ಬೆಳ್ತಂಗಡಿ: ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ನಡೆದಿದೆ.
ಘಟನೆಯಲ್ಲಿ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್ (42) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಇವರು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಸಮೀಪ ಹೋಟೆಲ್ ನಡೆಸುತ್ತಿದ್ದು, ಧರ್ಮಸ್ಥಳದಲ್ಲಿ ವಾಸವಾಗಿದ್ದರು.
ಮುಂಜಾನೆ ಧರ್ಮಸ್ಥಳ ಕಡೆಯಿಂದ ಸ್ನಾನಘಟ್ಟ ಬರುವ ಮಾರ್ಗ ಮಧ್ಯ ರಸ್ತೆಗೆ ಬಿದ್ದ ಮರವನ್ನು ಗಮನಿಸಿದೆ ಬೈಕ್ ಢಿಕ್ಕಿಯಾಗಿದೆ. ತಕ್ಷಣ ರಸ್ತೆಗೆ ಎಸೆಯಲ್ಪಟ್ಟ ಅವರು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಹೆಲ್ಮೆಟ್ ಧರಿಸದೇ ಇರುವುದರಿಂದ ಅಪಘಾತ ತೀವ್ರತೆ ಹೆಚ್ಚಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಉಪನಿರೀಕ್ಷಕ ಓಡಿಯಪ್ಪ ಗೌಡ ಮತ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ.