Friday, August 12, 2022

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.


ದೇಶದ ಜನ ಸಂಭ್ರಮಿಸುವ ಸಂದರ್ಭ. ನರೇಂದ್ರ ಮೋದಿ ನಾಯಕತ್ವವನ್ನು ಸಮರ್ಥಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ಸರ್ಕಾರ ನಡೆಸಲಾಗಿದೆ. ಪ್ರಾದೇಶಿಕ ಪಕ್ಷಗಳು ಕೂಡಾ ಬಿಜೆಪಿ ಈ ದೇಶಕ್ಕೆ ಅನಿವಾರ್ಯವೆಂದು ಸಂದೇಶ ನೀಡಿದ್ದಾರೆ.

ರಾಷ್ಟ್ರೀಯತೆ, ಹಿಂದುತ್ವ ಎಂಬ ಧ್ಯೇಯದಡಿ ಅಧಿಕಾರ ಮುಖ್ಯವಲ್ಲ ಎಂದು ಫಡ್ನವೀಸ್‌ ತೋರಿಸಿಕೊಟ್ಟಿದ್ದಾರೆ. ಅಲ್ಲಿಯ ಜನರಿಗೆ ಕೇಂದ್ರ ಸರಕಾರ ಎಲ್ಲಾ ಯೋಜನೆ ತಲುಪಿಸುವ ಕಾರ್ಯವನ್ನು ಬಿಜೆಪಿ ಮಾಡಲಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಸಂಭ್ರಮ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

Hot Topics

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...

ಮಂಗಳೂರು ಪಾಲಿಕೆಯ ಸದಸ್ಯ ಎ.ಸಿ ವಿನಯ್ ರಾಜ್‌ಗೆ ಪುತ್ರ ವಿಯೋಗ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಹಾಗೂ ವಿಪಕ್ಷ ನಾಯಕ ಎ.ಸಿ ವಿನಯ್ ರಾಜ್ ಅವರ ಪುತ್ರ ರಾಹುಲ್ ವಿನಯರಾಜ್ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ.ಇಂದು ಸಂಜೆ ಮಂಗಳೂರಿನ ಜೆಪ್ಪುವಿನಲ್ಲಿರುವ ಸಂತ. ಆಂತೋನಿ...

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

ವಿಶೇಷ ವರದಿಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು...