Wednesday, February 8, 2023

ಕಡಬ: ದ್ವಿಚಕ್ರ ವಾಹನಕ್ಕೆ ಅಡ್ಡಬಂದ ನಾಯಿ- ಗಂಭೀರ ಗಾಯಗೊಂಡ ಸಹ ಸವಾರ ಸಾವು

ಕಡಬ: ದ್ವಿಚಕ್ರ ವಾಹನಕ್ಕೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಸಹಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಎಡಮಂಗಲ ಎಂಬಲ್ಲಿ ನಡೆದಿದೆ.
ಮೃತನನ್ನು ಸುರೇಶ್ ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆ
ನ.15 ರಂದು ಕಡಬ ತಾಲೂಕು ಎಡಮಂಗಲ ಗ್ರಾಮದ ಎಡಮಂಗಲ-ಚಾರ್ವಕ ರಸ್ತೆಯಲ್ಲಿ ಎಡಮಂಗಲ ಪೇಟೆಯಿಂದ ಕೊಳಂಬೆ ಎಂಬಲ್ಲಿಗೆ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಕೇರಳ ಮೂಲದ ಸಂತೋಷ್ ಎಂಬವರು ಅವರ ಅಣ್ಣ ಸುರೇಶ್ ಎಂಬವರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿದ್ದರು.

ಈ ಸಂದರ್ಭ ಎಡಮಂಗಲದಲ್ಲಿ ಸ್ಕೂಟರ್ಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಸವಾರ ಸಂತೋಷನ ಹತೋಟಿ ತಪ್ಪಿ ಮಗುಚಿ ಬಿದ್ದಿದೆ. ಅಪಘಾತದ ರಭಸಕ್ಕೆ ಸಹ ಸವಾರನಾಗಿದ್ದ ಸುರೇಶ ತಲೆಗೆ ಗಂಭೀರ ಗಾಯಗೊಂಡಿದ್ದನು.

ಗಾಯಾಳುವನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ, ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here

Hot Topics