Monday, May 17, 2021

27 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ- ವಿವಾಹ ವಿಚ್ಚೇದನ ಪಡೆದ ಸಾಫ್ಟವೇರ್ ದಿಗ್ಗಜ ಬಿಲ್ ಗೇಟ್ಸ್ ದಂಪತಿ

ವಾಷಿಂಗ್ಟನ್: ಶ್ರೀಮಂತ ಉದ್ಯಮಿ, ಸಾಫ್ಟವೇರ್ ದಿಗ್ಗಜ ಬಿಲ್ ಗೇಟ್ಸ್ ಅವರು ಮಿಲಿಂಡಾ ಜೊತೆಗಿನ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ.

ವಿವಾಹ ವಿಚ್ಚೇದನದ ಬಗ್ಗೆ ಸ್ವತಃ ಬಿಲ್ ಗೇಟ್ಸ್ ಅವರೇ ಹೇಳಿಕೊಂಡಿದ್ದಾರೆ.

ನಿನ್ನೆ ಬಿಲ್ ಗೇಟ್ಸ್ ಈ ಬಗ್ಗೆ ಅಧಿಕೃತವಾಗಿ ಘೋಷಿಸಿಕೊಂಡಿದ್ದು, ಪರಸ್ಪರ ಒಪ್ಪಿಗೆಯ ಮೇರೆಗೆ ಇಬ್ಬರೂ ಈ ನಿರ್ಧಾರ ಕೈಗೊಂಡಿದ್ದೇವೆ ಎಂದಿದ್ದಾರೆ.

ಬಿಲ್ ಗೇಟ್ಸ್ ಹಾಗೂ ಅವರ ಪತ್ನಿ ಮಿಲಿಂಡಾ ಗೇಟ್ಸ್ ಸೇರಿ ಸ್ಥಾಪಿಸಿರುವ ಫೌಂಡೇಷನ್ ಮೂಲಕ ವಿಶ್ವದೆಲ್ಲೆಡೆ ಸಾಮಾಜಿಕ ಕಳಕಳಿ ಕಾರ್ಯ ನಡೆಸಲಾಗುತ್ತಿದೆ.

ಆರೋಗ್ಯ ವ್ಯವಸ್ಥೆ ಸುಧಾರಣೆಗೂ ಈ ದಂಪತಿ ಫೌಂಡೇಶನ್ ಮೂಲಕ ಅಪಾರ ಮೊತ್ತದ ದಾನ ನೀಡಿದ್ದಾರೆ.

ಮುಂದೆಯೂ ಈ ಕಾರ್ಯಗಳು ನಡೆಯುತ್ತದೆ ಎಂದು ಅವರು ಹೇಳಿದ್ದಾರೆ.1994ರಲ್ಲಿ ಹವಾಯಿಯಲ್ಲಿ ಬಿಲ್ ಗೇಟ್ಸ್ ಮತ್ತು ಮಿಲಿಂಡಾ ಗೇಟ್ಸ್ ವಿವಾಹವಾಗಿದ್ದರು.

ದಂಪತಿಗೆ ಮೂರು ಮಕ್ಕಳಿದ್ದಾರೆ.ಶ್ರೀಮಂತ ದಂಪತಿಗಳ ವಿಚ್ಚೇದನವಾದಾಗ ಪರಿಹಾರ ಹಣದ ಬಗ್ಗೆ ಚರ್ಚೆಯಾಗುತ್ತದೆ. ಆದರೆ ಬಿಲ್ ಗೇಟ್ಸ್ ಮತ್ತು ಮಿಲಿಂಡಾ ತಮ್ಮ ಹೇಳಿಕೆಯಲ್ಲಿ ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...