Connect with us

DAKSHINA KANNADA

ಕೊರೊನಾ ನಿಯಂತ್ರಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲ ರಮಾನಾಥ ರೈ ವಾಗ್ಧಾಳಿ..!

Published

on

ಮಂಗಳೂರು: ನಾಯಕರು ಅಂದರೆ  ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ‌ ಅಲ್ಲಾ ಎಂದು ಬಿಜೆಪಿ ಮುಖಂಡ ಸಿ ಟಿ ರವಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮ ಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಬಿ ರಮಾನಾಥ ರೈ,

ಸಿ.ಟಿ.ರವಿ ಒಬ್ಬ ಕುಲ ಗೋತ್ರ ಗೊತ್ತಿಲ್ಲದ ಮನುಷ್ಯ. ತನ್ನ ಕುಲ ಗೋತ್ರ ಯಾವುದು ಎಂಬುದು ಅವನಿಗೆ ಗೊತ್ತಿಲ್ಲ. ರಾಜೀವ್ ಗಾಂಧಿ, ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ತೆತ್ತವರು.

ಕಾಂಗ್ರೆಸ್ ನಾಯಕರು ಹೋರಾಟ ಮಾಡಿ ಜೈಲಿಗೆ ಹೋದ್ರೆ, ಯಡಿಯೂರಪ್ಪ ನವರು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವರು.
ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವರೇ ಬಿಜೆಪಿಯವರಿಗೆ ಉತ್ತಮ ನಾಯಕರು ಎಂದು ಅವರು ಟೀಕಿಸಿದ್ದಲ್ಲದೆ ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ.

ಕೇವಲ ಬಾಯಿ ಮಾತಿನ ಉಪಚಾರದಿಂದ ಕೊರೊನಾ ನಿಯಂತ್ರಣ ಆಗುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಕೋವಿಡ್‌ ನಿಯಂತ್ರಿಸುವಲ್ಲಿ ಚುರುಕಿಲ್ಲ.

ಅಧಿಕಾರಿಗಳು ಮತ್ತು ಸಚಿವರು, ಶಾಸಕರ ನಡುವೆ ಸಮನ್ವಯ ಇಲ್ಲದಾಗಿದೆ. ನೈಟ್ ಕರ್ಪ್ಯೂ ಹಾಕಿ ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.

ಟ್ರಾಫಿಕ್ ಜಾಮ್ ಸಮಸ್ಯೆಯನ್ನ ಕೂಡಲೇ ಬಗೆಹರಿಸಬೇಕು. ಕೊವಿಡ್ ಲಾಕ್ ಡೌನ್ ಬಗ್ಗೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಚರ್ಚೆ ಆಗುತ್ತಿದೆ. ನೈಟ್ ಕರ್ಪ್ಯೂ ಹಾಕಿ ಡೇ ಟೈಮ್ ಜನರನ್ನು ಫ್ರೀ ಬಿಡುತ್ತಿದ್ದಾರೆ. ಕೊರೊನಾ ಏನು ರಾತ್ರಿ ಸಮಯದಲ್ಲಿ ಮಾತ್ರ ಬರೋದಾ ? ಎಂದು ಪ್ರಶ್ನಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

BELTHANGADY

ಕಾಂಗ್ರೆಸ್ ಹಿರಿಯ ಮುಖಂಡ ವಸಂತ ಬಂಗೇರ ವಿಧಿವಶ

Published

on

ಬೆಳ್ತಂಗಡಿ: ಕಾಂಗ್ರೆಸ್ ಹಿರಿಯ ಮುಖಂಡ ಬೆಳ್ತಂಗಡಿ ಮಾಜಿ ಶಾಸಕ, ಸಚಿವ ವಸಂತ ಬಂಗೇರ(79 ವ) ಇಂದು(ಮೇ.8) ಸಂಜೆ 4 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಇವರು ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

vasanth bangera

ಮುಂದೆ ಓದಿ..; ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್; 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

