ದುಬೈಗೆ ಹಾರಲು ರನ್ ವೇ ಯಲ್ಲಿ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿಯಾದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.
ಮಂಗಳೂರು : ದುಬೈಗೆ ಹಾರಲು ರನ್ ವೇ ಯಲ್ಲಿ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿಯಾದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.

ಪ್ರಯಾಣಿಕರನ್ನು ಹತ್ತಿಸಿ ಮಂಗಳೂರಿನಿಂದ ದುಬೈಗೆ ಇಂದು ಬೆಳಿಗ್ಗೆ 8.30ಕ್ಕೆ ಹೊರಟಿದ್ದ ಇಂಡಿಗೋ ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗ ವಿಮಾನದ ರೆಕ್ಕೆಗೆ ಎಲ್ಲಿಂದಲ್ಲೋ ಏಕಾಏಕಿ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ.
ತಕ್ಷಣ ಅಪಾಯದ ಸೂಚನೆ ಅರಿತ ಪೈಲಟ್ ಎಟಿಸಿಗೆ ಮಾಹಿತಿ ರವಾನಿಸಿದ್ದಾರೆ.
ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಾಸ್ ಬಂದು ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಆರಂಭಿಸಿದ್ದಾರೆ.
ಘಟನೆಯಿಂದ ಕೆಲ ಕಾಲ ಮಂಗಳೂರು ಏರ್ಪೋರ್ಟ್ ನಲ್ಲಿ ಆತಂಕ ನಿರ್ಮಾಣವಾಗಿತ್ತು. ಪ್ರಯಾಣಿಕರಿಗೆ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ದುಬೈಗೆ ತೆರಳಲು ವ್ಯವಸ್ಥೆ ಮಾಡಲಾಯಿತು.