Sunday, November 27, 2022

ನಾರಾವಿ ಅರಸಿಕಟ್ಟೆ ಬಳಿ ಮರಕ್ಕೆ ಬೈಕ್ ಡಿಕ್ಕಿ : ಸವಾರ ಸಾವು..!

ಬೆಳ್ತಂಗಡಿ : ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಸಂಭವಿಸಿದೆ.

ಮಂಗಳವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.

ಮೃತ ಪಟ್ಟ ವ್ಯಕ್ತಿ ನಾರಾವಿಯ ಅರಸಿಕಟ್ಟೆ ನಿವಾಸಿ ಸಂತೋಷ್ (23) ಎಂದು ಗುರುತಿಸಲಾಗಿದೆ.

ಮನೆಯಿಂದ  ಅನಾತಿ ದೂರದಲ್ಲಿದ್ದ ಅಂಗಡಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಸಂತೋಷನ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಬೈಕ್ ಗುದ್ದಿದ ರಭಸಕ್ಕೆ ಅನಾತಿ ದೂರಕ್ಕೆ ಎಸೆಯಲ್ಪಟ್ಟ ಸಂತೋಷ ಗಂಭೀರ ಗಾಯಗೊಂಡಿದ್ದ.

ಅಲ್ಲೇ ಹತ್ತಿರವಿದ್ದ ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿ ಚಿಕಿತ್ಸೆಗೆಂದು ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಸಂತೋಷ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವನ್ನು ಇಡಲಾಗಿದ್ದು ಈ ಬಗ್ಗೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. .

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ವಿಶ್ವದಲ್ಲೇ ಬೃಹತ್ ಗಾತ್ರದ ಮೂತ್ರಕೋಶದ ಕಲ್ಲು ಹೊರತೆಗೆದ ಮಣಿಪಾಲ ವೈದ್ಯರು..!

ಉಡುಪಿ: ವ್ಯಕ್ತಿಯೋರ್ವರ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಿ ಹೊರೆ ತೆಗೆದಿರುವ ಘಟನೆ ನಡೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...