Connect with us

KADABA

ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಬೈಕ್: ಸವಾರ ಸಾವು

Published

on

ಕಡಬ : ಅತಿ ವೇಗದಿಂದ ಚಾಲನೆ ಮಾಡಿದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಕಲ್ಲುಗುಡ್ಡೆ ವಿಶ್ವನಾಥ ಎಂಬವರ ಏಕೈಕ ಪುತ್ರ ಆಶೀಶ್‌(16) ಎಂಬಾತ ಸಾವನ್ನಪ್ಪಿದ್ದಾನೆ.

 

ಕಡಬದ ಪೇರಡ್ಕ ಬಳಿ ಈ ದುರಂತ ನಡೆದಿದ್ದು, ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಆಶೀಶ್‌ ಪೇರಡ್ಕ ಸಾಂತೋಮ್ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದ.

ಈತ ಶಾಲೆಗೆ ಬರುವಾಗಲೂ ಬೈಕ್ ಹಿಡಿದುಕೊಂಡೇ ಬರುತ್ತಿದ್ದು, ಅದರಂತೆ ಇಂದು ಕೂಡಾ ಶಾಲೆಗೆ ಬರುವಾಗ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬಂದಾಗ ನಿಯಂತ್ರಣ ತಪ್ಪಿದ ಬೈಕ್‌ ಮೋರಿಗೆ ಬಡಿದು ದುರಂತ ಸಂಭವಿಸಿದೆ.

ಇದನ್ನೂ ಓದಿ: ರಾಷ್ಟ್ರಿಯ ಹೆದ್ದಾರಿ 66ರ ಕಿನ್ನಿಮುಲ್ಕಿಯಲ್ಲಿ ಟ್ಯಾಂಕರ್ ವಾಹನ ಪಲ್ಟಿ

ಕಡಬದಲ್ಲಿ ಮಿತಿಮೀರಿದ ವಿದ್ಯಾರ್ಥಿಗಳ ಅತಿ ವೇಗದ ಬೈಕ್ ಸವಾರಿಯಿಂದ ನಿರಂತರ ದುರಂತಗಳಾಗುತ್ತಿವೆ. ವಿದ್ಯಾರ್ಥಿಗಳ ವಾಹನ ತಪಾಸಣೆ ಮಾಡದಿರುವ ಪೊಲೀಸರ ವಿರುದ್ಧ ಇಲ್ಲಿನ ಸಾರ್ವಜನಿಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

KADABA

ಆತ್ಮಹತ್ಯೆಗೆ ಯತ್ನಿಸಿದ ಕಳ್ಳ ಈಗ ಪೊಲೀಸರ ಅತಿಥಿ

Published

on

ಕಡಬ : ಪಕ್ಕದ ಮನೆಯಿಂದ ಹಣ ಮತ್ತು ಚಿನ್ನ ಕದ್ದು, ಆ ಹಣದಿಂದ ಸಾಲ ತೀರಿಸಿದ ಬಳಿಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಕಳ್ಳನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಅಂದ ಹಾಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಕಡಬ ತಾಲೂಕಿನ ಮರ್ದಾಳದ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಕಳೆದ ರವಿವಾರ ಅಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ್ ಅವರು ಪತ್ನಿ ಮತ್ತು ಮಗನೊಂದಿಗೆ ಮನೆಗೆ ಬೀಗ ಹಾಕಿ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದ ವೇಳೆ ಅವರ ಮನೆಯ ಬಾಗಿಲು ಮುರಿದು ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು.

ಪ್ರಕರಣದ ಬೆನ್ನತ್ತಿದ ಕಡಬ ಪೊಲೀಸರು ಮಹತ್ವದ ಸುಳಿವುಗಳ ಆಧಾರದಲ್ಲಿಕಳ್ಳತನ ಆಗಿರುವ ಮನೆಯಿಂದ ಕೂಗಳತೆ ದೂರದಲ್ಲಿರುವ ಮನೆಯ ಯುವಕ ಬಜಕರೆಯ ಸಿನು ಕುರಿಯನ್ ಎಂಬಾತನನ್ನು ಬುಧವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಬೈಕ್ ನಲ್ಲಿ ಬಂದು ಕೊಟ್ಟಿಗೆಯಿಂದ ಪಿಕ್ಕಾಸು ತಂದು ಬಾಗಿಲು ಮುರಿದು ಕಳ್ಳತನ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ.

ಸಾಲದ ಸುಳಿಯಲ್ಲಿ ಸಿಲುಕಿದ ಕಾರಣ ಕಳ್ಳತನ ಮಾಡಿರುವುದಾಗಿ ಆತ ತಿಳಿಸಿದ್ದನು. ಕಡಬದ ಟೆಕ್ಸ್ ಟೈಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆತನ ಬಳಿಯಿಂದ ಸದ್ಯ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳ್ಳತನ ಮಾಡಿರುವ ಹಣದಲ್ಲಿ ಸಾಲವನ್ನು ತೀರಿಸಿ ಉಳಿದ ಹಣವನ್ನು ಸಿನು ಕುರಿಯನ್ ತನ್ನ ಬಳಿಯೇ ಇಟ್ಟುಕೊಂಡಿದ್ದ.

ಇದನ್ನೂ ಓದಿ: 14 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಕಳ್ಳ

ಇದೀಗ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳ್ಳತನ ಮಾಡಿದ ಬಳಿಕ ಪೊಲೀಸರಿಗೆ ಸಿಕ್ಕಿಬೀಳುವ ಹಿನ್ನೆಲೆಯಲ್ಲಿ ಸಿನು ಕುರಿಯನ್ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಆತ ರೈಲು ಹಳಿಯತ್ತ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಹೋಗಿದ್ದ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

ಆದರೆ ಈ ವಿಚಾರವನ್ನು ಪೊಲೀಸರು ಇದನ್ನು ಖಚಿತ ಪಡಿಸಿಲ್ಲ. ಒಂದು ವೇಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಈ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

Continue Reading

DAKSHINA KANNADA

ಕಡಬ: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ

Published

on

ಕಡಬ : ತುರ್ತು ಸಂದರ್ಭಗಳಲ್ಲಿ ಜನರ ಆರೋಗ್ಯ ಕಾಪಾಡಿ ನೂರಾರು ಜನರಿಗೆ ಆಪತ್ವಾಂಧವನಾಗಿದ್ದ ಕಡಬದ 108 ಆ್ಯಂಬುಲೆನ್ಸ್ ವಾಹನ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾಗಿ ಕಳೆದೊಂದು ತಿಂಗಳಿನಿಂದ ಮೂಲೆಗುಂಪಾಗಿದೆ.

ತುರ್ತು ಸೇವೆಗಳಿಗೆ ಪಕ್ಕದ ಊರುಗಳ ವಾಹನವನ್ನು ಆಶ್ರಯಿಸಬೇಕಾದ ಸಂದಿಗ್ಧತೆಯನ್ನು ಕಡಬದ ಜನತೆ ಅನುಭವಿಸುತ್ತಿದ್ದಾರೆ.

ನಿರಂತರ ಓಡಾಟದಿಂದಾಗಿ ವಾಹನದ ಟಯರ್ ಗಳು ಸಂಪೂರ್ಣವಾಗಿ ಸವೆದಿದ್ದು, ಹೊಸ ಟಯರ್ ಅಳವಡಿಸಬೇಕೆನ್ನುವ ಬೇಡಿಕೆ ಇನ್ನೂ ಈಡೇರಿಲ್ಲ. ಅದರಿಂದಾಗಿ ವಾಹನ ಮೂಲೆ ಸೇರಿದ್ದು ಜನರು ಸೇವೆಯಿಂದ ವಂಚಿತರಾಗಿದ್ದಾರೆ.

ಕಡಬ ತಾಲೂಕನ್ನು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿದ್ದ ಆ್ಯಂಬುಲೆನ್ಸ್ ನಲ್ಲಿ ಈ ಹಿಂದೆಯೂ ಟಯರ್ ಸಮಸ್ಯೆ ಎದುರಾಗಿ ವಾರಗಟ್ಟಲೆ ಮೂಲೆಗೆ ಸರಿದು ನಿಂತಾಗ ಮಾಧ್ಯಮ ವರದಿ ಪ್ರಕಟಿಸಿ ಸಂಬಂಧಪಟ್ಟವರನ್ನು ಎಚ್ಚರಿಸಿದ ಪರಿಣಾಮ ಹೊಸ ಟಯರ್‌ಗಳನ್ನು ಅಳವಡಿಸಲಾಗಿತ್ತು.

2024 ಎಪ್ರಿಲ್‌ನಲ್ಲಿ ಕಡಬಕ್ಕೆ ಅತ್ಯಾಧುನಿಕ ವೆಂಟಿಲೇಟರ್ ಇರುವ ಹೊಸ ಆ್ಯಂಬುಲೆನ್ಸ್‌ ವಾಹನವನ್ನು ನೀಡಲಾಗಿದ್ದು, ಸುಮಾರು 40 ಸಾವಿರಕ್ಕೂ ಅಧಿಕ ಕಿಲೋಮೀಟರ್ ಓಡಿದ್ದರಿಂದಾಗಿ ಟಯರ್ ಸವೆದಿದೆ. ಟಯರ್ ಬದಲಾವಣೆ ಮಾಡದ ಕಾರಣ 2024 ಡಿಸೆಂಬರ್ 06 ರಿಂದ ಆ್ಯಂಬುಲೆನ್ಸ್ ಅನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿ ನಿಲ್ಲಿಸಲಾಗಿದೆ.

ಇದನ್ನೂ ಓದಿ: 19 ವರ್ಷದಿಂದ ತಲೆ ಮರೆಸಿಕೊಂಡಿದ್ದ ಸೇನಾ ಸಿಬ್ಬಂದಿ..! AI ತಂತ್ರಜ್ಞಾನದಿಂದ ಅಂದರ್..!

ಇದೀಗ ತುರ್ತು ಸಂದರ್ಭದಲ್ಲಿ ಪಕ್ಕದ ಆಲಂಕಾರು, ಬೆಳ್ಳಾರೆ, ಶಿರಾಡಿ, ಸುಬ್ರಹ್ಮಣ್ಯದಿಂದ ಆ್ಯಂಬುಲೆನ್ಸ್ ಬರುವವರೆಗೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಡಬದಲ್ಲಿ ಈಗಾಗಲೇ ಅತ್ಯಾಧುನಿಕ ಸುಸಜ್ಜಿತ ಸಮುದಾಯ ಆಸ್ಪತ್ರೆ ನಿರ್ಮಿಸಲಾಗಿದ್ದರೂ, ಖಾಯಂ ವೈದ್ಯರ ಕೊರತೆಯಿಂದಾಗಿ ತುರ್ತು ಸಂದರ್ಭದಲ್ಲಿ ಪುತ್ತೂರು ಅಥವಾ ಮಂಗಳೂರಿನ ಆಸ್ಪತ್ರೆಯನ್ನು ಅವಲಂಬಿಸ ಬೇಕಾಗಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆ್ಯಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ವಾಹನಕ್ಕೆ ಹೊಸ ಟಯರ್ ಗಳನ್ನು ಅಳವಡಿಸುವ ಮೂಲಕ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಲು ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಇಲ್ಲಿನ 108 ವಾಹನದ ಸಿಬ್ಬಂದಿಯನ್ನು ಪಕ್ಕದ ಸುಳ್ಯ, ಬೆಳ್ಳಾರೆ, ಶಿರಾಡಿ, ಆಲಂಕಾರು, ಕೊಕ್ಕಡದ ಆ್ಯಂಬುಲೆನ್ಸ್ ಗಳಿಗೆ ನಿಯೋಜಿಸಲಾಗಿದ್ದು, ಕಳೆದೊಂದು ವಾರದಿಂದ ಸುಳ್ಯದ ಆ್ಯಂಬ್ಯುಲೆನ್ಸ್ ಸಂಚಾರವನ್ನು ಕೂಡಾ ಟಯರ್ ಸವೆದ ಕಾರಣಕ್ಕೆ ಸ್ಥಗಿತಗೊಳಿಸಲಾಗಿದೆ.

 

Continue Reading

DAKSHINA KANNADA

ತಿರುವು ಪಡೆದ ನಾ*ಪತ್ತೆ ಪ್ರಕರಣ..! ಕೊ*ಲೆಯಾದ ಸ್ಥಿತಿಯಲ್ಲಿ ಮೃ*ತ*ದೇಹ ಪತ್ತೆ..!

