BELTHANGADY
ಇಂಥಾ ಶೋಕಿ ಬೇಕಾ: ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕದ್ದು ಕಪಲ್ ಜ್ವಾಲಿ ರೈಡ್..!
ಧರ್ಮಸ್ಥಳ: ನಿಲ್ಲಿಸಲಾಗಿದ್ದ ಬೈಕ್‌ವೊಂದನ್ನು ಕಳವು ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಧರ್ಮಸ್ಥಳದ ದ್ವಾರದಲ್ಲಿ ನಡೆದಿದೆ.
ಧರ್ಮಸ್ಥಳ ದ್ವಾರದ ಬಳಿ ನಿಲ್ಲಿಸಿದ್ದ ಬೈಕ್ ನ್ನು ಓರ್ವ ಯುವಕ ಹಾಗು ಯುವತಿ ಸೇರಿ ಕಳವು ಮಾಡಿದ್ದಾರೆ ಎನ್ನಲಾಗಿದೆ.
ಇಲ್ಲಿನ ಬೆಳ್ತಂಗಡಿ ನಿವಾಸಿಯಾಗಿರುವ ಗ್ರಾಮದ ಜೀವನ್ ಎಂಬ ವಿದ್ಯಾರ್ಥಿ ಧರ್ಮಸ್ಥಳ ದ್ವಾರದ ಬಳಿ ಬೈಕ್ ಪಾರ್ಕ್ ಮಾಡಿ ಹೋದ ವೇಳೆ ಓರ್ವ ಯುವಕ, ಯುವತಿಯನ್ನು ಕರೆದುಕೊಂಡು ಆ ಬೈಕ್ ಮೂಲಕ ಕುದ್ರಾಯ ಮೂಲಕ ಕೊಕ್ಕಡ ರಸ್ತೆಯಾಗಿ ಸಾಗಿರುವಂತಹ ದೃಶ್ಯ ಸ್ಥಳೀಯ ಕಟ್ಟಡದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು- ಕಳ್ಳ ಅರೆಸ್ಟ್..!
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ನಿವಾಸಿ ಉಮೇಶ್ ಬಳೇಗಾರ್(47) ಬಂಧಿತ ಆರೋಪಿ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜಿತ್ ನಗರ ಕೆಲ್ಲೆ ನಿವಾಸಿ ಫೆಲಿಕ್ಸ್ ರೋಡ್ರಿಗಸ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯ ಬಾಗಿಲು ಮುರಿದು ನುಗ್ಗಿ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಆಗಿದೆ.
ಈ ಕೂಡಲೇ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ಆರೋಪಿ ವಿರುದ್ಧ ತಮಿಳುನಾಡು, ಕೇರಳದ ವಿವಿಧ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಿಸಲಾಗಿದೆ.
ಅಲ್ಲದೆ ಕರ್ನಾಟಕದ ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದ್ರೆ ಠಾಣೆಯಲ್ಲಿಯೂ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ.
ಈತನಿಗಾಗಿ ಮೂರೂ ರಾಜ್ಯಗಳ ಪೊಲೀಸರು ಹುಡುಕಾಟ ನಡೆಸುತ್ತಿರುವಾಗಲೇ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈತನಿಂದ ಕಳ್ಳತನ ಮಾಡಲಾದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
BELTHANGADY
ಚಾರ್ಮಾಡಿ ಘಾಟ್ ನಲ್ಲಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಲಾರಿ..!
ನೀರಿನ ಬಾಟಲ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಸೆ.15ರಂದು ನಡೆದಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಚಾರ್ಮಾಡಿ: ನೀರಿನ ಬಾಟಲ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಸೆ.15ರಂದು ನಡೆದಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ತುಂಬಿದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದಾಗಿ ಚಾಲಕನಿಗೆ ದಾರಿ ಕಾಣದೆ ಪ್ರಪಾತಕ್ಕೆ ಬಿದ್ದಿದೆ.
ಲಾರಿ ಮೊದಲು ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ನೂರು ಅಡಿ ಪ್ರಪಾತಕ್ಕೆ ಉರುಳಿದೆ.
ಈ ಸಂದರ್ಭದಲ್ಲಿ ಅಲ್ಲಿ ಇದ್ದ ಮರವೊಂದಕ್ಕೆ ಲಾರಿ ಸಿಲುಕಿಕೊಂಡ ಪರಿಣಾಮ ಸಂಭವನೀಯ ಅವಘಡ ತಪ್ಪಿದೆ ಹಾಗೂ ಈ ಮರ ಇಬ್ಬರ ಪ್ರಾಣ ಉಳಿಸಿದೆ.
