Connect with us

BANTWAL

ಇಂದು ಕಡಲತಡಿಗೆ ಬಿಜೆಪಿ ಚಾಣಕ್ಯ ಅಮಿತ್‌ ಶಾ-ಮಂಗಳೂರಿನಲ್ಲಿ ಸಂಜೆ ಬೃಹತ್ ರೋಡ್‌ ಶೋ..!

Published

on

ಕೇಂದ್ರ ಗೃಹ ಸಚಿವ, ಬಿಜೆಪಿ ಚಾಣಕ್ಯ ಅಮಿತ್ ಶಾ ರವರು ಚುನಾವಣಾ ಪ್ರಚಾರಕ್ಕಾಗಿ ಕಡಲ ತಡಿ ಮಂಗಳೂರು ನಗರಕ್ಕೆ ಆಗಮಿಸಲಿದ್ದು ಟೌನ್‌ಹಾಲ್‌ನಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ನಡೆಸಲಿದ್ದಾರೆ.

ಮಂಗಳೂರು : ಕೇಂದ್ರ ಗೃಹ ಸಚಿವ, ಬಿಜೆಪಿ ಚಾಣಕ್ಯ ಅಮಿತ್ ಶಾ ರವರು ಚುನಾವಣಾ ಪ್ರಚಾರಕ್ಕಾಗಿ ಕಡಲ ತಡಿ ಮಂಗಳೂರು ನಗರಕ್ಕೆ ಆಗಮಿಸಲಿದ್ದು ಟೌನ್‌ಹಾಲ್‌ನಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ನಡೆಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಕೈಗೊಳ್ಳ ಬೇಕಾದ ಬಂದೋಬಸ್ತ್‌ ಕುರಿತಂತೆ ಪೊಲೀಸರು ಭಾರಿ ಸಿದ್ದತೆ ನಡೆಸಿದ್ದಾರೆ.

ರೋಡ್ ಶೋ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಇತರ ಜಿಲ್ಲೆಗಳ ಜನರು ಭಾಗವಹಿಸಲಿದ್ದು, ಆ ಪ್ರಯುಕ್ತ ಭದ್ರತೆಯ ಹಿತ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಯ ಹಿತ ದೃಷ್ಠಿಯಿಂದ ಇಂದು ಮಧ್ಯಾಹ್ನ 3 ರಿಂದ ಸಂಜೆ 7 ಗಂಟೆ ವರೆಗೆ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್‌ ಅಳವಡಿಸಿ ವಾಹನ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ. ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರಗಳು ಈ ಕೆಳಗಿನಂತಿದೆ.

ವಾಹನ ಸಂಚಾರದ ಪರ್ಯಾಯ ವ್ಯವಸ್ಥೆಯ ವಿವರ
1.ಉಡುಪಿ-ಮಂಗಳೂರು ರಸ್ತೆಯಲ್ಲಿ ಸಂಚರಿಸುವ ಎಲ್ಲಾ ಬಸ್ತುಗಳು ಕೊಟ್ಟಾರಚೌಕ – ಕೆ.ಪಿ.ಟಿ — ನಂತೂರು – ಶಿವಭಾಗ್ -ಬೆಂದೂರ್‌ವಲ್ – ಕರಾವಳಿ ಸರ್ಕಲ್ – ಕಂಕನಾಡಿ ಸರ್ಕಲ್‌ ವೆಲೆನ್ಸಿಯಾ ಮಂಗಳಾದೇವಿ ವರೆಗೆ ಸಂಚರಿಸುವುದು ಮತ್ತು ಅದೇ ಮಾರ್ಗವಾಗಿ ವಾಪಾಸ್ ಹೋಗುವುದು.

2. ಉಡುಪಿ ಕಡೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣಕ್ಕೆ ಬರುವ ಬಸ್ಸುಗಳು ಕೊಟ್ಟಾರ ಚೌಕಿ – ಕೆ.ಪಿ.ಟಿ – ಬಟ್ಟಗುಡ್ಡ –  ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣಕ್ಕೆ ಹೋಗುವುದು.

3. ತಲಪಾಡಿ ಮತ್ತು ಪಡೀಲ್ ಕಡೆಯಿಂದ ಸ್ಟೇಟ್ ಬ್ಯಾಂಕ್ ಕಡೆಗೆ ಬರುವ ಎಲ್ಲಾ ಬಸ್ತುಗಳು ಪಂಪ್‌ವೆಲ್, ಕರಾವಳಿ ಸರ್ಕಲ್ – ಕಂಕನಾಡಿ ಸರ್ಕಲ್ – ವೆಲೆನ್ಸಿಯಾ – ಮಂಗಳಾದೇವಿ ವರೆಗೆ ಸಂಚರಿಸುವುದು ಮತ್ತು ಅದೇ ಮಾರ್ಗವಾಗಿ – ವಾಪಸ್ಸು ಹೋಗುವುದು.

4. ತಲಪಾಡಿ ಮತ್ತು ಪಡೀಲ್ ಕಡೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣಕ್ಕೆ ಬರುವ ಎಲ್ಲಾ ಬಸ್ತುಗಳು ಪಂಪ್ವೆಲ್ – ನಂತೂರು – ಕೆಪಿಟಿ –  ಕೆ.ಎಸ್.ಅರ್.ಟಿ.ಸಿ ಬಸ್ಸು ನಿಲ್ದಾಣಕ್ಕೆ ಹೋಗುವುದು.

5. ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಡುವ ಎಲ್ಲಾ ಬಸ್‌ ಗಳು ಕೆ.ಎಸ್.ಆರ್.ಟಿ.ಸಿ – ಕುಂಟಿಕಾನ ಮೂಲಕ
ಕೆ.ಪಿ.ಟಿ ಅಥವಾ ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವುದು.

6. ಕೊಟ್ಟಾರ ಚೌಕಿಯಿಂದ ಸ್ಟೇಟ್‌ಬ್ಯಾಂಕ್ ಕಡೆಗೆ ಬರುವ ಎಲ್ಲಾ ಲಘು ವಾಹನಗಳು ಲೇಡಿಹಿಲ್ – ಮಣ್ಣಗುಡ್ಡ ಜಂಕ್ಷನ್ – ಬಂದರ್ ಜಂಕ್ಷನ್ ಮೂಲಕ ಮುಂದಕ್ಕೆ ಸಂಚರಿಸುವುದು.

7. ಲಾಲ್‌ಬಾಗ್ ಕಡೆಯಿಂದ ಬಲ್ಮಠ ಕಡೆಗೆ ಸಂಚರಿಸುವ ಎಲ್ಲಾ ಲಘು ವಾಹನಗಳು ಬಿ.ಜಿ. ಸ್ಕೂಲ್ ಜಂಕ್ಷನ್ (ಬೆಸೆಂಟ್ ಜಂಕ್ಷನ್) – ಜೈಲು ರಸ್ತೆ – ಕರಂಗಲ್ಪಾಡಿ ಬಂಟ್ಸ್ ಹಾಸ್ಟೆಲ್ – ಮಲ್ಲಕಟ್ಟೆಯಾಗಿ ಅಥವಾ ಪಿ.ವಿ.ಎಸ್ – – ಹಾಸ್ಟೆಲ್ – ಮಲ್ಲಿಕಟ್ಟೆಯಾಗಿ ಸಂಚರಿಸುವುದು.
ವಾಹನ ಸಂಚಾರ ನಿಷೇದಿತ ಮಾರ್ಗಗಳು
ಸನ್ಮಾನ್ಯ ಕೇಂದ್ರ ಗೃಹ ಮಂತ್ರಿಯವರು ರೋಡ್ ಶೋ ನಡೆಸುವ ಮಾರ್ಗವಾದ ಟೌನ್‌ ಹಾಲ್‌ ಕೆ.ಬಿ.ಕಟ್ಟೆ – ಹಂಪನಕಟ್ಟ – ಕೆ.ಎಸ್.ಆರ್ ರಸ್ತೆ – ಎಂ.ಗೋವಿಂದ ಪೈ (ನವಭಾರತ) ವೃತ್ತ – ಪಿ.ವಿ.ಎಸ್ ವರೆಗೆ ಎಲ್ಲಾ ಕ್ಲಾಕ್ ಟವರ್ – ರೀತಿಯ ವಾಹನಗಳ ಸಂಚಾರವನ್ನು ಮಧ್ಯಾಹ್ನ 3-00 ಗಂಟೆಯಿಂದ ಸಂಜೆ 7-00 ಗಂಟೆಯವರೆಗೆ ಸಭಾ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. (ತುರ್ತು ಸೇವೆಯ ವಾಹನಗಳು ಮೇಲ್ಕಂಡ ನಿಷೇಧಿತ ರಸ್ತೆಗಳಲ್ಲಿ ಸಂಚರಿಸಬಹುದಾಗಿದೆ.)