Published

on

ಮಂಗಳೂರು : ನವೆಂಬರ್ 27 ರಂದು ನಾಪತ್ತೆಯಾಗಿದ್ದ ಬಿಳಿನೆಲೆಯ ಸಂದೀಪ್ ಎಂಬ ಯುವಕನ ಮೃ*ತ ದೇಹ ಪತ್ತೆಯಾಗಿದೆ. ನಾಪತ್ತೆಯಾಗಿ ವಾರಗಳ ಬಳಿಕ ಗ್ರಾಮಸ್ಥರ ಒತ್ತಡಕ್ಕೆ ಮಣಿದ ಪೊಲೀಸರು ತನಿಖೆ ಆರಂಭಿಸಿ ಪ್ರಕರಣವನ್ನು ಬೇಧಿಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಈ ಪ್ರಕರಣದ ದೂರು ಸ್ವೀಕರಿಸಲು ಪೊಲೀಸರು ಮುಂದಾಗಿರಲಿಲ್ಲ. ಬಳಿಕ ರಾತೋರಾತ್ರಿ ಗ್ರಾಮಸ್ಥರು ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ ಬಳಿಕ ಶಂಕಿತ ಆ*ರೋಪಿಯನ್ನು ವಶಕ್ಕೆ ಪಡೆಯಲಾಗಿತ್ತು.

                        ಆ*ರೋಪಿ ಪ್ರತೀಕ್‌

ಡಿಸೆಂಬರ್ 2 ರಂದು ಗ್ರಾಮಸ್ಥರ ಜೊತೆ ಠಾಣೆಗೆ ಆಗಮಿಸಿದ ಬಿಜೆಪಿ ನಾಯಕರು ತನಿಕೆಗೆ ಪೊಲೀಸರನ್ನು ಒತ್ತಾಯಿಸಿದ್ದರು. ಶಂಕಿತ ಆ*ರೋಪಿಯಾಗಿದ್ದ ಪ್ರತೀಕ್ ಎಂಬಾತನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಕೊ*ಲೆ ರಹಸ್ಯ ಬಯಲಾಗಿದೆ. ಬಳಿಕ ಆ*ರೋಪಿಯನ್ನು ಘಟನಾ ಸ್ಥಳಕ್ಕೆ ಕರೆದೊಯ್ದ ಪೊಲೀಸರು ಸಂದೀಪ್ ಮೃ*ತದೇಹ ಪತ್ತೆ ಹಚ್ಚಿದ್ದಾರೆ. ಕಡಬ ಸುಬ್ರಹ್ಮಣ್ಯ ರಸ್ತೆಯ ನಾರಡ್ಕ ಎಂಬ ಪ್ರದೇಶದಲ್ಲಿ ಸಂದೀಪ್‌ ಮೃ*ತದೇಹ ಪತ್ತೆಯಾಗಿದೆ. ಸಂದೀಪ್‌ನನ್ನು ಹ*ತ್ಯೆ ಮಾಡಿದ್ದ ಪ್ರತೀಕ್ ಪೆಟ್ರೋಲ್ ಸುರಿದು ಮೃ*ತದೇಹಕ್ಕೆ ಬೆಂಕಿ ಹಚ್ಚಿದ್ದ ಎಂಬುದು ಗೊತ್ತಾಗಿದೆ.

                         ಮೃ*ತ ಸಂದೀಪ್

 

ಮಳೆಯ ನಡುವೆಯೂ ಹ*ತ್ಯೆ ನಡೆದ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದು, ಇದರಲ್ಲಿ ಇನ್ನೂ ಅನೇಕ ಆ*ರೋಪಿಗಳು ಇರುವ ಶಂಕೆ ವ್ಯಕ್ತಪಡಿಸಿದ್ದಾರೆ. ಇದೊಂದು ಗಾಂ*ಜಾ ಅಮಲಿನಲ್ಲಿ ಅಥವಾ ಗಾಂ*ಜಾ ವ್ಯವಹಾರದಲ್ಲಿ ನಡೆದ ಕೊ*ಲೆಯಾಗಿರಬಹದು ಎಂದು ಆರೋಪ ಕೇಳಿ ಬಂದಿದೆ.

Continue Reading

LATEST NEWS

Trending

Exit mobile version