Home ಪ್ರಮುಖ ಸುದ್ದಿ ಆ್ಯಸಿಡ್‌ ದಾಳಿಯ ಸಂತ್ರಸ್ಥೆಯನ್ನ ಭೇಟಿ ಮಾಡಿದ ಬಿಜೆಪಿ ನಿಯೋಗ: ಧೈರ್ಯದೊಂದಿಗೆ ಸಕಲ ನೆರವಿನ ಭರವಸೆ

ಆ್ಯಸಿಡ್‌ ದಾಳಿಯ ಸಂತ್ರಸ್ಥೆಯನ್ನ ಭೇಟಿ ಮಾಡಿದ ಬಿಜೆಪಿ ನಿಯೋಗ: ಧೈರ್ಯದೊಂದಿಗೆ ಸಕಲ ನೆರವಿನ ಭರವಸೆ

ಆ್ಯಸಿಡ್‌ ದಾಳಿಯ ಸಂತ್ರಸ್ಥೆಯನ್ನ ಭೇಟಿ ಮಾಡಿದ ಬಿಜೆಪಿ ನಿಯೋಗ: ಧೈರ್ಯದೊಂದಿಗೆ ಸಕಲ ನೆರವಿನ ಭರವಸೆ

ಮಂಗಳೂರು : ಬಾವನಿಂದಲೇ ಆಸಿಡ್ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿತಾ ಇರುವ ಕಡಬ ತಾಲೂಕಿನ ಕೋಡಿಂಬಾಳದ ನಿವಾಸಿ ಸ್ವಪ್ನಾ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಬಿಜೆಪಿ ನಿಯೋಗ ಭೇಟಿಯಾಗಿ ಆರೋಗ್ಯ ವಿಚಾರಿಸಿತು.
ಆಸಿಡ್ ಸಂತ್ರಸ್ಥೆಗೆ ಧೈರ್ಯ ತುಂಬಿದ ನಿಯೋಗ ಸಕಲ ನೆರವು ನೀಡುವುದಾಗಿ ವಾಗ್ದಾನ ಮಾಡಿದರು.ಮಂಗಳೂರಿನ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಜಗದೀಶ್ ಶೇಣವ, ಮತ್ತಿತರ ಬಿಜೆಪಿ ನಿಯೋಗದಲ್ಲಿದ್ದರು.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇದೊಂದು ಘೋರ ಕೃತ್ಯ ವಾಗಿದ್ದು ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸ್ವಪ್ನ ಕುಟುಂಬ ಆರ್ಥಿಕ ಸಮಸ್ಯೆಯಿಂದ ಬಳಲ್ತಾ ಇದೆ. ಸಂತ್ರಸ್ಥೆಗೆ ಚಿಕಿತ್ಸಾ ವೆಚ್ಚವೇ 5 ಲಕ್ಷ ರೂಪಾಯಿ ಆಗಲಿದ್ದು ಇದನ್ನು ಸರ್ಕಾರದಿಂದ ಭರಿಸಲು ಕ್ರಮ ಕೈಗೊಳ್ಳಲಾಗುವುದು ಮತ್ತು ಭೂ ವಿವಾದಕ್ಕೆ ಸಂಬಂಧ ಪಟ್ಟಂತ್ತೆ ಈ ಘಟನೆ ನಡೆದಿದೆ ಎನ್ನಲಾಗ್ತ ಇದ್ದು, ಶೀಘ್ರವೇ ಸಂತ್ರಸ್ಥೆ ಮಹಿಳೆಗೆ ನಿವೇಶವನ್ನು ಮಂಜೂರು ಮಾಡುವಲ್ಲಿ ಕ್ರಮ ಕೈಗೋಳ್ಳಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಸಂತ್ರಸ್ಥೆಯನ್ನು ಭೇಟಿ ಮಾಡಿದ ವಿಶ್ವ ಹಿಂದೂಪರಿಷತ್‌ ನಿಯೋಗ 1 ಲಕ್ಷ ಧನ ಸಹಾಯ ಮಾಡುವುದಾಗಿ ಆಶ್ವಾಸನೆ ನೀಡಿದೆ. ಅದೂ ಅಲ್ಲದೆ ಸಂತ್ರಸ್ಥೆಯ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡಿದೆ.

ವಿಡಿಯೋಗಾಗಿ..

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...