ವಿಶೇಷ ಸೂಚನೆ: ಸನ್ಮಾನ್ಯ ಕೇಂದ್ರ ಗೃಹ ಮಂತ್ರಿಯವರು ರೋಡ್ ಶೋ ಸಂಬಂಧ ಮಧ್ಯಾಹ್ನ 3-00 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇದಿಸಲಾಗುತ್ತಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗವನ್ನು ಉಪಯೋಗಿಸುವಂತೆ ಕೋರಿದೆ.

ರಾವ್‌&ರಾವ್ ಸರ್ಕಲ್ – ಲೇಡಿಗೋಷನ್ ಆಸ್ಪತ್ರೆ ರಸ್ತೆ

ಸೆಂಟ್ರಲ್ ಮಾರ್ಕೆಟ್ – ಲೇಡಿಗೋಷನ್ ಆಸ್ಪತ್ರೆ ರಸ್ತೆ

ಸೆಂಟ್ರಲ್ ಮಾರ್ಕೆಟ್ – ಕ್ಲಾಕ್ ಟವರ್ ರಸ್ತೆ 1

ಜಿ.ಹೆಚ್.ಎಸ್ ರಸ್ತೆ ಯಿಂದ – ಕೆ.ಬಿ ಕಟ್ಟೆ ರಸ್ತೆ

ಪಿ.ಎಂ ರಸ್ತೆ – ಕೆ.ಎಸ್ ರಾವ್ ರಸ್ತೆ,

ಶರವು ದೇವಸ್ಥಾನದಿಂದ – ಕೆ.ಎಸ್ ರಾವ್ ರಸ್ತೆ,

• ಬಾವುಟಗುಡ್ಡೆಯಿಂದ (ಸಿಟಿ ಸೆಂಟರ್ ಬಳಿ) ನಿಂದ ಕೆ.ಎಸ್ ರಾವ್‌ ರಸ್ತೆ,

ವಿ.ಟಿ ರಸ್ತೆ – ಬಿಷಪ್ ಹೌಸ್‌ ಕಡೆಯ ರಸ್ತೆ (ಯೆನೊಪೋಯ ಆಸ್ಪತ್ರೆಯ ಬಳಿ) ಗದ್ದೆಗೇರಿ ರಸ್ತೆಯಿಂದ – ಎಂ.ಗೋವಿಂದ ಪೈ ಸರ್ಕಲ್

