Saturday, November 27, 2021

ಉಳ್ಳಾಲ ಕೆ.ಸಿ.ರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಮಂಗಳೂರು: ಮಂಗಳೂರು ದಸರಾ ಮುಗಿಸಿ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಬೈಕ್ ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ. 66ರ ಉಳ್ಳಾಲ ಕೆ.ಸಿ ರೋಡ್ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಮೃತರು. ನಿನ್ನೆ ರಾತ್ರಿ ಯುವಕರಿಬ್ಬರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಬೈಕ್ ಸ್ಕಿಡ್ ಆಗಿ ಅಪಘಾತ ನಡೆದಿರುವುದಾಗಿ ತಿಳಿದುಬಂದಿದೆ. ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿಸಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...