Connect with us

LATEST NEWS

ನಾಯಕರು, ವಕ್ತಾರರಿಗೆ ಲಗಾಮು ಹಾಕಲು ಹೊರಟ ಬಿಜೆಪಿ: ಮಾಧ್ಯಮ ಚರ್ಚೆಯಲ್ಲಿ ಭಾಗಿಯಾಗುವವರಿಗೆ ಮಾರ್ಗಸೂಚಿ

Published

on

ನವದೆಹಲಿ: ಟಿವಿ ಚರ್ಚೆಯೊಂದರಲ್ಲಿ ಬಿಜೆಪಿ ವಕ್ತಾರರು ನೀಡಿದ ಹೇಳಿಕೆ ವಿಶ್ವಾದ್ಯಂತ ಖಂಡನೆಗೆ ಕಾರಣವಾಗಿತ್ತು. 15ಕ್ಕೂ ಹೆಚ್ಚು ರಾಷ್ಟ್ರಗಳು ಭಾರತದ ರಾಯಭಾರಿಗಳಿಗೆ ಖಂಡನಾ ನಿರ್ಣಯ ನೋಟೀಸ್‌ ಕೊಟ್ಟು ಚರ್ಚೆಗೆ ಕಾರಣವಾಗಿತ್ತು.

ಸದ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದ ಇಬ್ಬರನ್ನು ಪಕ್ಷದಿಂದಲೇ ಗೇಟ್‌ಪಾಸ್‌ ನೀಡಲಾಗಿದೆ. ಜೊತೆಗೆ ಅಂತಹ ಮಾತುಗಳನ್ನಾಡುವವರಿಗೆ ಕಡಿವಾಣ ಹಾಕುವುದಕ್ಕೆ ಬಿಜೆಪಿ ಲಕ್ಷ್ಮಣ ರೇಖೆ ಎಳೆದಿದೆ.

ಈ ಹಿನ್ನೆಲೆಯಲ್ಲಿ ಪಕ್ಷದ ಭಾಗವಾಗಿ ಯಾರು ಮಾತನಾಡಬೇಕು. ಏನೆಲ್ಲಾ ಮಾತನಾಡಬೇಕು ಅನ್ನುವ ಬಗ್ಗೆ ನಾಯಕರಿಗೆ ಬಿಜೆಪಿ ಮಾರ್ಗಸೂಚಿಯೊಂದನ್ನ ಜಾರಿ ಮಾಡಿದೆ ಎಂದು ಟಿವಿ ಮಾಧ್ಯಮವೊಂದು ವರದಿ ಮಾಡಿದೆ.
1.ಯಾವುದೇ ಮಾಧ್ಯಮಗಳ ಕಾರ್ಯಕ್ರಮದಲ್ಲಿ ಎಲ್ಲಾ ನಾಯಕರು ಭಾಗಿಯಾಗುವುದಕ್ಕೆ ನಿಯಂತ್ರಣ ಹೇರಲಾಗಿದೆ.
2. ಪಕ್ಷದ ಕೆಲವೇ ಕೆಲವು ವಕ್ತಾರರಿಗೆ ಮಾತ್ರ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಕ್ಕೆ ಅವಕಾಶ. ಈ ಬಗ್ಗೆ ಬಿಜೆಪಿ ಮಾಧ್ಯಮ ವಿಭಾಗಕ್ಕೆ ಸೂಚನೆ ನೀಡಲಾಗಿದೆ.
3. ಕಾರ್ಯಕ್ರಮ, ಚರ್ಚೆಗಳಲ್ಲಿ ಭಾಗಿಯಾಗುವ ನಾಯಕರು, ಅಗತ್ಯ ಸಿದ್ಧತೆಗಳನ್ನ ಮಾಡಿಕೊಳ್ಳಬೇಕು.
5. ಚರ್ಚೆಯ ವಿಷಯದ ಬಗ್ಗೆ ಪಕ್ಷದ ಅಭಿಪ್ರಾಯ ಏನು ಅನ್ನುವುದನ್ನು ಸ್ಪಷ್ಟವಾಗಿ ಹೇಳಬೇಕು.
6. ಚರ್ಚೆಗಳಲ್ಲಿ ಏನು ಮಾತನಾಡಬಾರದು, ಏನು ಮಾತನಾಡಬೇಕು ಎಂಬುವುದರ ಬಗ್ಗೆ ಒಂದಷ್ಟು ಸೂಚನೆಯನ್ನು ರವಾನಿಸಲಾಗಿದೆ.
7. ಚರ್ಚೆಗಳಲ್ಲಿ ಭಾಗಿಯಾದಾಗ ನಿಯಂತ್ರಿತ ಭಾಷೆಗಳನ್ನ ಬಳಸಬೇಕು.
8.ಚರ್ಚಾ ಕಾರ್ಯಕ್ರಮಗಳಲ್ಲಿ ಯಾವುದೇ ಕಾರಣಕ್ಕೆ ಉದ್ವೇಗಕ್ಕೆ ಒಳಗಾಗಿ ಮಾತನಾಡಬಾರದು.
9. ಪಕ್ಷದ ಸಿದ್ಧಾಂತ ಮತ್ತು ತತ್ವಗಳಿಗೆ ಅನುಗುಣವಾಗಿ ಮಾತನಾಡಬೇಕು.
10. ಧಾರ್ಮಿಕ ವಿಚಾರ ಹಾಗೂ ಧಾರ್ಮಿಕ ಚಿಹ್ನೆಗಳ ಬಗ್ಗೆ ಮಾತಗಳನ್ನಾಡಬಾರದು.
11. ಪಕ್ಷದ ಅಜೆಂಡಾಗಳನ್ನು ಹೊರತುಪಡಿಸಿ ಬೇರೇನೂ ಮಾತನಾಡಬಾರದು
ಎಂಬಿತ್ಯಾದಿಯ ಕಟ್ಟು ನಿಟ್ಟಿನ ಸೂಚನೆಗಳನ್ನು ರವಾನಿಸಲಾಗಿದೆ. ಈ ಮೂಲಕ ನಾಯಕರ ಬೇಕಾಬಿಟ್ಟಿ ಮಾತಿಗೆ ಲಗಾಮು ಹಾಕಲು ಬಿಜೆಪಿ ನಿರ್ಧರಿಸಿದಂತಿದೆ.

DAKSHINA KANNADA

MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ

Published

on

ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ.

ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.

 

ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ.

ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.

Continue Reading

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

LATEST NEWS

ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

Published

on

ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.

murder

ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.

Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Continue Reading

LATEST NEWS

Trending