ಡೊಂಗರಕೇರಿ ರಸ್ತೆಯಿಂದ – ಎಂ.ಗೋವಿಂದ ಪೈ ಸರ್ಕಲ್

ಶಾರದ ಶಾಲೆಯಿಂದ (ಪಿ.ವಿ.ಎಸ್ ಕಲಾಕುಂಜ) – ಎಂ.ಗೋವಿಂದ ಪೈ ಸರ್ಕಲ್ ಪಿ.ವಿ.ಎಸ್. ಜಂಕ್ಷನ್‌ನಿಂದ – ಎಂ.ಗೋವಿಂದ ಪೈ ಸರ್ಕಲ್

ಮಿಲಾಗ್ರಿಸ್ ರಸ್ತೆಯಿಂದ – ಹಂಪನಕಟ್ಟೆ ಜಂಕ್ಷನ್

ಫೋರಂ ಮಾಲ್‌ನಿಂದ – ಎ.ಬಿ ಶೆಟ್ಟಿ ಸರ್ಕಲ್

ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು:

1) ಸನ್ಮಾನ್ಯ ಕೇಂದ್ರ ಗೃಹ ಮಂತ್ರಿಯವರು ಸಂಚರಿಸುವ ರಸ್ತೆಯಲ್ಲಿ ಅಂದರೆ ಮೇರಿಹಿಲ್ ಹೆಅಪ್ಯಾಡ್ ನಿಂದ ಕೆ.ಪಿ.ಟಿ ಜಂಕ್ಷನ್ – ಬಟ್ಟಗುಡ್ಡ – ಕದ್ರಿಕಂಬ್ಳ – ಬಂಟ್ಸ್ ಹಾಸ್ಟೆಲ್ – ಅಂಬೇಡ್ಕರ್ ವೃತ್ತ – ಹಂಪನಕಟ್ಟ ಜಂಕ್ಷನ್ – ಎ.ಬಿ.ಶೆಟ್ಟ ವರೆಗೆ ಹಾಗೂ ಹಂಪನಕಟ್ಟ – ರೈಲ್ವೇ ನಿಲ್ದಾಣ ರಸ್ತೆ ಟೌನ್‌ಹಾಲ್ ರಸ್ತೆಯ ಎರಡೂ ಬದಿಯಲ್ಲಿ ಬೆಳಗ್ಗೆ 07.00 – ಗಂಟೆಯಿಂದ ಸಂಜೆ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

8. ಸನ್ಮಾನ್ಯ ಕೇಂದ್ರ ಗೃಹ ಮಂತ್ರಿಯವರು ರೋಡ್ ಶೋ ನಡೆಯುವ ಮಾರ್ಗವಾದ ಟೌನ್‌ಹಾಲ್ ಕೆ.ಬಿ.ಕಟ್ಟೆ – ಹಂಪನಕಟ್ಟ – ಕೆ.ಎಸ್.ಆರ್ ರಸ್ತೆ ಎಂ.ಗೋವಿಂದ ಪೈ (ನವಭಾರತ) ವೃತ್ತ – ಪಿ.ವಿ.ಎಸ್ ವರೆಗಿನ ಕ್ಲಾಕ್ ಟವರ್ – ರಸ್ತೆಯ ಎರಡೂ ಬದಿಗಳಲ್ಲಿ ಬೆಳಗ್ಗೆ 07.00 ಗಂಟೆಯಿಂದ ಸಂಜೆ ಕಾರ್ಯಕ್ರಮ ಮುಗಿಯುವವರೆಗೆ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಕಾರ್ಯಕ್ರಮಕ್ಕೆ ಬರುವ ವಾಹನ ಮಾಲಕರು/ಚಾಲಕರು ಈ ಕೆಳಕಂಡಂತೆ ಗುರುತಿಸಲಾದ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಈ ಸ್ಥಳದಲ್ಲಿ ಮಾಡಿ:

01. ಕೆನರಾ ಹೈಸ್ಕೂಲ್ ಮೈದಾನ, ಡೊಂಗರಕೇರಿ

02. ಸಂತ ಅಲೋಶಿಯಸ್ ಶಾಲಾ ಮೈದಾನ, ಬಾವುಟಗುಡ್ಡ,

03.ರೊಜಾರಿಯೋ ಶಾಲಾ ಮೈದಾನ, ಪಾಂಡೇಶ್ವರ

BANTWAL

BANTWAL: ಬಸ್ – ಕಾರು ನಡುವೆ ಅಪಘಾತ; ಕಾರು ಚಾಲಕ ಗಂ*ಭೀರ

Published

on

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬಲೆನೋ ಕಾರಿನ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕನನ್ನು ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಮುಂಜಾನೆ ಈ ಅಪಘಾತ ನಡೆದಿದೆ.

ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವ ಬಸ್ ಹಾಗೂ ಬೆಳ್ತಂಗಡಿಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದರೆ, ಬಸ್‌ನ ಮುಂಬಾಗ ಜಖಂಗೊಂಡಿದೆ.

ತಕ್ಷಣ ಸ್ಥಳೀಯರ ನೆರವಿನಿಂದ ಕಾರಿನಲ್ಲಿ ಸಿಲುಕಿದ್ದ ಚಾಲಕನನ್ನು ಹೊರ ತೆಗೆದು ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಚಾಲಕನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

BANTWAL

WATCH VIDEO : ಬಂಟ್ವಾಳದಲ್ಲಿ ಧರ್ಮಗುರುವಿನ ಪೈಶಾಚಿಕ ಕೃತ್ಯ; ಅಸಹಾಯಕ ವೃದ್ಧ ದಂಪತಿಗೆ ಹಿಗ್ಗಾಮುಗ್ಗ ಥಳಿತ

Published

on

ಬಂಟ್ವಾಳ : ಕ್ರೈಸ್ತ ದಂಪತಿ ಮೇಲೆ ಧರ್ಮಗುರುವೊಬ್ಬರು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಟ್ಲ ಸಮೀಪದ ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ 79 ವರ್ಷ ಪ್ರಾಯದ ಗ್ರೆಗರಿ ಮೊಂತೇರೋ ಹಾಗೂ ಅವರ ಪತ್ನಿ ಮೇಲೆ ಮನೆಲಾ ಚರ್ಚ್‌ನ ಪ್ರಧಾನ ಧರ್ಮ ಗುರು ನೆಲ್ಸನ್‌ ಒಲಿವೆರಾ ಅವರು ಹಲ್ಲೆ ಮಾಡಿದ್ದಾರೆ.

ಫಾದರ್ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಫೆ.29 ರ ಮುಂಜಾನೆ ಈ ಘಟನೆ ನಡೆದಿದೆ. ಮನೆ ಶುದ್ಧ ಭೇಟಿ ನಿಮಿತ್ತ ವೃದ್ಧ ದಂಪತಿಗಳ ಮನೆಗೆ ಬಂದಿದ್ದ ಫಾದರ್ ಒಲಿವೆರಾ ಗೇಟ್‌ ಬಳಿಯಲ್ಲೇ ಗ್ರೆಗರಿ ಮೊಂತೆರೋ ಅವರಿಗೆ ಕಾಲಿನಿಂದ ತುಳಿದು ಹಲ್ಲೆ ಮಾಡಿದ್ದಾರೆ.

ಇಷ್ಟೇ ಅಲ್ಲದೆ, ಕುತ್ತಿಗೆ ಹಿಡಿದು ಎಳೆದಾಡಿದ್ದು, ಕೋಲಿನಿಂದಲೂ ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೇಳೆ ಗ್ರೆಗರಿ ಮೊಂತೆರಾ ಅವರ ಪತ್ನಿ ಪ್ರತಿರೋಧ ತೋರಿಸಿದ್ರೂ ಫಾದರ್ ಜೊತೆಗಿದ್ದ ವ್ಯಕ್ತಿ ವೃದ್ಧೆಯನ್ನು ಅಡ್ಡ ಗಟ್ಟಿದ್ದಾನೆ.

