Friday, July 1, 2022

ಬಂಟ್ವಾಳದಲ್ಲಿ ಬೈಕ್ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಠಾಣೆಯ ‌ಇನ್ಸ್‌ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ತಂಡ ಬಂಧಿಸಿದೆ.


ಅಕ್ಬರ್, ಸಿದ್ದೀಕ್, ಸಮೀರ್ ಬಂಧಿತ ಆರೋಪಿಗಳು.
ಇತ್ತೀಚೆಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಬೈಕ್ ಕಳವು ಮಾಡಿದ ಪ್ರಕರಣದಲ್ಲಿ ಈ ಮೂವರು ಆರೋಪಿಗಳ ಬಂಧನ ಮಾಡಲಾಗಿದೆ.
ಬಂಟ್ವಾಳ ಸಮೀಪದ ಮಣಿಹಳ್ಳ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್ ಹಾಗೂ ಬಿ.ಸಿ.ರೋಡು ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ಗಳ ಕಳ್ಳತನ ನಡೆದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳಿಂದ ಕಳ್ಳತನ ಮಾಡಿದ್ದ ಎರಡು ಬೈಕ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ‌.
ಕಾರ್ಯಚರಣೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್, ಅಪರಾಧ ವಿಭಾಗದ ಎಸ್.ಐ. ಕಲೈಮಾರ್, ಸಿಬ್ಬಂದಿ ಇರ್ಶಾದ್, ಗಣೇಶ್ ನೆಟ್ಲ, ಮನೋಹರ್, ಪ್ರವೀಣ್, ಮೋಹನ್, ನಾಗರಾಜ್, ವನಿತಾ, ನಾರಾಯಣ ಇದ್ದರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ಬಾವಿಗೆ ಹಾರಿ ಯುವತಿ ಜೀವಾಂತ್ಯ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ.ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ.ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಜೀವಾಂತ್ಯ

ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.ದೀಪಾ (31) ತನ್ನ ಮಗು...