LATEST NEWS
ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕ್ ಢಿಕ್ಕಿ: ಸಾವು
Published
3 years agoon
By
Adminಕಾಸರಗೋಡು: ರಸ್ತೆ ದಾಟುತ್ತಿದ್ದ ವೇಳೆ ಬಾಲಕನೊಬ್ಬನಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬಾಲಕ ಗೂಡ್ಸ್ ಆಟೊದಡಿಗೆ ಬಿದ್ದು ಮೃತಪಟ್ಟ ಘಟನೆ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಚುಳ್ಳಿಕೆರೆಯ ಬಿಜು ಎಂಬವರ ಪುತ್ರ ಆಶಿಲ್(15) ಮೃತ ಪಟ್ಟ ಬಾಲಕ. ಈತ ಕಳೆದ ರಾತ್ರಿ ಮನೆ ಸಮೀಪದ ಅಂಗಡಿಗೆ ತೆರಳಲು ರಸ್ತೆ ಅಡ್ಡ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆಸೆಯಲ್ಪಟ್ಟ ಆಶಿಲ್ ದೇಹದ ಮೇಲೆ ಗೂಡ್ಸ್ ಆಟೋ ಹರಿದಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ರೂ ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ರಾಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮಂಗಳೂರು : ಬ್ಯಾಡ್ಮಿಂಟನ್ ಕೋರ್ಟ್‌ನಲ್ಲೇ ಕು*ಸಿದುಬಿದ್ದು ವಿದ್ಯಾರ್ಥಿ ಸಾ*ವು
Published
29 minutes agoon
16/01/2025ಮಂಗಳೂರು: ಫ್ರೆಂಡ್ಸ್ ಜೊತೆ ಆಡುತ್ತಿದ್ದ ವೇಳೆ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾ*ವನ್ನಪ್ಪಿದ ಘಟನೆ ಮಂಗಳೂರಿನ ಫಳ್ನೀರ್‌ನಲ್ಲಿ ನಿನ್ನೆ (ಜ.15) ನಡೆದಿದೆ.
ಮೂಲತಃ ಅಡ್ಡೂರಿನ ನಿವಾಸಿಯಾಗಿದ್ದು, ಪ್ರಸ್ತುತ ಅತ್ತಾವರ ಐವರಿ ಟವರ್‌ನಲ್ಲಿ ವಾಸವಿದ್ದ ಶಹೀಮ್ (20) ಮೃ*ತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಇಸನದನೂ ಓದಿ : ಬಾಲಿವುಡ್ ನಟ ಸುದೀಪ್ ಪಾಂಡೆ ವಿಧಿವಶ
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದ ಶಹೀಮ್ ಗೆಳೆಯರೊಂದಿಗೆ ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಕೋರ್ಟ್‌ನಲ್ಲೇ ಕು*ಸಿದು ಬಿ*ದ್ದಿದ್ದಾನೆ. ತಕ್ಷಣವೇ ಅವನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃ*ತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಮಂಗಳೂರು/ಮುಂಬಯಿ : ಮುಂಜಾನೆ 2 ಗಂಟೆ ವೇಳೆ ಮನೆಗೆ ಕಳ್ಳರು ನುಗ್ಗಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾ*ಕುವಿನಿಂದ ಹ*ಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ತಕ್ಷಣವೇ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದ*ರೋಡೆಕೋರರ ವ್ಯಕ್ತಿಯ ವಿರುದ್ಧ ಬಾಂದ್ರಾ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಮುಂಜಾನೆ 2 ಗಂಟೆಗೆ ಸೈಫ್ ಅಲಿಖಾನ್ ಮನೆಗೆ ದ*ರೋಡೆಕೋರರು ಪ್ರವೇಶಿಸಿದ ವೇಳೆ, ಸೈಫ್ ಮತ್ತು ಅಪರಿಚಿತ ವ್ಯಕ್ತಿಗಳ ನಡುವೆ ಮಾ*ರಾಮಾರಿ ನಡೆದಿದೆ. ಬಳಿಕ ಸೈಫ್ ಮೇಲೆ ಹ8ರಿತವಾದ ಆ*ಯುಧದಿಂದ ಹ*ಲ್ಲೆ ಮಾಡಿದ್ದಾನೆ. ದಾ*ಳಿ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಸೈಫ್ ಅವರ ಕುತ್ತಿಗೆಯಲ್ಲಿ 10 ಸೆಂ.ಮೀ ಗಾ*ಯವಾಗಿದ್ದು, ಕೈ ಮತ್ತು ಬೆನ್ನಿಗೂ ಗಾ*ಯವಾಗಿದೆ.
ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಆಲಿ ಖಾನ್ ಮನೆಯಲ್ಲಿ ಮನೆಮಂದಿ ಜೊತೆ ಮಲಗಿದ್ದ ಈ ದುರ್ಘಟನೆ ನಡೆದಿದೆ. ಈ ಸಮಯ ಮನೆಯವರೆಲ್ಲಾ ಎಚ್ಚರಗೊಂಡಿದ್ದು, ಈ ಘಟನೆಯ ತನಿಖೆಗೆ ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆಯ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದೆ. “ಕಳ್ಳರು 2-3 ಬಾರಿ ಹ*ಲ್ಲೆ ಮಾಡಿದ್ದು,ಮುಂಬೈ ಕ್ರೈಮ್ ಬ್ರ್ಯಾಂಚ್ ಈ ಕುರಿತು ತನಿಖೆ ಮಾಡುತ್ತಿದೆ. ನಟನಿಗೆ ಆ*ರು ಗಾಯವಾಗಿದ್ದು, ಎರಡು ಕಡೆ ತುಂಬಾ ಗಂ*ಭೀರ ಗಾ*ಯವಾಗಿದೆ” ಎಂದು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. “ಸೈಫ್ ಆಲಿಖಾನ್‌ನ ಬೆನ್ನಿನ ಭಾಗದಲ್ಲಿ ಕಳ್ಳರು ಚಾ*ಕು ಇ*ರಿದಿದ್ದು, ದೊಡ್ಡ ಗಾ*ಯವೇ ಆಗಿದೆ. ಬೆನ್ನು ಮೂಳೆಗೆ ತೊಂ*ದರೆ ಉಂಟಾಗಿದ್ದು ಶಸ್ತ್ರಚಿಕಿತ್ಸೆಯ ಅಗತ್ಯವಿದೆ” ಎಂದು ವೈದ್ಯರು ತಿಳಿಸಿದ್ದಾರೆ,
LATEST NEWS
ಒಂದೇ ಬಾರಿಗೆ 45 ಮಂದಿ ರೌಡಿ ಶೀಟರ್‌ಗಳು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಿ ಆದೇಶ
Published
49 minutes agoon
16/01/2025By
NEWS DESK3ಮಂಗಳೂರು/ಹುಬ್ಬಳ್ಳಿ : ಹುಬ್ಬಳ್ಳಿ- ಧಾರವಾಡದ 45 ಮಂದಿ ಅಪರಾಧಿಗಳನ್ನು ವಿವಿಧ ಜಿಲ್ಲೆಗೆ ಆರು ತಿಂಗಳ ಕಾಲ ಗಡೀಪಾರು ಮಾಡಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶಿಸಿದ್ದಾರೆ.
ಕೊಲೆ, ಕೊಲೆಯತ್ನ, ಸುಲಿಗೆ, ದರೋಡೆ, ಕಳ್ಳತನ, ಹಲ್ಲೆ, ದೊಂಬಿ, ಮಾನಭಂಗ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದವರನ್ನು ಗುರುತಿಸಿ 45 ಜನರನ್ನು ಬೀದರ್, ಕಲಬುರಗಿ, ಯಾದಗಿರಿ, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಆಮಿಷ; ಇಬ್ಬರು ಆರೋಪಿಗಳ ಸೆರೆ
ಹುಬ್ಬಳ್ಳಿ-ಧಾರವಾಡ ಜಿಲ್ಲೆಯನ್ನು ಅಪರಾಧ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.
ಇನ್ನೂ ಹಲವರನ್ನು ಗಡಿಪಾರು ಮಾಡಲು ಯೋಜಿಸಲಾಗಿದೆ. ಕೆಲವರು ನ್ಯಾಯಾಂಗ ವಶದಲ್ಲಿದ್ದು, ಇನ್ನು ಕೆಲವರು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಮಾಡಿ ಪಟ್ಟಿ ಸಿದ್ದಪಡಿಸಲಾಗುವುದು. ಕೆಲವರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಎನ್. ಶಶಿಕುಮಾರ್ ಮಂಗಳೂರು ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದರು.
LATEST NEWS
ಕರಾವಳಿ ಉತ್ಸವ : ಸಂಗೀತ ರಸಮಂಜರಿ, ಮುಖ್ಯಮಂತ್ರಿ ಆಗಮನ
ಬಾಲಿವುಡ್ ನಟ ಸುದೀಪ್ ಪಾಂಡೆ ವಿಧಿವಶ
ಗುರು ಗೋಪನ್ ಸ್ವಾಮಿಯ ಸಮಾಧಿ ತೆರೆಯಲು ಹೈಕೋರ್ಟ್ ಅಸ್ತು
ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಆಮಿಷ; ಇಬ್ಬರು ಆರೋಪಿಗಳ ಸೆರೆ
ನಾಗಾಸಾಧುಗಳ ಬಗ್ಗೆ ನಿಮಗೆ ಗೊತ್ತಿಲ್ಲದ ಸತ್ಯಾಂಶಗಳು : ಭಾಗ – 2
ರಾಜ್ಯ ಮಟ್ಟದ ತ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದ ದರ್ಬೆ ಬೆಥನಿ ಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ
Trending
- BIG BOSS5 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS6 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS3 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS2 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?