ಆದರೆ, ಫಾದರ್ ಅವರಿಗೂ ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ. ಫಾಧರ್ ಆಗಿದ್ದು ವಯೋ ವೃದ್ಧರಿಗೆ ಗೌರವ ಕೊಡಲು ಗೊತ್ತಿಲ್ಲದ ಇಂತಹ ನೀಚನ ವಿರುದ್ಧ ಕ್ರಮ ಕೈಗೊಳ್ಳಿ ಅಂತ ವೃದ್ಧ ದಂಪತಿ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಫಾದರ್‌ ಪರ ಹಲವರು ವಿಟ್ಲ ಠಾಣೆ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Continue Reading

BANTWAL

ಬಾಲವಿಕಾಸದಲ್ಲಿ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Published

on

ವಿಟ್ಲ: ಪೆರಾಜೆ, ಮಾಣಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವರ ಸಹಭಾಗಿತ್ವದಲ್ಲಿ ಫೆ. 28 ರಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾನಗರ ಪೆರಾಜೆ, ಮಾಣಿ ಇಲ್ಲಿ 2023-24 ನೇ ಸಾಲಿನ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕ ಹಾಗೂ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ  ಪ್ರಹ್ಲಾದ್ ಶೆಟ್ಟಿ ಜೆ  ಪರೀಕ್ಷಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಎಳವೆಯಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವಿದ್ದಾಗ ಮುಂದಿನ ದಿನಗಳಲ್ಲಿ ಸದೃಢ ದೇಶ ಕಟ್ಟಬಲ್ಲರು ಎಂದು ಹೇಳಿ ಪರೀಕ್ಷಾ ಶಿಬಿರಕ್ಕೆ ಶುಭ ಹಾರೈಸಿದರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಸ್ವಾಗತಿಸಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಬ್ ವಿಭಾಗದ ಶಿಬಿರ ನಾಯಕಿ ಯಮುನಾ,ಬುಲ್ ಬುಲ್ ವಿಭಾಗದ ಶಿಬಿರ ನಾಯಕಿ ಯಶೋಧ ಕೆ (HWB) ರವರು ಉಪಸ್ಥಿತರಿದ್ದರು. ಪರೀಕ್ಷಾ ಶಿಬಿರದಲ್ಲಿ ಸಹಾಯಕರಾಗಿ ಕಬ್ ಮಾಸ್ಟರ್ ಮತ್ತು ಫ್ಲಾಕ್ ಲೀಡರ್ ಗಳಾದ ಕಾಂತಪ್ಪ, ಸುಮಾ, ಅಮಿತಾ ಎಸ್, ಪ್ರಮೀಳಾ, ಕುರ್ಶಿದ, ಯೋಗಿನಿ, ಚಿತ್ರ ಕೆ, ವೀಣಾ, ಶೀಲಾವತಿ, ಪ್ರಮೀಳಾ ಕ್ರಾಸ್ತಾ, ಸೌಮ್ಯ ಹಾಗೂ ಸ್ಕೌಟ್ ಮತ್ತು ಗೈಡ್ ಶಿಕ್ಷಕಿ ಸಪ್ನ, ಅನಿತಾ ಗೌರಿ, ಲೀಲಾರವರು ಸಹಕರಿಸಿದರು. ಕಬ್ ವಿಭಾಗದಲ್ಲಿ 77 ವಿದ್ಯಾರ್ಥಿಗಳು ಹಾಗೂ ಬುಲ್ ಬುಲ್ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಒಟ್ಟು 143 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದ್ದರು. ಸ್ವಯಂ ಸೇವಕರಾಗಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಕರಿಸಿದರು. ಗೈಡ್ ಕ್ಯಾಪ್ಟನ್ ಸುಪ್ರಿಯಾ ಡಿ ಕಾರ್ಯಕ್ರಮ ನಿರೂಪಿಸಿದರು.

Continue Reading

LATEST NEWS

Trending