ಬೆಳ್ತಂಗಡಿ: ಎರಡು ಬೈಕುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಬೈಕ್ ಸವಾರನೋರ್ವನ ಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದು ಯುವಕ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಪಾಂಡಿಕಟ್ಟೆ ಎಂಬಲ್ಲಿ ನಿನ್ನೆ ನಡೆದಿದೆ.
ಚಾರ್ಮಾಡಿ ಗ್ರಾಮದ ಮೇಗಿನ ಪೇಟೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ನಝೀರ್ (25) ಸ್ಥಳದಲ್ಲೇ ಮೃತಪಟ್ಟ ಯುವಕ.
ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ನಝೀರ್ ಚಲಾಯಿಸುತ್ತಿದ್ದ ಬೈಕ್‌ಗೆ ಎದುರಿನಿಂದ ಬೈಕ್ ಡಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಬೈಕ್‌ನಿಂದ ರಸ್ತೆಯಲ್ಲೇ ಕೆಳಕ್ಕೆ ಬಿದ್ದ ನಝೀರ್ ಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಚಲಿಸಿದೆ. ಪರಿಣಾಮ ನಝೀರ್ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.