ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಮೂಡಂಬೈಲು ನಿವಾಸಿ ಮಿಥುನ್ ಎನ್ನಲಾಗಿದೆ.
ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.