Connect with us

    ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..!

    Published

    on

    ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..!

    ತಿರುವಂತನಪುರ : ಸಾಲುಸಾಲು ಲೈಂಗಿಕ ದೌರ್ಜನ್ಯ ಆರೋಪಗಳನ್ನು ಎದುರಿಸುತ್ತಿರುವ ಜಲಂಧರ್​ನ ಮಾಜಿ ಬಿಷಪ್ ಫ್ರಾಂಕೊ ಮುಲಾಕ್ಕಲ್ ಜಾಮೀನು ಅರ್ಜಿಯನ್ನು ಕೊಟ್ಟಾಯಂ ನ್ಯಾಯಲಯ ತಿರಸ್ಕರಿಸಿ ಬಿಷಪ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿಗೊಳಿಸಿದೆ.


    ಪ್ರಕರಣ ವಿಚಾರಣೆ ನಡೆಸಿದ ಕೊಟ್ಟಾಯಂ ಸ್ಥಳೀಯ ನ್ಯಾಯಲಯ ಬಿಷಪ್​​ ಪರ ವಕೀಲರ ವಾದ ಆಲಿಸಿಈ ಆದೇಶ ಹೊರಡಿಸಿದ್ದಾರೆ. ಕೊರೋನಾ ತೀವ್ರಗೊಂಡ ಕಾರಣದಿಂದ ಪಂಜಾಬ್​​ನಲ್ಲೇ ಫ್ರಾಂಕೋ ಮುಲಾಕ್ಕಲ್​ ಸಿಲುಕಿಕೊಂಡಿದ್ದಾರೆ. ಹೀಗಾಗಿ ಇವರು ಕೋರ್ಟ್​ಗೆ ಬರಲು ಆಗುತ್ತಿಲ್ಲ ಎಂದು ಮುಲಾಕ್ಕಲ್ ಪರ ವಕೀಲ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಮುಲಾಕ್ಕಲ್ ಇರುವ ಜಲಂಧರ್‌ ಪ್ರದೇಶ ಕಂಟೈನ್ಮೆಂಟ್‌ ಜೋನ್​​ ಅಲ್ಲ ಎಂದು ಪ್ರತಿವಾದಿ ವಾದಿಸಿದ್ದರು. ಕೊನೆಗೂ ವಾದ-ಪ್ರತಿವಾದ ಆಲಿಸಿದ ನ್ಯಾಯಲಯ ಬಿಷಪ್​​ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿಗೊಳಿಸಿದೆ. ಜುಲೈ 1ರಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಆದರೆ, ಇದುವರೆಗೂ ಒಮ್ಮೆಯೂ ಮುಲಾಕ್ಕಲ್​​​​ ಕೋರ್ಟ್​ಗೆ ಹಾಜರಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಕೋರ್ಟ್​ ಹೀಗೆ ತೀರ್ಪು ನೀಡಿದೆ. ಅತ್ಯಾಚಾರದ ಆರೋಪದ ಮೇಲೆ ಫ್ರಾಂಕೋ ಕಳೆದ ವರ್ಷ ಸೆಪ್ಟೆಂಬರ್ 21ರಂದು ಬಂಧನಕ್ಕೆ ಒಳಗಾಗಿದ್ದರು. ಬಳಿಕ 2019 ಅಕ್ಟೋಬರ್ 16ರಂದು ಜಾಮೀನು ಪಡೆದಿದ್ದರು. ಫ್ರಾಂಕೋ ವಿರುದ್ಧ ಕೇರಳ ಪೊಲೀಸರು 1400 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.ಇದಾದ ಬೆನ್ನಲೇ ಫ್ರಾಂಕೊ ಮುಲಾಕ್ಕಲ್ ವಿರುದ್ಧ ಮತ್ತೋರ್ವ ಕೇರಳದ ಸನ್ಯಾಸಿನಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. 2014 ಮತ್ತು 2016 ರ ನಡುವೆ ಸನ್ಯಾಸಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮುಲಾಕ್ಕಲ್ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಂದು ಆರೋಪ ಮಾಡಿರುವ ಸನ್ಯಾಸಿನಿ 14 ನೇ ಸಾಕ್ಷಿಯಾಗಿದ್ದರು. “2015 ಮತ್ತು 2017 ರ ನಡುವೆ ಬಿಷಪ್ ಮುಲಾಕ್ಕಲ್ ಹಲವಾರು ಬಾರಿ ನನ್ನ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರು ಲೈಂಗಿಕತೆ ಕುರಿತು ಅಸಭ್ಯ ಭಾಷೆ ಬಳಸಿ ಮಾತನಾಡಿದ್ದರು. ಅಲ್ಲದೆ, ಕೆಲವೊಮ್ಮೆ ವಿಡಿಯೋ ಕಾಲ್ ಮಾಡಿ ಲೈಂಗಿಕತೆಗೆ ಪ್ರಚೋದನೆ ನೀಡುತ್ತಿದ್ದರು. ಆದರೆ, ಅವರ ಮೇಲೆ ಭಯವಿದ್ದ ಕಾರಣ ಈವರೆಗೆ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ” ಎಂದು ಸನ್ಯಾಸಿನಿ ಪೊಲೀಸರಿಗೆ ತಿಳಿಸಿದ್ದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ತಡೆಬೇಲಿಗೆ ಡಿಕ್ಕಿ ಹೊಡೆದು ಅಂಡರ್‌ಪಾಸ್‌ ಗೆ ಉರುಳಿದ ವಾಹನ; ಹಲವರಿಗೆ ಗಾಯ