ಒಂದು ವೇಳೆ ಲಾರಿ ಮರಕ್ಕೆ ಸಿಕ್ಕಿಕೊಳ್ಳದಿದ್ದಲ್ಲಿ ಸಾವಿರ ಅಡಿ ಪ್ರಪಾತಕ್ಕೆ ಹೋಗಿ ಬೀಳುವ ಸಾಧ್ಯತೆ ಇತ್ತು ಎನ್ನಲಾಗಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ಭಾಸ್ಕರ ನಾಯ್ಕ ಹಲ್ಲೆ ಪ್ರಕರಣ:ತಿಮರೋಡಿ ಮತ್ತವರ ಸಂಗಡಿರನ್ನು ಬಂಧಿಸಲು ಆಗ್ರಹ
ಮಂಗಳೂರು : ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪಾಣಿಯಾಲ್ ಎಂಬಲ್ಲಿ ದಲಿತ ಸಮುದಾಯದ ನಿವಾಸಿ ಭಾಸ್ಕರ ನಾಯ್ಕ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರನ್ನು ಕೂಡಲೇ ಬಂಧಿಸ ಬೇಕೆಂದು ಭಾಸ್ಕರ ನಾಯ್ಕ ಅವರ ಪತ್ನಿ ಮಮತಾ, ಮಕ್ಕಳಾದ ವೈಷ್ಣವಿ, ವೈಭವಿ ಅವರು ಒತ್ತಾಯಿಸಿದ್ದಾರೆ.
ಮಮತಾ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ನನ್ನ ಗಂಡ ಭಾಸ್ಕರ ನಾಯ್ಕ ಅವರು ಸೆ. 2 ರಂದು ಖಾಸಗಿ ಮಾಧ್ಯಮವೊಂದರಲ್ಲಿ ವಿವರಣೆ ನೀಡಿ ಮರಳಿ ಹೋಗುತ್ತಿದ್ದಾಗ ಪಾಣಿಯಾಲ್ ಬಳಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರು ಕಾರನ್ನು ತಡೆದು ಹೊರಕ್ಕೆಳೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ನಾನು ಮಕ್ಕಳ ಜತೆ ಸ್ಥಳಕ್ಕೆ ತೆರಳಿ ಬಿಡಿಸಲು ಯತ್ನಿಸಿದಾಗ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ನನ್ನ ಗಂಡನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದೇನೆ ಹಾಗೂ ಮಹೇಶ್ ತಿಮರೋಡಿ ಮತ್ತು ತಂಡದ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ್ದೇನೆ. ಈ ಸಂದರ್ಭದಲ್ಲಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಲಾಗಿತ್ತು. ಆದರೆ ಬಂಧಿಸಿರಲಿಲ್ಲ್ಲ. ಬಳಿಕ ಪೆರ್ಮುದೆ ಬಳಿ ಬಹಿರಂಗ ಸಭೆಯಲ್ಲಿ ತಿಮರೋಡಿ ಭಾಗವಹಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದಾಗ ನಾನು ಕೂಡಲೇ ಎಸ್.ಪಿ. ಅವರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದೇನೆ ಎಂದರು.
ಎಸ್.ಪಿ. ಅವರು ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದರು. ಆದರೆ ಬಂಧಿಸಿಲ್ಲ. ಮತ್ತೊಮ್ಮೆ ಎಸ್.ಪಿ. ಆವರಿಗೆ ಮನವಿ ಮಾಡಿದ್ದೇನೆ. ಇದುವರೆಗೆ ಏನೂ ಕ್ರಮ ಆಗಿಲ್ಲ. ಇದೀಗ ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಒದಗಿಸ ಬೇಕು. ಗಂಡ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರ ಆರೋಗ್ಯವನ್ನು ನಾನು ನೋಡಿಕೊಳ್ಳುತ್ತಿದ್ದೇನೆ. ಮಕ್ಕಳು ಕೂಡಾ ಶಾಲೆಗೆ ಹೋಗದೆ ನನ್ನ ಜತೆ ಇದ್ದಾರೆ. ಆದ್ದರಿಂದ ಆರೋಪಿಗಳನ್ನು ಕೂಡಲೇ ಬಂಧಿಸ ಬೇಕು ಎಂದು ಒತ್ತಾಯಿಸಿದ್ದಾರೆ.