Connect with us

    DAKSHINA KANNADA

    mangaluru : ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು..!

    Published

    on

    ಬೈಕ್ ಸ್ಕಿಡ್ ಆಗಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಅಡ್ಯಾರಿನ ರಾಷ್ಟ್ರೀಯ ಹೆದ್ದಾರಿಯ 73 ರಲ್ಲಿ ಜು.19ರಂದು  ನಡೆದಿದೆ.

    ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಅಡ್ಯಾರಿನ ರಾಷ್ಟ್ರೀಯ ಹೆದ್ದಾರಿಯ 73 ರಲ್ಲಿ ಜು.19ರಂದು  ನಡೆದಿದೆ.

    ಸಹ್ಯಾದ್ರಿ ಕಾಲೇಜು ಮುಂಭಾಗ ಈ ಅವಘಡ ಸಂಭವಿಸಿದೆ.

    ನಗರದ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯಾಗಿರುವ ಕೇರಳ ಮೂಲದ ಮಹಮ್ಮದ್ ನಶತ್ (21) ಎಂಬಾತ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಯಾಗಿದ್ದಾನೆ.

    ಇಂದು ಬೆಳಗ್ಗೆ ಸುಮಾರು 11.40ಕ್ಕೆ ಕಾಲೇಜಿಗೆ‌ ಹೋಗುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

    ಅತಿ ವೇಗದಲ್ಲಿದ್ದ ಬೈಕ್ ಡಿವೈಡರ್ ಗೆ ಬಡಿದು ಯುವಕ ಹಾಗೂ ಬೈಕ್ ಮೇಲಕ್ಕೆ ಎಸೆಯಲ್ಪಟ್ಟಿದ್ದು, ಈ ದೃಶ್ಯ ರಸ್ತೆ ಬದಿ  ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ಅಪಘಾತದಲ್ಲಿ ಯುವಕನ ತಲೆ ವಿದ್ಯುತ್ ಕಂಬಕ್ಕೆ ಬಡಿದು, ತಲೆ ಛಿದ್ರಗೊಂಡು, ಆತ ಸ್ಥಳದಲ್ಲೇ ಸಾವನ್ನಪಿದ್ದಾನೆ ಎಂದು ತಿಳಿದು ಬಂದಿದೆ.

    DAKSHINA KANNADA

    ಶ್ರೀಮತಿ ಶೆಟ್ಟಿ ಭೀಕರ ಕೊ*ಲೆ ಪ್ರಕರಣ : ಮೂವರ ಅಪರಾಧ ಸಾಬೀತು

    Published

    on

    ಮಂಗಳೂರು : ಐದು ವರ್ಷಗಳ ಹಿಂದೆ ಮಂಗಳೂರು ನಗರವನ್ನೇ ಬೆಚ್ಚಿ ಬೀಳಿಸಿದ್ದ ಶ್ರೀಮತಿ ಶೆಟ್ಟಿ ಕೊ*ಲೆ ಪ್ರಕರಣದ ಮೂವರು ಆರೋಪಿಗಳ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌. ಅವರು ಶುಕ್ರವಾರ ತೀರ್ಪು ನೀಡಿದ್ದಾರೆ.

    ಮಂಗಳೂರಿನ ವೆಲೆನ್ಸಿಯಾ ಸಮೀಪದ ಸೂಟರ್‌ಪೇಟೆಯ ಜೋನಸ್‌ ಸ್ಯಾಮ್ಸನ್‌ ಯಾನೆ ಜೋನಸ್‌ ಜೌಲಿನ್‌ ಸ್ಯಾಮ್ಸನ್‌ (40), ವಿಕ್ಟೋರಿಯಾ ಮಥಾಯಿಸ್‌ (47) ಮತ್ತು ಮರಕಡ ತಾರಿಪಾಡಿ ಗುಡ್ಡೆಯ ರಾಜು (34) ಈ ಪ್ರಕರಣದ ಅಪರಾಧಿಗಳು. ಈ ಪೈಕಿ ರಾಜು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಆತನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜೋನಸ್‌ ಮತ್ತು ವಿಕ್ಟೋರಿಯಾ ಜೈಲಿನಲ್ಲಿಯೇ ಇದ್ದಾರೆ.

    ಏನಿದು ಪ್ರಕರಣ?

    ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ (42) ಅವರು ಅತ್ತಾವರದಲ್ಲಿ ಶ್ರೀ ಪೊಳಲಿ ಎಲೆಕ್ಟ್ರಾನಿಕ್ಸ್‌ ಅಂಗಡಿ ನಡೆಸುತ್ತಿದ್ದರು. ಜತೆಗೆ ಚಿಟ್‌ ಫ‌ಂಡ್‌ ವ್ಯವಹಾರ ನಡೆಸುತ್ತಿದ್ದರು. ಈ ಕುರಿ ಫ‌ಂಡ್‌ನ‌ಲ್ಲಿ ಜೋನಸ್‌ ಸ್ಯಾಮ್ಸನ್‌ 2 ಸದಸ್ಯತ್ವ ಹೊಂದಿದ್ದು, ಮಾಸಿಕ ಕಂತು ಪಾವತಿಸಲು ವಿಫ‌ಲನಾಗಿದ್ದ. ಹಣ ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸುತ್ತಿದ್ದರು.

    2019ರ ಮೇ 11ರಂದು ಬೆಳಗ್ಗೆ 9.15ಕ್ಕೆ ಹಣ ಕೇಳುವುದಕ್ಕಾಗಿ ಶ್ರೀಮತಿ ಶೆಟ್ಟಿ ಅವರು ಆರೋಪಿ ಜೋನಸ್‌ ಸ್ಯಾಮ್ಸನ್‌ನ ಮನೆಗೆ ತೆರಳಿದ್ದರು. ಅಲ್ಲಿ ಸ್ಯಾಮ್ಸನ್‌ ಮರದ ಪಟ್ಟಿಯ ತುಂಡಿನಿಂದ ಶ್ರೀಮತಿ ಶೆಟ್ಟಿ ತಲೆಗೆ ಹೊ*ಡೆದಿದ್ದ. ಪ್ರಜ್ಞಾಹೀನರಾಗಿದ್ದ ಶ್ರೀಮತಿ ಶೆಟ್ಟಿ ಅವರನ್ನು ಜೋನಸ್‌ ಮತ್ತು ವಿಕ್ಟೋರಿಯಾ ಬಚ್ಚಲು ಕೋಣೆಗೆ ಎಳೆದೊಯ್ದು ಹರಿತವಾದ ಕತ್ತಿಯಿಂದ ಕುತ್ತಿಗೆ ಕೊ*ಯ್ದು ಮೈಮೇಲಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ದೇಹವನ್ನು ಒಟ್ಟು 29 ತುಂಡು ಮಾಡಿ ಗೋಣಿ ಚೀಲದಲ್ಲಿ ತುಂಬಿಸಿ ನಗರದ ಹಲವೆಡೆ ಎಸೆದಿದ್ದರು.

    ಇದನ್ನೂ ಓದಿ : ಸಾಹಸಕ್ಕೆ ಕೈ ಹಾಕಿದ ; ಪ್ರಾಣ ಪಕ್ಷಿಯೇ ಹಾರಿ ಹೋಯಿತು

    ಜೋನಸ್‌ ಮತ್ತು ವಿಕ್ಟೋರಿಯಾ ಮೇಲಿನ ಕೊ*ಲೆ, ಸು*ಲಿಗೆ ಮತ್ತು ಸಾಕ್ಷ್ಯನಾಶ ಆರೋಪಗಳು ಹಾಗೂ ರಾಜು ಮೇಲಿನ ಕೊ*ಲೆಗೆ ಸಹಾಯ, ಕಳವು ಮಾಡಿರುವ ಸೊತ್ತುಗಳನ್ನು ಇಟ್ಟುಕೊಂಡಿರುವ ಆರೋಪ ಸಾಬೀತಾಗಿದೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣದ ಮೇಲಿನ ವಿಚಾರಣೆಯನ್ನು ಸಪ್ಟೆಂಬರ್‌  17ಕ್ಕೆ ನಿಗದಿಪಡಿಸಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಜುಡಿತ್‌ ಓಲ್ಗಾ ಮಾರ್ಗರೆಟ್‌ ಕ್ರಾಸ್ತಾ ಅವರು ಸಾಕ್ಷಿಗಳನ್ನು ವಿಚಾರಣೆ ಮಾಡಿ ವಾದ ಮಂಡಿಸಿದ್ದರು.

