Saturday, September 18, 2021

ಮುಲ್ಕಿ: ಬೈಕ್‌-ಕಾರು ಅಪಘಾತ: ಸವಾರ ಮೃತ್ಯು

ಮುಲ್ಕಿ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬಳ್ಕುಂಜೆ ಉಳೆಪಾಡಿ ಕಡಮ ಎಂಬಲ್ಲಿ ನಡೆದಿದೆ. ಬೈಕ್‌ನಲ್ಲಿದ್ದ ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೃತ ಸವಾರನನ್ನು ಉಳೆಪಾಡಿ ನಿವಾಸಿ ಉಮೇಶ್ ಪೂಜಾರಿ (31) ಎಂದು ಗುರುತಿಸಲಾಗಿದೆ. ಗಾಯಾಳು ಸಹಸವಾರ ಗುರುಪ್ರಸಾದ್ ಜೊತೆ ಪುತ್ತೂರು ಕಡೆಯಿಂದ ಉಡುಪಿ ಜಿಲ್ಲೆಯ ಎಲ್ಲೂರು ಕಡೆಗೆ ಹೋಗುತ್ತಿದ್ದು ಬೈಕ್ ಸವಾರರು ಕರ್ನಿರೆ ಯಿಂದ ಉಳೆಪಾಡಿ ಗೆ ಬರುತ್ತಿದ್ದು ಉಳೆಪಾಡಿ ಕಡಮ ಬಳಿ ಕಾರು-ಬೈಕ್‌ ಮುಖಾಮುಖಿಯಾಗಿ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಉಮೇಶ್ ಪೂಜಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತ ಉಮೇಶ್ ಪೂಜಾರಿ ಕಳೆದ ಕೆಲವರ್ಷಗಳಿಂದ  ಮಸ್ಕತ್ ನಲ್ಲಿ ಕೆಲಸಕ್ಕಿದ್ದು ಕಳೆದ ಕೊರೊನ ಲಾಕ್ಡೌನ್ ಬಳಿಕ ಊರಿಗೆ ಬಂದು ಉಡುಪಿ ಜಿಲ್ಲೆಯ ನಂದಿಕೂರು ಬಳಿ ಮಿತ್ರ ಗುರುಪ್ರಸಾದ್ ಜೊತೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...