1946 ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ಜನಿಸಿದ ಇವರು ದಿ. ಕೇದೆ ಸುಬ್ಬ ಪೂಜಾರಿ ಹಾಗೂ ದಿ. ದೇವಕಿ ದಂಪತಿ ಪುತ್ರ. 1972 ರಲ್ಲಿ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಆಗುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. 1983 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 1985 ರಲ್ಲಿ ಮತ್ತೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1989 ರಲ್ಲಿ ಬಿಜೆಪಿ ತೊರೆದು ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಮತ್ತೆ 1994 ರಲ್ಲಿ  ಜೆಡಿಎಸ್‌ನಿಂದ ಸ್ಪರ್ಧಿಸಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸುಮಾರು 52 ವರ್ಷಗಳ ಕಾಲ ರಾಜಕೀಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿ ಕೊಡುಗೈ ದಾನಿಯಾಗಿಯಾಗಿದ್ದರು. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂಧು ವರ್ಗದವರನ್ನು ಅಗಲಿದ್ದಾರೆ.

ಮೇ. 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

Continue Reading

DAKSHINA KANNADA

ಮೇ 9 ರಂದು SSLC ಫಲಿತಾಂಶ ಪ್ರಕಟ…!

Published

on

ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್‌ 25 ರಿಂದ ಎಪ್ರಿಲ್ 6 ರ ವರೆಗೆ ಪರೀಕ್ಷೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆಗೆ ವಿಳಂಭವಾಗಿದೆ ಎಂದು ಹೇಳಿದೆ


2023- 24ರ SSLC ಪರೀಕ್ಷೆಯಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ವಿದ್ಯಾರ್ಥಿಗಳು ರೀ ಎಕ್ಸಾಂ ಬರೆದಿದ್ದಾರೆ. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ.

ಫಲಿತಾಂಶವನ್ನು ನೋಡಲು ಈ ವೆಬ್‌ಸೈಟ್ ಬಳಸಿ..!

ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. kseab.karnataka.gov.in ಹಾಗೂ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯ ಕಲಾವೈವಿಧ್ಯತೆಗೆ ಮಾರುಹೋದ ವಿದೇಶಿಗರು

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ವಿವಿಧ ವೈವಿಧ್ಯಮಯ ಕ್ಷೇತ್ರವನ್ನು ಒಳಗೊಂಡಿರುವ ಕರಾವಳಿ ನಗರಿ. ಇಲ್ಲಿಗೆ ಬಂದ ವಿದೇಶಿ ಪ್ರಜೆಗಳು ಇಲ್ಲಿನ ವಿಶೇಷತೆಗಳನ್ನು ನೋಡಿ ಮನಸೋಲುತ್ತಾರೆ. ನವಮಂಗಳೂರು ಬಂದರಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಹಲವು ವಿದೇಶಿ ಪ್ರವಾಸಿ ಹಡಗುಗಳು ಬಂದಿದ್ದು, ಇಲ್ಲಿನ ವಿಶೇಷ ತಾಣಗಳಿಗೆ ಭೇಟಿ ನೀಡಿ ಆನಂದ ಪಟ್ಟರು.


ವಿದೇಶಿ ಹಡಗಿನಲ್ಲಿ ಬಂದಿಳಿದ ಯುಎಸ್ಎ, ನೆದರ್ ಲ್ಯಾಂಡ್, ಉಕ್ರೇನ್, ಯುನೈಟೆಡ್ ಕಿಂಗ್‌ಡಂ, ಅಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಪಿಲಿಫೈನ್ಸ್ ದೇಶದ ಸುಮಾರು 120 ಜನ ವಿದೇಶಿಗಳು, ಜಗತ್ಪ್ರಸಿದ್ದ ಸಾವಿರ ಕಂಬ ಬಸದಿಗೆ ಭೇಟಿ ನೀಡಿ ಅಲ್ಲಿ ಕಲಾಸೌಂದರ್ಯಕ್ಕೆ ಮಾರು ಹೋದರು.

ಇದನ್ನೂ ಓದಿ : ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!


ಮಂಗಳೂರು ಮೂಲದ ಕ್ಯಾಲಿಫೋರ್ನಿಯ ಉದ್ಯೋಗಿ ಸಚಿನ್ ಪಡಿವಾಳ್ ಅವರನ್ನು ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ ಸನ್ಮಾನಿಸಿದರು. ಈ ಸಂದರ್ಭ ಮಂಗಳೂರು ಟ್ರಾವೆಲ್ ಗೈಡ್ ರೋಹನ್, ರೋಷನ್, ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Continue Reading

LATEST NEWS

Trending