    Continue Reading

    DAKSHINA KANNADA

    ಸಾಹಸಕ್ಕೆ ಕೈ ಹಾಕಿದ ; ಪ್ರಾಣ ಪಕ್ಷಿಯೇ ಹಾರಿ ಹೋಯಿತು

    Published

    on

    ಮಂಗಳೂರು : ಇತ್ತೀಚಿನ ದಿನಗಳಲ್ಲಿ ಸಾಹಸಕ್ಕೆ ಕೈ ಹಾಕೋರ ಸಂಖ್ಯೆ ಕಡಿಮೆಯೇನಿಲ್ಲ. ರೀಲ್ಸ್, ಫೋಟೋ ಹುಚ್ಚಿಗೆ ತಮ್ಮ ಪ್ರಾಣವನ್ನೇ ಬಲಿಕೊಡುತ್ತಿದ್ದಾರೆ. ಮಂಗಳೂರಿನಲ್ಲೂ ಅಂತಹುದೇ ಘಟನೆ ನಡೆದಿದೆ. ಹಾವು ಹಿಡಿಯಲು ಹೋಗಿ ಓರ್ವ ತನ್ನ ಉಸಿರು ಚೆಲ್ಲಿದ್ದಾರೆ. ಗುರುವಾರ(ಸೆ.12) ಬಜಪೆಯಲ್ಲಿ ಈ ಘಟನೆ ನಡೆದಿದೆ.

    ರಾಮಚಂದ್ರ ಪೂಜಾರಿ (55) ಮೃತ ವ್ಯಕ್ತಿ.


    ರಾಮಚಂದ್ರ ಹಾವೊಂದನ್ನು ಕಂಡು ಅದು ವಿಷರಹಿತ ಎಂದು ಭಾವಿಸಿ ಹಿಡಿದಿದ್ದಾರೆ. ಅಸಲಿಗೆ ಅದು ವಿಷಪೂರಿತ ಕನ್ನಡಿ ಹಾವಾಗಿತ್ತು. ರಾಮಚಂದ್ರ ಹಿಡಿದಾಗ ಹಾವು ಅವರ ಕೈಗೆ ಕಚ್ಚಿದೆ. ಇದನ್ನು ಗಂಭೀರವಾಗಿ ಪರಿಗಣಿಸದೆ ಅವರು ಮನೆಗೆ ತೆರಳಿದ್ದರು. ಸಂಜೆಯಾಗುತ್ತಲೇ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು (ಸೆ.13) ಮೃತಪಟ್ಟಿದ್ದಾರೆ.

    Continue Reading

    DAKSHINA KANNADA

    ಬಹುನಿರೀಕ್ಷಿತ “ಕಲ್ಜಿಗ” ಸಿನೆಮಾ ರಾಜ್ಯಾದ್ಯಂತ ಬಿಡುಗಡೆ

    Published

    on

    ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

    ಬಳಿಕ ಮಾತಾಡಿದ ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಕಲ್ಜಿಗ ಸಿನಿಮಾ ಕುರಿತು ಟೀಕೆ ಟಿಪ್ಪಣಿ ಬರುತ್ತಿದೆ. ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸೋಣ. ಸಿನಿಮಾ ನೋಡಿದವರು ನಮ್ಮ ತುಳುನಾಡಿನ ದೈವಗಳ ಕಾರಣಿಕವನ್ನು ಚೆನ್ನಾಗಿ ತೋರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನನ್ನ ಪ್ರಕಾರ ಸಿನಿಮಾದಲ್ಲಿ ದೈವಾರಾಧನೆಗೆ ಎಲ್ಲೂ ಅಪಚಾರ ಆಗಿರಲಿಕ್ಕಿಲ್ಲ. ನಾವು ತಪ್ಪು ಮಾಡದೆಯೂ ನಮಗೆ ಅನ್ಯಾಯವಾಗುವುದಾದರೆ ನಾನು ಚಿತ್ರತಂಡದ ಜೊತೆಗೆ ಇದ್ದೇನೆ“ ಎಂದರು.

    ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತಾಡಿ, “ಅರ್ಜುನ್ ಕಾಪಿಕಾಡ್ ಅವರು ಅಭಿನಯಿಸಿದ ಸಿನಿಮಾದಲ್ಲಿ ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಕೆಲಸ ನಡೆದಿದೆ. ತುಳುನಾಡಿನ ದೈವಗಳ ಪವಾಡವನ್ನು ತೋರಿಸಲಾಗಿದೆ. ನಾವೆಲ್ಲರೂ ಸಿನಿಮಾ ನೋಡಿ ಬೆಂಬಲಿಸಬೇಕು” ಎಂದರು.

    ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಪ್ರಕಾಶ್ ಧರ್ಮನಗರ, ತಮ್ಮ ಲಕ್ಷ್ಮಣ, ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ನಟ ಅರ್ಜುನ್ ಕಾಪಿಕಾಡ್, ನಿರ್ಮಾಪಕ ಶರತ್ ಕುಮಾರ್ ಎ.ಕೆ., ನಿರ್ದೇಶಕ ಸುಮನ್ ಸುವರ್ಣಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ ಕುರಿತು:

    ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಶೀರ್ಷಿಕೆಯಲ್ಲಿಯೇ ಕೌತುಕವನ್ನು ಬೆಸೆದುಕೊಂಡಿದೆ. ಕಲ್ಜಿಗದ ಕಥೆ ಚಿತ್ರಕಥೆ ಸಂಭಾಷಣೆಯನ್ನು ಕೂಡ ನಿರ್ದೇಶಕರೇ ಬರೆದಿದ್ದಾರೆ. ವಿಶೇಷವೆಂದರೆ, ಬಹು ಕಾಲದ ನಂತರ ನಾದಬ್ರಹ್ಮ ಹಂಸಲೇಖ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶನಕ್ಕೆ ಮರಳಿದ್ದಾರೆ. ಸಿನಿಮಾಕ್ಕೆ ಪ್ರಸಾದ್ ಕೆ ಶೆಟ್ಟಿ ಹಿನ್ನಲೆ ಸಂಗೀತ ನೀಡಿದ್ದಾರೆ.

    ಇನ್ನುಳಿದಂತೆ ಗಿರ್ಗಿಟ್, ಸರ್ಕಸ್, ಗಮ್ಜಾಲ್ ಮುಂತಾದ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಸುಮನ್ ಸುವರ್ಣ `ಕಲ್ಜಿಗ’ದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ತುಳು ಚಿತ್ರರಂಗದಲ್ಲಿ ಕಿಂಗ್ ಆಫ್ ಆಕ್ಷನ್ ಎಂಬ ಬಿರುದು ಪಡೆದಿರುವ ನಟ ಅರ್ಜುನ್ ಕಾಪಿlಕಾಡ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಅಪ್ಪಟ ಕನ್ನಡತಿ ಸುಶ್ಮಿತಾ ಭಟ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಎಸ್. ಕೆ ಗ್ರೂಪ್ ಎಂಬ ಮಾರ್ಕೆಟಿಂಗ್ ಸಂಸ್ಥೆಯ ಮಾಲೀಕರಾಗಿರುವ ಶರತ್ ಕುಮಾರ್ ಎ.ಕೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಟರಾದ ಗೋಪಿನಾಥ್ ಭಟ್ , ಜ್ಯೋತಿಷ್ ಶೆಟ್ಟಿ , ಮಾನಸಿ ಸುಧೀರ್ , ವಿಜಯ್ ಶೋಭರಾಜ್ ಪಾವೂರ್ , ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮಂಗಳೂರು , ಉಡುಪಿ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

    ರಾಜ್ಯಾದ್ಯಂತ ಸುಮಾರು ಐವತ್ತು ಟಾಕೀಸ್ ಗಳಲ್ಲಿ ಕಲ್ಜಿಗ ಸಿನಿಮಾ ತೆರೆಕಾಣಲಿದೆ. ದಕ್ಷಿಣ ಕನ್ನಡ , ಉಡುಪಿ , ಬೆಂಗಳೂರು , ಮೈಸೂರು , ಶಿವಮೊಗ್ಗ , ಚಿಕ್ಕಮಗಳೂರು , ಹಾಸನ , ಮಡಿಕೇರಿ , ಹುಬ್ಬಳ್ಳಿ , ಧಾರವಾಡ , ದಾವಣಗೆ ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗಲಿದೆ.

    ಈಗಾಗಲೇ ಕಲ್ಜಿಗ ಚಿತ್ರದ ಟ್ರೈಲರ್ ಅನ್ನು ಯೂಟ್ಯೂಬ್ ನಲ್ಲಿ ಒಟ್ಟು 14 ಲಕ್ಷಕ್ಕಿಂತಲೂ ಹೆಚ್ಚು ಜನರು ವೀಕ್ಷಿಸಿದ್ದಾರೆ ಮಂಗಳೂರು ಸೀಮೆಯ ಕನ್ನಡ ಭಾಷಾ ಶೈಲಿಯಲ್ಲಿ ಚಿತ್ರ ತಯಾರಾಗಿದೆ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ನಂತರದಲ್ಲಿ ಘಟಿಸುವ ರೋಚಕ ಕಥನ ಕಲ್ಜಿಗದಲ್ಲಿದೆ. ಸಚಿನ್ ಶೆಟ್ಟಿ ಛಾಯಾಗ್ರಹಣ , ಯಶ್ವಿನ್ ಕೆ ಶೆಟ್ಟಿಗಾರ್ ಸಂಕಲನ ಈ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ ಸನೀಲ್ ಗುರು ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ , ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಂದೀಪ್ ಶೆಟ್ಟಿ `ಕಲ್ಜಿಗ’ಕ್ಕೆ ಕೈ ಜೋಡಿಸಿದ್ದಾರೆ.

    Continue Reading

    LATEST NEWS

    Trending