Sunday, May 22, 2022

ಸುರತ್ಕಲ್: ಬೈಕ್‌ಗೆ ಡಿಕ್ಕಿ ಹೊಡೆದ ಕಾರು-ಬೈಕ್ ಸವಾರ ಸ್ಥಳದಲ್ಲೇ ದಾರುಣ ಸಾವು

ಮಂಗಳೂರು: ಬೈಕ್‌ಗೆ ಕಾರು ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ.

ಸ್ಥಳೀಯ ನಿವಾಸಿ ರಮೇಶ್ ಕುಮಾರ್ (ಮೃತ ದುರ್ದೈವಿ).


ಆರೋಪಿ ಕಾರು ಚಾಲಕ ದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಕುಮಾರ್ ಅವರು ಸುರತ್ಕಲ್ ಪೊಲೀಸ್ ಠಾಣಾ‌ವ್ಯಾಪ್ತಿಯ ಗೋವಿಂದ ದಾಸ ವೃತ್ತದ ಬಳಿ ರಾ. ಹೆದ್ದಾರಿಯಿಂದ ಮಹಾಲಿಂಗೇಶ್ವರ‌‌ ಶಾಲೆಯ ಬಳಿ ತನ್ನ ಬೈಕ್ ನಲ್ಲಿ ತೆರಳುತ್ತಿದ್ದರು.

ಈ ವೇಳೆ‌ ಮಂಗಳೂರು ಕಡೆಯಿಂದ ಸುರತ್ಕಲ್ ಕಡೆ ದರ್ಶನ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

ಕಾರು ಚಾಲಕ ಅಜಾಗರೂಕತೆ ಮತ್ತು ಅಪಾಯಕಾರಿಯಾಗಿ ಕಾರು ಚಾಲಾಯಿಸುತ್ತಿದ್ದ ಪರಿಣಾಮ ರಮೇಶ್ ಅವರು ಸಂಚರಿಸುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಿಂದ ರಸ್ತೆಗೆ ಎಸೆಯಲ್ಪಟ್ಟ ರಮೇಶ್ ಅವರನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರು ಪ್ರಯೋಜನವಾಗದೆ ಮೃತ ಪಟ್ಟಿದ್ದಾರೆ.

ಈ ಸಂಬಂಧ ರೋಶನ್ ಪ್ರಸಾದ್ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ‌ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಮೇ.27ರಂದು ಅಭ್ಯರ್ಥಿಗಳಿಗೆ ನೇರ ಸಂದರ್ಶನ

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಮೇ.27ರ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಗಂಟೆಯಿಂದ ಆಯೋಜಿಸಲಾಗಿದೆ.ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ...

ಪುತ್ತೂರು: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಢಿಕ್ಕಿ

ಪುತ್ತೂರು: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಢಿಕ್ಕಿಯಾಗಿ ಕಾರು ಹಾಗೂ ಬಸ್ಸು ಜಖಂಗೊಂಡ ಘಟನೆ ಪುತ್ತೂರು–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.ಇಂದು ಬೆಳಿಗ್ಗೆ 7.30ರ ಸುಮಾರಿಗೆ ಕೋಡಿಂಬಾಡಿಯ ವಿನಾಯಕ ನಗರದ...

ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ ಉದಯ್ ಚೌಟ ಇನ್ನಿಲ್ಲ

ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.ಬಂಟ್ವಾಳ ತಾಲೂಕು ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಉದಯ್ ಚೌಟ ಕಬಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು.ಅಲ್ಲದೇ ದ.ಕ...