Friday, July 1, 2022

ಹಳೆಯಂಗಡಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್‌ ಢಿಕ್ಕಿ-ಸೊಂಟದ ಮೂಳೆ ಮುರಿತ, ಆಸ್ಪತ್ರೆಗೆ ದಾಖಲು

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯ ಸೊಂಟದ ಮೂಳೆ ಹಾಗೂ ಬಲಗೈ ಮುರಿದ ಘಟನೆ ಮಂಗಳೂರು ಉತ್ತರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡವರನ್ನು ಶಕುಂತಲಾ ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆ
ನಿನ್ನೆ ಬೆಳಗ್ಗೆ 8.45ರ ಸುಮಾರಿಗೆ ಹಳೆಯಂಗಡಿಯ ಖಾಸಗಿ ಬಸ್ಸಿನಲ್ಲಿ ಬಂದು ಬಸ್ ನಿಂದ ಇಳಿದು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ಹೆದ್ದಾರಿಯನ್ನು ದಾಟಲು ರಸ್ತೆಯಲ್ಲಿ ನಡೆದುಕೊಂಡು ಬಂದಿದ್ದು,

ಡಿವೈಡರ್ ಬಳಿ ತಲುಪಿದ ವೇಳೆ ಬೆಳಿಗ್ಗೆ ಮಂಗಳೂರು ಕಡೆಗೆ KA-19-EQ-7313 ನೋಂದಣಿಯ ಬೈಕ್‌ ಸವಾರ ಶಕುಂತಲಾ ಅವರಿಗೆ ಢಿಕ್ಕಿ ಹೊಡೆದಿದ್ದಾನೆ.
ಹೊಡೆತದ ರಭಸಕ್ಕೆ ರಸ್ತೆ ಬಿದ್ದ ಶಕುಂತಲಾ ಸೊಂಟದ ಬಳಿ ಮೂಳೆ ಮುರಿತವಾಗಿದ್ದು ಹಾಗೂ ಬಲ ಕೈ ಮುಂಗೈ ಮುರಿದಿದೆ.

ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...

ಉಡುಪಿ: ಬಾವಿಗೆ ಹಾರಿ ಯುವತಿ ಜೀವಾಂತ್ಯ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ.ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ.ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...