BELTHANGADY
ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಡಾ.ಡಿ ವೀರೇಂದ್ರ ಹೆಗ್ಗಡೆಗೆ ಅಭಿನಂದನೆ
ಬೆಳ್ತಂಗಡಿ: ರಾಜ್ಯ ಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಶನಿವಾರ ಭೇಟಿ ಮಾಡಿದರು.
ಈ ವೇಳೆ ಕ್ಷೇತ್ರಾಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆರ್ ಮಾತನಾಡಿ, ತುಳುಭಾಷೆ, ತುಳು ಸಂಸ್ಕೃತಿ ಮೇಲೆ ಅಪಾರ ಅಭಿಮಾನ ಹೊಂದಿರುವ ಅವರ ನಾಮನಿರ್ದೇಶನ ತುಳುನಾಡಿಗೆ ಹೆಮ್ಮೆಯ ವಿಚಾರ. ತುಳುಭಾಷೆ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಎಲ್ಲ ಪ್ರಯತ್ನ ಅವರಿಂದ ನೆರವೇರಲಿ ಮತ್ತು ಹೆಗ್ಗಡೆಯವರ ಸಾಮಾಜಿಕ ಕಾರ್ಯ ಭಾರತಾದ್ಯಂತ ಪಸರಿಸಲಿ ಎಂದು ಗೌರವಿಸಲಾಯಿತು. ಈ ವೇಳೆ ಅವರಿಗೆ ನಾರಾಯಣ ಗುರುಗಳ ಫೋಟೋ ಉಡುಗೋರೆಯಾಗಿ ನೀಡಿದರು.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಎಸ್ಡಿಎಂ ಕಾನೂನು ಕಾಲೇಜು ನಿವೃತ್ತ ಪ್ರಾಂಶುಪಾಲರ ರಾಜೇಂದ್ರ ಶೆಟ್ಟಿ, ಗುರುಬೆಳದಿಂಗಳು ಸಂಸ್ಥೆಯ ಪ್ರವೀಣ್ ಅಂಚನ್ ಅರ್ಕುಳ, ಸುಜಿತ್ ಕುಮಾರ್, ವಿವೇಕ್ ಬಿ. ಕೋಟ್ಯಾನ್, ಸಂಜಿತ್ ಎಸ್.ಜೆ, ಪತ್ರಕರ್ತ ಮನೋಹರ್ ಬಳಂಜ ಮೊದಲಾದವರಿದ್ದರು.
ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ
ಬೆಳ್ತಂಗಡಿ ಭಾರತೀಯ ಸಂಸತ್ತಿನ ಮೇಲ್ಮನೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಪದಾಧಿಕಾರಿಗಳು ಜು.16 ರಂದು ಭೇಟಿ ನೀಡಿ ಸಂಘದ ವತಿಯಿಂದ ಗೌರವಾರ್ಪಣೆ ಸಲ್ಲಿಸಿದರು.
ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಉಪಾಧ್ಯಕ್ಷ ಶೇಖರ ಬಂಗೇರ ಹೇರಾಜೆ, ಪ್ರಧಾನ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಜೀತಾ ವಿ. ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ನಿರ್ದೇಶಕರುಗಳಾದ ಸೂರ್ಯನಾರಾಯಣ ಡಿ. ಕೆ., ಪುರುಷೋತ್ತಮ ಡಿ., ಲಕ್ಷ್ಮಣ ಪೂಜಾರಿ, ಜಗದೀಶ್ ಡಿ. ಉಪಸ್ಥಿತರಿದ್ದರು.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