LATEST NEWS
ಚಿನ್ನಾಭರಣ ಕದ್ದು ಬಿಂದಾಸ್ ಆಗಿದ್ದಾಕೆ ವಾಟ್ಸಾಪ್ ಡಿಪಿಯಿಂದ ತಗ್ಲಾಕೊಂಡ್ಳು!
ಬೆಂಗಳೂರು : ಕಳ್ಳ ಎಷ್ಟೇ ಚಾಣಾಕ್ಷತನ ಮೆರೆದರೂ ಕೆಲವೊಮ್ಮೆ ತಾನು ಮಾಡೋ ಎಡವಟ್ಟಿನಿಂದ ತಗಲಾಕ್ಕೊಂಡ ಉದಾಹರಣೆಗಳಿವೆ. ಕದ್ದ ಸ್ಥಳದಲ್ಲಿ ಕುರುಹು ಬಿಟ್ಟು ಬರುವುದೋ ಅಥವಾ ಅಲ್ಲೇ ನಿದ್ದೆ ಹೋಗುವದರಿಂದಲೋ ಖದೀಮರು ಪೊಲೀಸರ ವಶವಾಗುತ್ತಾರೆ. ಆದ್ರೆ, ಈ ಕಥೆ ಮಾತ್ರ ಭಿನ್ನ. ಈ ಕಳ್ಳಿ ವಾಟ್ಸಾಪ್ ಡಿಪಿಯಿಂದ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾಳೆ.
ಏನಿದು ಪ್ರಕರಣ?
ಚಿನ್ನಾಭರಣ ಪ್ರಕರಣವೊಂದರಲ್ಲಿ ಪೊಲೀಸರಿಂದ ಆಕೆ ತಪ್ಪಿಸಿಕೊಂಡಿದ್ದಳು. ಈಗ ತಾನು ಮಾಡಿದ್ದ ಆ ಒಂದು ತಪ್ಪಿನಿಂದಾಗಿ ಸಿಕ್ಕಿಹಾಕಿಕೊಂಡಿದ್ದಾಳೆ. ಮುನ್ನೇಕೊಳಾಲು ನಿವಾಸಿ ರೇಣುಕಾ ಬಂಧಿತ ಆರೋಪಿ. ರೇಣುಕಾ ಹಗರಿಬೊಮ್ಮನಹಳ್ಳಿ ಮೂಲದವಳು. ಮಾರತ್ತಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಟೆಕ್ಕಿ ದಂಪತಿಯ ಫ್ಲ್ಯಾಟ್‌ನಲ್ಲಿ ಕೆಲಸ ಮಾಡುತ್ತಿದ್ದಳು.
ಅಂದೊಂದು ದಿನ ಅಲ್ಮೇರಾದಲ್ಲಿ ಇರಿಸಲಾಗಿದ್ದ ಆಭರಣಗಳು ನಾಪತ್ತೆಯಾಗಿರುವುದನ್ನು ಕಂಡು ಮಾಲಕರು ದೂರು ದಾಖಲಿಸಿದ್ದಾರೆ. ಶಂಕಿತರ ವಿಚಾರಣೆ ನಡೆಸಿದ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಅದೇ ಅಪಾರ್ಟ್ ಮೆಂಟ್ ನ ಮತ್ತೊಂದು ಮನೆಯಲ್ಲಿಯೂ ಕಳ್ಳತನವಾಗಿತ್ತು. ಮನೆ ಮಾಲಕರು ರೇಣುಕಾ ಮೇಲೆ ಅನುಮಾನ ವ್ಯಕ್ತ ಪಡಿಸಿದ್ದರು. ಪೊಲೀಸರು ಸಹ ರೇಣುಕಾಳನ್ನು ಕರೆಸಿ ವಿಚಾರಿಸಿದಾಗ ಆಕೆ ತಾನು ಕದ್ದಿಲ್ಲ ಎಂದೇ ವಾದಿಸಿದ್ದಳು. ಕೊನೆಗೆ ಪೊಲೀಸರು ಆಕೆಯನ್ನು ಬಿಟ್ಟು ಕಳಿಸಿದ್ದರು.
ಇದನ್ನೂ ಓದಿ : ಚಿಕನ್ ಕರಿ ಕೇಳಿದ್ದಕ್ಕೆ ಗಂಡನನ್ನು ಇಟ್ಟಿಗೆಯಿಂದ ಹೊಡೆದು ಕೊಂ*ದ ಪತ್ನಿ!
