DAKSHINA KANNADA
ಪಂಚರಾಜ್ಯದ ಸೋಲಿನ ಭೀತಿಯಲ್ಲಿ ಬಿಜೆಪಿಗರಿಂದ ಭ್ರಷ್ಟಾಚಾರ ಆರೋಪ: ಗುಂಡೂರಾವ್
ಮಂಗಳೂರು: ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವುದು, ಯಾವುದೇ ಆಧಾರ ಇಲ್ಲದೇ ಮಾತನಾಡುವುದು ಬಿಜೆಪಿಯವರ ಚಾಳಿಯಾಗಿದೆ. ಇವತ್ತು ಸೋಲಿನ ಭೀತಿ ಪಂಚ ರಾಜ್ಯದಲ್ಲಿ ಬಿಜೆಪಿಗೆ ಕಾಣುತ್ತಿದೆ. ಕರ್ನಾಟಕದಲ್ಲಿ ಅವರು ಧೂಳೀಪಟ ಆಗಿದ್ದಾರೆ. ಐದು ವರ್ಷ ಇಲ್ಲಿ ಯಾವ ರೀತಿ ಆಡಳಿತ ಮಾಡಿದ್ದಾರೆ ಎನ್ನುವುದನ್ನು ಜನ ನೋಡಿದ್ದಾರೆ. ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಒಳ್ಳೆಯ ಫಲಿತಾಂಶ ಬರುವ ಭೀತಿಯಲ್ಲಿ ನಮಗೆ ಕೆಟ್ಟ ಹೆಸರು ಬರಲು ಸುಳ್ಳಿನ ಆರೋಪ ಮಾಡುತ್ತಾ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೀಗ ಕಾಂಗ್ರೆಸ್ ಸರಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಐಟಿ, ಸಿಬಿಐ, ಇಡಿ ಎಲ್ಲಾ ಕೇಂದ್ರದ ಕೈಯಲ್ಲೇ ಇದೆ. ಯಾರ ಮೇಲೆ ಕೇಸು ಮಾಡಬೇಕು ಅದೆಲ್ಲವನ್ನೂ ಬಿಜೆಪಿಯವರು ಮಾಡುತ್ತಾರೆ. ಬಿಜೆಪಿಯೇತರ ಪಕ್ಷಗಳ ವಿರುದ್ಧ ಅವರು ಇದೇ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರಕಾರ ಇದ್ದಾಗ ಐದು ವರ್ಷಗಳ ಕಾಲ ಇದೆಲ್ಲವೂ ಎಲ್ಲಿಗೆ ಹೋಗಿದ್ದವು ಎಂದು ಸಚಿವರು ಪ್ರಶ್ನಿಸಿದರು.
ಭ್ರಷ್ಟಾಚಾರದ ದುಡ್ಡು ಯಾರ ಬಳಿ ಸಿಕ್ಕಿದೆಯೋ ಅವರು ಅದಕ್ಕೆ ಉತ್ತರ ಕೊಡುತ್ತಾರೆ. ತಪ್ಪು ಮಾಡಿದವರ ವಿರುದ್ಧ ಕ್ರಮವಾಗಲಿ. ಅದನ್ನು ನಾವೂ ಸ್ವಾಗತ ಮಾಡುತ್ತೇವೆ ಎಂದರು. ನಾವು 136 ಜನ ಇದ್ದೇವೆ. ಸರಕಾರ ರಚನೆ ಮಾಡಲು ಎಲ್ಲಾ ತಯಾರಿ ಇದೆ. ನಮಗೆ ಆಪರೇಶನ್ ಕಮಲ ಮಾಡುವ ಅಗತ್ಯ ಇಲ್ಲ. ಮುಂದೇನಾಗುತ್ತದೆಯೋ ಗೊತ್ತಿಲ್ಲ. ಕೆಲವರು ಸ್ವಯಂ ಪ್ರೇರಣೆಯಿಂದ ಬರುವವರಿದ್ದರೆ ನಾವು ಮಾತನಾಡುತ್ತೇವೆ. ಬೇರೆ ಬೇರೆ ಕಾರಣಗಳಿಂದ ಬರುತ್ತಾರೆ. ಪಕ್ಷಾಂತರ ಮಾಡುವುದು ಸಾಮಾನ್ಯವಾದ ವಿಚಾರವಾಗಿದೆ. ರಾಜಕೀಯ ವ್ಯವಸ್ಥೆಗೆ, ಕೆಟ್ಟ ಪದ್ಧತಿಯನ್ನು ತಂದಿದ್ದೇ ಬಿಜೆಪಿಯವರು. ಇಂದು ಅವರೇ ಅದರಲ್ಲಿ ಸಿಕ್ಕಿ ಬಿದ್ದಿದ್ದಾರೆ. ಅವಾಂತರಗಳನ್ನು ಮಾಡುವುದರಲ್ಲಿ ನಂಬರ್ ಒನ್ ಇದ್ದರೆ ಅದು ಬಿಜೆಪಿ ಪಕ್ಷ ಎಂದರು.
ಧರ್ಮದ ಆಧಾರದಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದು ಸರಿಯಲ್ಲ. ಕಾನೂನು ಪ್ರಕಾರ ಏನು ಮಾಡಬೇಕು ಅದನ್ನು ಅಧಿಕಾರಿಗಳು ಮಾಡಬೇಕು. ಕಾನೂನು ಬಿಟ್ಟು ಏನೂ ಮಾಡುವ ಹಾಗಿಲ್ಲ. ವ್ಯಾಪಾರ ಸ್ಟಾಲ್ ಹರಾಜು ಹಾಕಿರುವ ಏಲಂ ಕುರಿತಾಗಿ ಲೋಪದೋಷಗಳು ಉಂಟಾಗಿದ್ದರೆ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ ಎಂದರು. ಸ್ಮಾರ್ಟ್ ಸಿಟಿಯಲ್ಲಿ ಏನೂ ಕೆಲಸ ಆಗಿಲ್ಲ. ಇಲ್ಲಿ ಉದ್ಯೋಗ ಸೃಷ್ಟಿ ಆಗಿಲ್ಲ. ನಾವು ಅಧಿಕಾರಕ್ಕೆ ಬಂದು ಕೇವಲ ನಾಲ್ಲೈದು ತಿಂಗಳು ಆಗಿದೆ. ನಾವು ಪ್ರವಾಸೋದ್ಯಮ, ಮೀನುಗಾರಿಕೆ ಅಭಿವೃದ್ಧಿ ಸೇರಿದಂತೆ ಎಲ್ಲಾ ರಂಗದಲ್ಲೂ ಪ್ರಗತಿ ಹೊಂದಲು ಕೆಲಸ ಆರಂಭಿಸಿದ್ದೇವೆ. ಅಭಿವೃದ್ಧಿಗೆ ಎಲ್ಲರೂ ಸೇರಿ ಕೆಲಸ ಮಾಡಬೇಕು. ಅದರಲ್ಲಿ ತಾರತಮ್ಯ ಬೇಡ ಎಂದರು.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
DAKSHINA KANNADA
ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ
ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.
ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.
ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!