Monday, January 24, 2022

ಕಾಡೆಮ್ಮೆ ಹತ್ಯೆ ಪ್ರಕರಣ : ಮೂವರು ಆರೋಪಿಗಳ ಬಂಧನ..!

ಉಡುಪಿ : ಕಾಡೆಮ್ಮೆಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಉಡುಪಿ ಅರಣ್ಯಾಧಿಕಾರಿಗಳ ತಂಡ ಬಂಧಿಸಿದೆ.

ಕಾವ್ರಾಡಿ ಗ್ರಾಮದ ಕಂಡ್ಲೂರು ನಿವಾಸಿಗಳಾದ ಸಫಾನ್ ಕರಾನಿ(30), ಕೆ. ನಾಹಿಫ್(23), ಹಿಲಿಯಾಣ ಗ್ರಾಮದ ಹೊಯ್ಗೆಬಳಾರಿನ ಆಝೀಮ್ (26) ಬಂಧಿತ ಆರೋಪಿಗಳಾಗಿದ್ದಾರೆ..

ಬಂಧಿತರಿಂದ ಒಂದು ದ್ವಿಚಕ್ರ ವಾಹನ, ಮೂರು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಜಿಲ್ಲೆಯ ಕುಂದಾಪುರದ ಶಂಕರನಾರಾಯಣ ವಲಯದ ಹೆಂಗವಳ್ಳಿ ಗ್ರಾಮ ದೊಡ್ಡಬೆಳಾರು ಪ್ರದೇಶದಲ್ಲಿ ಮೇ 31ರಂದು ಕಾಡಮ್ಮೆಯನ್ನು ಹತ್ಯೆ ಮಾಡಿದ್ದರು.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ತನಿಖೆ ಮುಂದುವರೆದಿದೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Hot Topics

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...