ಆಕೆಯ ವಿರುದ್ಧ ದೂರು ದಾಖಲಾದ ನಂತರ, ಮಹಿಳೆ ಕೆಲಸ ತೊರೆದು ವಿವಿಧ ಸ್ಥಳಗಳಲ್ಲಿ ಮನೆಗೆಲಸ ಮಾಡಿಕೊಂಡಿದ್ದಳು.ಆಕೆಯನ್ನು ಆರೊಪಿ ಎಂದು ಸಾಬೀತು ಮಾಡಲು ಯಾವುದೇ ಸಾಕ್ಷಿ ಇರಲಿಲ್ಲ. ಅಲ್ಲದೇ, ದೂರುದಾರರು ನವೆಂಬರ್ 2023 ರಲ್ಲಿ ಅಲ್ಮೇರಾದಲ್ಲಿ ಚಿನ್ನಾಭರಣಗಳನ್ನು ಇಟ್ಟುಕೊಂಡು ನಾಲ್ಕು ತಿಂಗಳ ನಂತರ ಪರಿಶೀಲಿಸಿದ್ದರು.
ಸತ್ಯ ಬಯಲು ಮಾಡಿದ ವಾಟ್ಸಾಪ್ ಡಿಪಿ :
ಕಳೆದ ಮೂರ್ನಾಲ್ಕು ತಿಂಗಳಿಂದಲೂ ರೇಣುಕಾ ತಾನು ಕದ್ದಿರುವ ಬಗ್ಗೆ ಯಾರಿಗೂ ಸುಳಿವು ಸಿಗದಂತೆ ಭಾರಿ ಜಾಗ್ರತೆ ವಹಿಸಿದ್ದಳು. ಆದರೆ, ಅಂದು ಅದೊಂದು ತಪ್ಪು ಮಾಡಿದ್ದಳು. ಹೌದು, ಜುಲೈ 30 ರಂದು ಕದ್ದ ಆಭರಣ ಧರಿಸಿ ಫೋಟೋ ತೆಗೆದುಕೊಂಡು ವಾಟ್ಸ್ಯಾಪ್ ನಲ್ಲಿ ಡಿಪಿ ಹಾಕಿಕೊಂಡಿದ್ದಳು. ನಂತರ ಆಕೆಯನ್ನು ಕರೆಸಿ ವಿಚಾರಿಸಿದಾಗ ಕಳ್ಳತನದ ಬಗ್ಗೆ ಒಪ್ಪಿಕೊಂಡಿದ್ದಾಳೆ.
ಆಕೆಯಿಂದ ಎರಡೂ ಫ್ಲ್ಯಾಟ್‌ಗಳಲ್ಲಿ ಕಳ್ಳತನವಾಗಿದ್ದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 80 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕೆಯ ಪತಿ ಕ್ಯಾಬ್ ಚಾಲಕನಾಗಿದ್ದು, ಕಳ್ಳತನದಲ್ಲಿ ಆತನ ಯಾವುದೇ ಪಾತ್ರವಿಲ್ಲ ಎಂದು ತಿಳಿದು ಬಂದಿದೆ. ಸದ್ಯ ರೇಣುಕಾಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
LATEST NEWS
ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ 67ಸಾವಿರ ರೂ ಕಳೆದುಕೊಂಡ ಮಹಿಳೆ..! ದೂರು ದಾಖಲು
ಕೋಟ: ಇನ್ಸ್ಟಾಗ್ರಾಂ ಖಾತೆಯಲ್ಲಿ ಬಂದ ಜಾಹೀರಾತನ್ನು ನಂಬಿ ಯುವತಿಯೊಬ್ಬಳು 60 ಸಾವಿರ ರೂ. ಹಣವನ್ನು ಕಳೆದುಕೊಂಡಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲೇ ಕುಳಿತು ಮೊಬೈಲ್‌ನಲ್ಲಿ ಕೆಲಸ ಮಾಡುವ ವಿಚಾರಕ್ಕೆ ಸಂಬಂಧಿಸಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಂದ ಜಾಹೀರಾತನ್ನು ನೋಡಿ ಯುವತಿಯೊಬ್ಬಳು 60 ಸಾವಿರ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾಳೆ. ಇನ್ಸ್ಟಾಗ್ರಾಮ್‌ನಲ್ಲಿ ಬಂದ ಲಿಂಕನ್ನು ಅಕ್ಷತಾ(26 ವ) ಸ್ವೀಕರಿಸಿದ್ದಾರೆ. ಅದರಂತೆ ಲಿಂಕ್‌ಅನ್ನು ಒತ್ತಿದ ಕೂಡಲೇ ಅದು ವ್ಯಾಟ್ಸಾಪ್ ನಂಬರ್‌ಗೆ ಸಂಪರ್ಕಗೊಂಡಿದೆ. ಅದರಲ್ಲಿ ಮೊಬೈಲ್‌ನಲ್ಲಿ ಮಾಡುವ ಕೆಲಸದ ಬಗ್ಗೆ ಮಾಹಿತಿಯನ್ನು ನೀಡಿದ್ದರು.
ಆರಂಭದಲ್ಲಿ ನೋಂದಣಿ ಶುಲ್ಕ ಎಂದು ಅಕ್ಷತಾ 200 ರೂಪಾಯಿ ಹಣವನ್ನು ಫೋನ್ ಪೇ ಮೂಲಕ ವರ್ಗಾವಣೆ ಮಾಡಿದ್ದಾರೆ. ನಂತರ ಬೋನಸ್ ಎಂದು ಹೇಳಿ ಅಕ್ಷತಾ ರವರಿಗೆ 60 ರೂಪಾಯಿ ಹಣವನ್ನು ನೀಡಲಾಗಿದೆ. ಹೀಗೆ ಒಂದೇ ದಿನ 1,615 ರೂಪಾಯಿ ಅವರು ಪಾವತಿ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ವೈದ್ಯರಿಗೆ ಕೋಟ್ಯಾಂತರ ರೂಪಾಯಿ ಆನ್ಲೈನ್ ವಂಚನೆ..! ಆರೋಪಿಗಳಿಂದ 13,95,000 ನಗದು ವಶ..!!
ಜಾಹಿರಾತುದಾರರು 1/09/2024ರಂದು ಒಂಭತ್ತು ಆರ್ಡರ್‌ಗಳನ್ನು ಮುಗಿಸುವಂತೆ ತಿಳಿಸಿದ್ದು ಮೊದಲಿಗೆ 500ರೂ. ಪಾವತಿಸಿ ಅಕ್ಷತಾ ಕೆಲಸವನ್ನು ಆರಂಭಿಸಿದ್ದಾರೆ. ಪ್ರತಿಯೊಂದು ಆರ್ಡರ್‌ಗೆ ಹಣ ಪಾವತಿಸಲು ಅವರು ತಿಳಿಸಿದ್ದು ಅದರಂತೆ ಅಕ್ಷತಾ ಒಟ್ಟು 67,330 ರೂಪಾಯಿ ಹಣ ಪಡೆದು ತನಗೆ ಹಣ ವಂಚನೆ ಮಾಡಿರುವುದಾಗಿ ಕೋಟ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
LATEST NEWS
ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ
ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಗಸ್ತು ತಿರುಗಲು ಮತ್ತು ವೈಮಾನಿಕ ಸಮೀಕ್ಷೆ ನಡೆಸಲು ಮಿಲಿಟರಿ ಹೆಲಿಕಾಪ್ಟರ್ ಅನ್ನು ನಿಯೋಜಿಸಲಾಗಿದ್ದು, ಕೂಂಬಿಂಗ್ ಕಾರ್ಯಾಚರಣೆಯೂ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕರು ತಿಳಿಸಿದ್ದಾರೆ.
LATEST NEWS
ಹಳಿಗಳ ಮೇಲೆ ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟ ಕಿಡಿಗೇಡಿಗಳು: ತಪ್ಪಿದ ರೈಲು ದುರಂತ
ಅಜ್ಮೀರ್: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಸರಕು ಸಾಗಣೆ ಕಾರಿಡಾರ್ ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಡುವ ಮೂಲಕ ಸರಕು ರೈಲನ್ನು ಹಳಿ ತಪ್ಪಿಸುವ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ತಲಾ 70 ಕೆ.ಜಿ ತೂಕದ ಸಿಮೆಂಟ್ ಬ್ಲಾಕ್ ಗಳಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಆದರೆ, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ‘ಭಾನುವಾರ ಕೆಲವು ದುರ್ಷ್ಕಮಿಗಳು ಸರಕು ಸಾಗಣೆ ಕಾರಿಡಾರ್ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟಿದ್ದಾರೆ. ಗೂಡ್ಸ್ ರೈಲು ಅದಕ್ಕೆ ಡಿಕ್ಕಿ ಹೊಡೆದಿದೆ’ ಎಂದು ವಾಯುವ್ಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್ ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು. ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್ ತುಂಬಿದ ಬಾಟಲಿಗಳು, ಗನ್ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿ ರೈಲು ಸಿಲಿಂಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು. ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ.
ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.
- LATEST NEWS6 days ago
ಪೇಟಿಎಂ ಮೂಲಕ ಲಕ್ಷ ಹಣ ವರ್ಗಾವಣೆ..! ಆರೋಪಿಯ ಬಂಧನ
- DAKSHINA KANNADA5 days ago
ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ; 21 ಶಿಕ್ಷಕರಿಗೆ ಪ್ರಶಸ್ತಿ
- FILM5 days ago
ಅಮ್ಮನಾದ ಮಿಲನಾ ನಾಗರಾಜ್; ಸಂತಸ ಹಂಚಿಕೊಂಡ ನಟ ಡಾರ್ಲಿಂಗ್ ಕೃಷ್ಣ
- LATEST NEWS1 day ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್
Pingback: ಅಕ್ರಮ ಸಂಬಂಧ: ಚಾರ್ಜರ್ ಕೇಬಲ್ನಲ್ಲಿ ಕತ್ತು ಬಿಗಿದು ಪತಿಯನ್ನು ಕೊಂ*ದ ಪತ್ನಿ! - NAMMAKUDLA NEWS - ನಮ್ಮಕುಡ್ಲ ನ್ಯೂಸ್