Thursday, August 11, 2022

ಉಡುಪಿ: ಅಂಗಡಿ ಹೊರಗೆ ನಿಲ್ಲಿಸಿದ್ದ ಬೈಕ್‌ನ್ನು ಎಸ್ಕೇಪ್ ಮಾಡಿದ ಖದೀಮ ಅರೆಸ್ಟ್

ಉಡುಪಿ: ಬೈಕ್ ಕದ್ದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿರುವ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಆದಿ ಚುಂಚನಗಿರಿ ಹೈಸ್ಕೂಲು ಬಳಿಯ ನಿವಾಸಿ ವಿಳಾಸ ಕುಮಾರ ಅಲಿಯಾಸ್ ಟೈಲರ್ ಕುಮಾರ್ (37) ಬಂಧಿತ ಆರೋಪಿ.

ಆತ್ರಾಡಿ ಕಾಂಪ್ಲೆಕ್ಸ್ ನ ಮಹಾದೇವಿ ಸ್ಟೋರ್‌ನ ಎದುರು ಅದರ ಮಾಲಕ ಪ್ರಸನ್ನ ಕುಮಾರ್ ತನ್ನ ಬೈಕ್ ನಿಲ್ಲಿಸಿ ಅಂಗಡಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದರು.

ಅದೇ ಸಮಯಕ್ಕೆ ಓರ್ವ ವ್ಯಕ್ತಿ ಅವರ ಬೈಕ್‌ನ್ನು ಎಸ್ಕೇಪ್ ಮಾಡಿ ಹಿರಿಯಡ್ಕ ಕಡೆಗೆ ಹೋಗಿದ್ದ. ಇದು ಅರಿವಿಗೆ ಬಂದ ಪ್ರಸನ್ನ ಕುಮಾರ್ ಈ ಬಗ್ಗೆ ಹಿರಿಯಡ್ಕ ಠಾಣೆಗೆ ರವರು ದೂರು ನೀಡಿದ್ದಾರೆ.

ದೂರಿನ ಹಿನ್ನೆಲೆ ಕಾರ್ಯಪ್ರವೃತ್ತರಾದ ಹಿರಿಯಡ್ಕ ಪೊಲೀಸರು ಅಂಜಾರು ಗ್ರಾಮದ ಓಂತಿಬೆಟ್ಟು ಎಂಬಲ್ಲಿ ನಾಕಾಬಂಧಿ ನಿರ್ಮಿಸಿ ವಾಹನ ತಪಾಸಣೆ ನಡೆಸುತ್ತಿರುವಾಗ ಓರ್ವ ಬೈಕ್ ಸವಾರ ಆತ್ರಾಡಿ ಕಡೆಯಿಂದ ಸವಾರಿ ಮಾಡಿಕೊಂಡು ಬರುತ್ತಿದ್ದು ಆತನಲ್ಲಿ ಮೋಟಾರ್‌ ಸೈಕಲ್‌ ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರು.

ಆದರೆ ಆತ ಬೈಕ್ ನಿಲ್ಲಿಸದೆ ಪರಾರಿಯಾಗಲು ಪ್ರಯತ್ನಿಸಿದ್ದು,ಬೈಕ್‌ನ್ನು ಪೊಲೀಸರು ಅಡ್ಡಗಟ್ಟಿ ಆತನನ್ನು ವಿಚಾರಿಸಿದಾಗ ನಂತರ ಕಳುವು ಮಾಡಿರುವುದನ್ನು ಬಾಯಿ ಬಿಟ್ಟಿದ್ದಾನೆ.

ವಿಷ್ಣುವರ್ಧನ ಐಪಿಎಸ್‌ ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ, ಸಿದ್ದಲಿಂಗಪ್ಪ ಕೆ.ಎಸ್.ಪಿಎಸ್. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಸುಧಾಕರ ನಾಯ್ಕ್, ಬ್ರಹ್ಮಾವರ ಪೊಲೀಸ್ ವೃತ್ತನಿರೀಕ್ಷಕರಾದ ಅನಂತ ಪದ್ಮನಾಭರವರ ನೇತೃತ್ವದಲ್ಲಿ

ಹಿರಿಯಡ್ಕ ಪೊಲೀಸ್ ಠಾಣಾ ಪಿಎಸ್‌ಐ ಶ್ರೀ ಅನಿಲ್ ಬಿ ಎಮ್, ಪ್ರೊಫೆಶನರಿ ಪಿಎಸ್ಐ ಮಂಜುನಾಥ, ರವಿ, ಎಎಸ್ಐ ಗಂಗಪ್ಪ, ಪರಮೇಶ್ವರ, ಸಿಬ್ಬಂದಿಗಳಾದ ದಯಾನಂದ ಪ್ರಭು, ರಘು, ಕಾರ್ತಿಕ್, ಸಂತೋಷ್, ಶಿವರಾಜ್, ಭೀಮಪ್ಪ ಜಯಲಕ್ಷ್ಮೀ ಬ್ರಹ್ಮಾವರ ಪೊಲೀಸ್ ಠಾಣೆಯ ಪ್ರವೀಣ , ವೆಂಕಟರಮಣ, ಅಜ್ಮಲ, ಸಂತೋಷ, ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
.

LEAVE A REPLY

Please enter your comment!
Please enter your name here

Hot Topics

ತೊಕ್ಕೊಟ್ಟುವಿನಲ್ಲಿ ಬೈಕ್‌-ಕಾರು ಢಿಕ್ಕಿ: ಸವಾರ ಗಂಭೀರ

ಉಳ್ಳಾಲ: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...

ಪ್ರವೀಣ್ ಹತ್ಯೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳ ಬಂಧನ-ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಶಿಯಾಬ್, ಬಶೀರ್, ರಿಯಾಝ್ ಎಂದು...

ಸ್ವಾತಂತ್ರ್ಯ ಸಂಭ್ರಮಕ್ಕೆ ಅಹಿತಕರ ಘಟನೆ ಆಗದಂತೆ ದ.ಕದಲ್ಲಿ ಟೈಟ್ ಸೆಕ್ಯೂರಿಟಿ

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಇನ್ನೊಂದೆಡೆ ಪೊಲೀಸರು ಬಂದೋಬಸ್ತು ಬಿಗಿಗೊಳಿಸಿದ್ದಾರೆ.ಯಾವುದೇ ಸಂಭಾವ್ಯ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಕಣ್ಗಾವಲು ಇರಿಸಿದ್ದಾರೆ. ಜಿಲ್ಲಾದ್ಯಂತ ಪ್ರಮುಖ...