Thursday, September 29, 2022

ಬೆಳ್ತಂಗಡಿ: ಬಿಲ್ಲವ ಸಂಘಗಳ ಆಶ್ರಯದಲ್ಲಿ ‘ಆಟಿಡೊಂಜಿ ದಿನ ಕೂಟ’ & ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ -ಮಹಿಳಾ ಬಿಲ್ಲವ ವೇದಿಕೆ -ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಇದರ ಅಶ್ರಯದಲ್ಲಿ ಆಟಿಡೊಂಜಿ ದಿನ ಕೂಟ ಹಾಗೂ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ನಾಟಿ ವೈದ್ಯರಿಗೆ ಹಾಗೂ ಬ್ಯಾಡ್ಮಿಂಟನ್ ನಲ್ಲಿ ರಾಜ್ಯಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಯಿತು.

ಇದೇ ಸಂರ್ಭ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡಾ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷರು, ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಭಾಗಿಯಾದರು.


ಸಾಮುದಾಯಿಕ ಒಗ್ಗೂಡುವಿಕೆಗೆ ಪ್ರೇರಣೆ ನೀಡುವ ಮತ್ತಷ್ಟು ಪಾರಂಪರಿಕ,ಸಾಂಸ್ಕೃತಿಕ, ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವಂತಾಗಲಿ ಎಂದು ಆಶಿಸಿ ಸಂಘಟಕರು ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾದ ಸಮಸ್ತರಿಗೂ ಶುಭ ಹಾರೈಸಿದರು.


ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಚಂದ್ರ ಶೇಖರ್ ಗುರುನಾರಾಯಣ ಸ್ವಾಮಿ ಸಂಘ ಕುವೆಟ್ಟು ವಹಿಸಿದ್ದರು. ಜಯವಿಕ್ರಮ್ ಕಲ್ಲಾಪು ಪ್ರಧಾನ ಕಾರ್ಯದರ್ಶಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಮುಖ್ಯ ಅತಿಥಿಯಾಗಿದ್ದರು.

ರಕ್ಷಿತ್ ಶಿವರಾಮ್ ಅಧ್ಯಕ್ಷರು ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ, ಸುಜಿತಾ ಬಂಗೇರ ಮಹಿಳಾ ಬಿಲ್ಲವ ವೇದಿಕೆ ಬೆಳ್ತಂಗಡಿ, ನಿತೀಶ್ ಕೋಟ್ಯಾನ್ ಅಧ್ಯಕ್ಷರು ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ, ಜಯಂತಿ,ಅನೂಪ್ ಎಂ ಬಂಗೇರ ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here

Hot Topics

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...