ಉಡುಪಿ: ಪಾದಚಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಗಾಯಾಳು ಪಾದಚಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳದ ಘಟನೆ ಉಡುಪಿ ಜಿಲ್ಲೆಯ ಕಾಪು ಎರ್ಮಾಳುವಿನ ಕಲ್ಯಾಣ ಹೋಟೆಲ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತ್ತ ವ್ಯಕ್ತಿಯನ್ನು ಉತ್ತರ ಕನ್ನಡ ಮೂಲದ ದೇವಪ್ಪ (46) ಎಂದು ಗುರುತಿಸಲಾಗಿದೆ.
ತೀವ್ರ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ 12 ಗಂಟೆಗೆ ಮೃತ್ತ ಪಟ್ಟಿದ್ದಾಗಿ ಪೊಲೀಸ್ ಮೂಲ ತಿಳಿಸಿದೆ.
ಬೈಕ್ ಸವಾರರು ಗಾಯಗೊಂಡಿದ್ದು ಅವರು ಕೂಡ ಉಡುಪಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.