Connect with us

BANTWAL

ವಿಟ್ಲ: ನೀರಿನ ಟ್ಯಾಂಕ್‌ಗೆ ಬಿದ್ದ ಕಾಡುಕೋಣ-ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

Published

on

ವಿಟ್ಲ: ನೀರಿಗಿಳಿಯಲು ಬಂದಿದ್ದ ಕಾಡುಕೋಣವೊಂದು ವಾಟರ್‌ ಟ್ಯಾಂಕ್‌ನಲ್ಲಿ ಸಿಲುಕಿಕೊಂಡ ಘಟನೆ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.


ಕಳೆಂಜಿಮಲೆ ರಕ್ಷಿತಾರಣ್ಯದಿಂದ ಮಧ್ಯರಾತ್ರಿ ನೀರು ಹುಡುಕಿಕೊಂಡು ಬಂದ ಕೋಣ ಕನ್ಯಾನದ ಭಾರತ ಸೇವಾಶ್ರಮದ ನೀರಿನ ಟ್ಯಾಂಕ್ ನಲ್ಲಿ ನೀರು ಕುಡಿಯಲು ಯತ್ನಿಸಿದಾಗ ಜಾರಿ 5 ಅಡಿ ಆಳದ ಟ್ಯಾಂಕ್‌ಗೆ ಬಿದ್ದಿದೆ.

ಎತ್ತರ ಇದ್ದುದರಿಂದ ಅಲ್ಲೇ ಬಾಕಿಯಾಗಿದ್ದು, ಬೆಳಿಗ್ಗೆ ಆಶ್ರಮ ನಿವಾಸಿಗಳು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ವಿಟ್ಲ ಶಾಖೆಯ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಸದ್ಯ ಟ್ಯಾಂಕ್‌ನಿಂದ ನೀರು ಖಾಲಿ ಮಾಡಲಾಗುತ್ತಿದ್ದು, ನಂತರ ಅದನ್ನು ರಕ್ಷಿಸಲಾಗುವುದು. ಬಿದ್ದ ಪರಿಣಾಮ ಕೋಣಕ್ಕೆ ಯಾವುದೇ ಗಾಯಗಳಾಗಿಲ್ಲ ಎಂದು ಅರಣ್ಯ ಸಿಬ್ಬಂದಿ ತಿಳಿಸಿದ್ದಾರೆ.

BANTWAL

ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರಿಗೆ ಕಾರು ಢಿಕ್ಕಿ; ಸವಾರ ದುರ್ಮರಣ

Published

on

ಬಂಟ್ವಾಳ : ಕಾರೊಂದು ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭಿರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು ಸತ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದ್ಮಾನ್ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಉಸ್ಮಾನ್ (24) ಮೃತರು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಉಸ್ಮಾನ್ ಅವರು ತನ್ನ ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದು ಸತ್ತಿಕಲ್ಲಿನಲ್ಲಿ ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವೇಳೆ ನೋಂದಣಿಯಾಗದ ಕಾರೊಂದು ಏಕಾಏಕಿ ಅವರ ಸ್ಕೂಟರ್ ಗೆ ಢಿಕ್ಕಿಯಾಗಿತ್ತು.

ಇದನ್ನೂ ಓದಿ: ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

ಈ ಸಂದರ್ಭ ಸ್ಕೂಟರ್ ನಲ್ಲಿ ಕುಳಿತಿದ್ದ ಉಸ್ಮಾನ್ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದ ಕಾರು ಮತ್ತು ಬೈಕ್ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Continue Reading

BANTWAL

ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

Published

on

ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

 

ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Continue Reading

LATEST NEWS

Trending

Exit mobile version