ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.
ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.
ಚಿಕ್ಕಮಗಳೂರಿನ ಎಪಿಎಂಸಿ ಬಳಿ ಅಪಘಾತ ಸಂಭವಿಸಿದ್ದು ದಂಟರಮಕ್ಕಿ ನಿವಾಸಿ 28 ವರ್ಷದ ಶ್ರೀಧರ್ ಮತ್ತು ಹಿರೇಮಗಳೂರು ನಿವಾಸಿ 30 ವರ್ಷದ ದಯಾನಂದ ಮೃತ ದುರ್ದೈವಿಗಳು.
ಅಪಘಾತದ ನಂತರ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.