DAKSHINA KANNADA
21 ದಿನದೊಳಗೆ ಜನನ ಅಥವಾ ಮರಣ ನೋಂದಾಯಿಸಿಕೊಂಡಲ್ಲಿ ಉಚಿತ ಪ್ರಮಾಣ ಪತ್ರ: ಡಿಸಿ
ಮಂಗಳೂರು: ಜಿಲ್ಲೆಯ ನಾಗರೀಕರು ತಮ್ಮ ಕುಟುಂಬದಲ್ಲಿ ಸಂಭವಿಸುವ ಜನನ ಅಥವಾ ಮರಣಗಳನ್ನು ಸ್ಥಳೀಯ ನೋಂದಣಿ ಕಚೇರಿಯಲ್ಲಿ 21 ದಿನದೊಳಗೆ ನೋಂದಾಯಿಸಿಕೊಂಡಲ್ಲೀ ಉಚಿತವಾಗಿ ಸಂಬಂಧಿಸಿದ ಪ್ರಮಾಣ ಪತ್ರ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ತಿಳಿಸಿದರು.
ನಿನ್ನೆ ಜಿಲ್ಲಾಧಿಕಾರಿಯವರ ಕಚೇರಿಯ ಕೋರ್ಟ್ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
21 ದಿನದ ನಂತರ ನೋಂದಣಿ ಮಾಡಿಕೊಂಡಲ್ಲೀ ಶುಲ್ಕ ಭರಿಸಬೇಕಿರುತ್ತದೆ.
ಆದ ಕಾರಣ 21 ದಿನದೊಳಗೆ ನೋಂದಣಿ ಮಾಡಿಕೊಂಡು ಉಚಿತ ಪ್ರಮಾಣ ಪತ್ರ ಪಡೆಯಬಹುದು,
ಜನನ, ಮರಣ ನೋಂದಣಿ ಮಾಡಲು ಆನ್ಲೈನ್ ವ್ಯವಸ್ಥೆ ಜಾರಿಗೆ ತಂದಿದ್ದು, ಗಣಕೀಕೃತ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ.
ಗ್ರಾಮ ಲೆಕ್ಕಗರು, ಸರ್ಕಾರಿ ವೈದ್ಯಾಧಿಕಾರಿಗಳು, ಆರೋಗ್ಯಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಕರು ಮನೆಯಲ್ಲಿ ಸಂಭವಿಸುವ ಜನನ ಘಟನೆಗಳ ವರದಿ ಪಡೆದು 21 ದಿನದೊಳಗೆ ಸಂಬಂಧಿಸಿದವರಿಗೆ ಆನ್ಲೈನ್ನಲ್ಲಿ ನೋಂದಣಿ ಮಾಡಿಸಿ, ಪ್ರಮಾಣ ಪತ್ರಗಳನ್ನು ವಿತರಿಸುವಂತೆ ಸೂಚಿಸಿದರು.
ಪ್ರತಿಯೊಂದು ಜನನ-ಮರಣ ಮತ್ತು ನಿರ್ಜೀವ ಜನನ ಘಟನೆಗಳು ನೋಂದಣಿಯಾಗಬೇಕು ಹಾಗೂ ನೋಂದಣಿಯು ಶೇ.100 ರಷ್ಟು ತಲುಪಬೇಕೆಂಬ ಉದ್ದೇಶದಿಂದ ಆನ್ಲೈನ್ ನೋಂದಣಿ ಮಾಡಲಾಗುತ್ತಿದೆ, ಆದ ಕಾರಣ ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಜಿಲ್ಲಾ ಸಂಖ್ಯಾ ಸಂಗ್ರಹಾಣಾಧಿಕಾರಿ ವಿನಾಯಕ.ಎನ್. ಮಹಾಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.