ಚಿಕ್ಕಬಳ್ಳಾಪುರ: ಮಾರಕಾಸ್ತ್ರಗಳಿಂದ ಹಲ್ಲೆಗೈದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಆದಿಗಾನಹಳ್ಳಿ ಗ್ರಾಮದ ಶ್ರೀನಿವಾಸ್(38) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬಾಗೇಪಲ್ಲಿ ಟೋಲ್ ಪ್ಲಾಜಾ ಬಳಿಯ ವೇಬ್ರಿಡ್ಜ್‍ನಲ್ಲಿ ಕೆಲಸ ಮಾಡುತ್ತಿದ್ದು ಪಾಳಿ ಮುಗಿಸಿ ಮನೆಗೆ ತೆರಳುವ ವೇಳೆ ಆದಿಗಾನಹಳ್ಳಿ ಕ್ರಾಸ್ ಬಳಿ ಬೈಕ್ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಶ್ರೀನಿವಾಸ್ ತಲೆಗೆ ಬಲವಾಗಿ ಹೊಡೆದಿದ್ದಾರೆ.
ಈ ವೇಳೆ ಬೈಕ್‍ನಿಂದ ಕೆಳಗೆ ಬಿದ್ದ ಶ್ರೀನಿವಾಸ್ ನಡು ರಸ್ತೆಯಲ್ಲೇ ಮೃತಪಟ್ಟಿದ್ದಾನೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಹಾಗೂ ಚಿಕ್ಕಬಳ್ಳಾಪುರ ಡಿವೈಎಸ್‍ಪಿ ವಾಸುದೇವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೇಲ್ನೋಟಕ್ಕೆ ಅನೈತಿಕ ಸಂಬಂಧದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕೊಲೆಗಾರರಿಗೆ ಪೊಲೀಸರು ಬಲೆ ಬೀಸಿದ್ದಾರೆ.