    Published

    on

    ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

    ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೊಲೆರೋ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಪಿಕಪ್ ಹೆದ್ದಾರಿ ಬದಿಯ ಅಪಘಾತ ತಡೆಗೆ ಹಾಕಿದ್ದ ತಡೆ ಬೇಲಿಗೆ ಡಿಕ್ಕಿ ಹೊಡೆದು ಸುಮಾರು 12 ಅಡಿ ಆಳದ ಅಂಡರ್ ಪಾಸ್ ಕೆಳಗಡೆ ಬಿದ್ದಿದೆ.

    ಇದನ್ನೂ ಓದಿ: ಕೊಣಾಜೆ : ಸ್ಕೂಟರ್ – ಟೆಂಪೋ ನಡುವೆ ಅಪ*ಘಾತ; ಸವಾರ ಸಾವು

    ಅಪಘಾತದಿಂದ ಬೈಕ್ ಸವಾರ ಸಹಿತ ಬೊಲೆರೋ ಪಿಕಪ್ ನಲ್ಲಿದ್ದ ವಾಹನದ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

    Continue Reading

    DAKSHINA KANNADA

    ಮಂಗಳೂರು : ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ

    Published

    on

    ಮಂಗಳೂರು : ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ. ಮೇರಿ ಹಿಲ್‌ನಲ್ಲಿ ನಿರ್ಮಾಣವಾಗಲಿರುವ ಈ ಪ್ರಾದೇಶಿಕ ಕೇಂದ್ರ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರಗಳಿಗೆ ಪೂರಕವಾಗಲಿರುವ ವ್ಯವಸ್ಥೆಗಳು ಈ ಕೇಂದ್ರದಲ್ಲಿ ಇರಲಿದೆ. ಇದು ವಿದ್ಯಾರ್ಥಿಗಳಿಂದ ಹಿಡಿದು ಸಂಶೋಧನೆ ನಡೆಸುವ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.

    ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಏಷ್ಯಾದಲ್ಲೇ ಅತೀ ದೊಡ್ಡ ಸಂಸ್ಥೆಯಾಗಿದ್ದು, ಮಂಗಳೂರಿನಲ್ಲಿ ನಿರ್ಮಾಣವಾಗುವ ಪ್ರಾದೇಶಿಕ ಕೇಂದ್ರ ದೇಶದಲ್ಲೇ ದೊಡ್ಡ ಕೇಂದ್ರವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಕೇಂದ್ರ ಸ್ಥಾಪನೆಗೆ 2024-25ರ ಬಜೆಟ್‌ನಲ್ಲಿ ಅನುದಾನ ನೀಡಲಾಗಿದ್ದು, ಈಗ ಚಾಲನೆ ನೀಡಲಾಗುತ್ತಿದೆ. ಈ ಕೇಂದ್ರ ಸ್ಥಾಪನೆ ಬಳಿಕ ಕರಾವಳಿ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರವಾಗಿ ಬೆಂಗಳೂರಿಗೆ ಹೋಗುವುದು ತಪ್ಪಲಿದೆ ಎಂದು ಹೇಳಿದ್ದಾರೆ.

    ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಬೇಕು ಎಂಬ ಚಿಂತನೆ ಸರ್ಕಾರಕ್ಕೆ ಇದೆ. ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

    ಇದನ್ನೂ ಓದಿ : ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ

    ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್‌, ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಿದ್ದರು.

    Continue Reading

    FILM

    ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ

    Published

    on

    ಮಂಗಳೂರು/ಮುಂಬೈ : ಕೆಲವು ನಟಿಯರು ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸುತ್ತಾರೆ. ಈ ಬಗ್ಗೆ ಸಿನಿಮಾ ಒಪ್ಪಿಕೊಳ್ಳುವ ಮೊದಲೇ ಮಾತುಕತೆ ನಡೆಸಿರುತ್ತಾರೆ. ಇದನ್ನು ಬಾಲಿವುಡ್‌ನ ಈ ಸ್ಟಾರ್ ನಟಿ ಕೂಡ ಅನುಸರಿಸುತ್ತಿದ್ದರು.

    ಆದರೆ ಆ ಒಬ್ಬ ನಟ ಬಲವಂತವಾಗಿ ಕಿಸ್ ಮಾಡಿದಕ್ಕೆ ವಾಂತಿ ಮಾಡಿ 100 ಸಲ ಮುಖ ತೊಳೆದಿದ್ದೆ ಎಂದು ಸ್ಟಾರ್ ನಟಿ ಹೇಳಿದ್ದಾರೆ.

    ಬಾಲಿವುಡ್ ನಟಿ ರವೀನಾ ಟಂಡನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ರವಿನಾ ಟಂಡನ್ ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸಿದ ನಟಿಯರಲ್ಲಿ ರವೀನಾ ಟಂಡನ್ ಕೂಡ ಒಬ್ಬರು.

    ಆದರೆ ಸಿನಿಮಾವೊಂದರ ಶೂಟಿಂಗ್ ವೇಳೆ ಸಹ ನಟರೊಬ್ಬರು ಆಕಸ್ಮಿಕವಾಗಿ ರವೀನಾ ಟಂಡನ್ ತುಟಿಗಳಿಗೆ ಮುತ್ತಿಟ್ಟ ಘಟನೆ ನಡೆದಿತ್ತು. ಆ ನಂತರ ಏನಾಯಿತು ಎಂಬುದನ್ನು ಸ್ವತಃ ರವೀನಾ ಅವರೇ ಹೇಳಿದ್ದಾರೆ.

    ಇದನ್ನೂ ಓದಿ: ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್

    ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ರವೀನಾ ಮಾತನಾಡಿದ್ದಾರೆ. ರವೀನಾ ಟಂಡನ್ ಅವರೊಂದಿಗೆ ಒಂದು ಘಟನೆ ನಡೆದಿತ್ತಂತೆ. ಅವರ ಸಹ ನಟರೊಬ್ಬರು ತಪ್ಪಾಗಿ ಅವರನ್ನು ಚುಂಬಿಸಿದ್ದರಂತೆ. ಈ ದೃಶ್ಯವು ಸ್ಕ್ರಿಪ್ಟ್ ನ ಭಾಗವೂ ಆಗಿರಲಿಲ್ಲ. ಇದಾದ ನಂತರ ರವೀನಾ ಟಂಡನ್ ತುಂಬಾ ಅನ್‌ಕಂಫರ್ಟ್ ಫೀಲ್ ಮಾಡಿಕೊಂಡರಂತೆ.

    ಆ ಬಳಿಕ ವಾಂತಿ ಕೂಡ ಮಾಡಿದರಂತೆ. 100 ಸಲ ತಮ್ಮ ಬಾಯಿ ತೊಳೆದುಕೊಂಡಿದ್ದಾರಂತೆ. ನಂತರ ಆ ನಟ ರವೀನಾ ಟಂಡನ್ ಅವರ ಬಳಿಕ ಕ್ಷಮೆಯಾಚಿಸಿದರಂತೆ. ಸಂದರ್ಶನ ಸಮಯದಲ್ಲಿ ರವೀನಾ ಟಂಡನ್ ಈ ವಿಚಾರ ಹೇಳಿದ್ದಾರೆ. ಸಿನಿಮಾಗಳಲ್ಲಿ ಕಿಸ್ ಮಾಡದಿರುವುದು ನನ್ನ ಆಯ್ಕೆ ಎಂದು ರವೀನಾ ಟಂಡನ್ ಹೇಳಿದ್ದಾರೆ.

     

    Continue Reading

    LATEST NEWS

    Trending