬೇಕು. ಜಾತಿ ಧರ್ಮ ಬಿಟ್ಟು ಒಗ್ಗಟ್ಟು ಪ್ರದರ್ಶನ ಮಾಡಬೇಕು.


    ಶೈಕ್ಷಣಿಕವಾಗಿ ಕ್ಷೇತ್ರ ಬೆಳೆದಿದೆ. ಶಾಶ್ವತ ಕುಡಿಯುವ ನೀರು ವ್ಯವಸ್ಥೆ ಇಲ್ಲಿ ಆಗಬೇಕಿದೆ. ಅಭಿವೃದ್ಧಿಗೆ ನಗರ, ಗ್ರಾಮ ಪಂಚಾಯತ್ ಒತ್ತು ನೀಡಿ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಕರೆ ನೀಡಿದರು.

    ಕಾರ್ಯಕ್ರಮದ ಪ್ರಯುಕ್ತ ಉಳ್ಳಾಲದಿಂದ ಓವರ್ ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಉತ್ತಮ ರೀತಿಯಲ್ಲಿ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.


    ಕಾರ್ಯಕ್ರಮದಲ್ಲಿ ನಗರ ಸಭೆ ಅಧ್ಯಕ್ಷ ಚಿತ್ರಕಲಾ, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಪೌರಾಯುಕ್ತ ವಿದ್ಯಾ ಕಾಳೆ, ತಹಶೀಲ್ದಾರ್ ಗುರುಪ್ರಸಾದ್, ಗ್ರಾಮಕರಣಿಕ ಪ್ರಮೋದ್, ವಿಧಾನ ಪರಿಷತ್ ಸದಸ್ಯ ಬಿಎಂ ಫಾರೂಕ್, ಚಂದ್ರ ಹಾಸ್ ಪಂಡಿತ್ ಹೌಸ್,

    ಸಂತೋಷ್ ಬೋಳಿಯಾರ್, ಸತೀಶ್ ಕುಂಪಲ, ಪುರುಷೋತ್ತಮ ಕಲ್ಲಾಪು, ಸದಾಶಿವ ಉಳ್ಳಾಲ್, ಬಾಜಿಲ್ ಡಿಸೋಜ, ವಿವಿಧ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು,

    ಸದಸ್ಯರು, ಸಿಬ್ಬಂದಿ, ನಗರ ಸಭೆಯ ಕೌನ್ಸಿಲರ್ ಗಳು, ವಿವಿಧ ಸಂಘಟನೆಗಳ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಅಧ್ಯಾಪಕರು, ಸ್ಥಳೀಯರು ಉಪಸ್ಥಿತರಿದ್ದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending