ಮಂಗಳೂರು: ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ ರೈ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೆಲವು ಅಂಗನವಾಡಿ ಕಾರ್ಯಕರ್ತರು ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳುವ ಕೆಲಸವನ್ನೂ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಶಾಲಾ ಶಿಕ್ಷಕರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಸರಿಯಲ್ಲ.
ಆದರೆ ಅವರನ್ನು ಗೌರವಿಸುವುದು ಬಿಟ್ಟು ಅವರನ್ನು ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎನ್ನುವ ಕಾರಣಕ್ಕೆ ತರಾಟೆಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದರು.
ಇದಲ್ಲದೆ ಕನ್ನಡ ಶಾಲಾ ಮಕ್ಕಳ ಹಬ್ಬ ಎನ್ನುವ ಸರಕಾರಿ ಕಾರ್ಯಕ್ರಮವನ್ನು ಮಾಡಲಾಗಿದ್ದು, ಬಿಜೆಪಿಯ ಕೇಶವ ಸಂವರ್ಧನ ಸಮಿತಿ ಸಹಯೋಗದೊಂದಿಗೆ ಮಾಡಿದ್ದಾರೆ. ಆರ್‌ಎಸ್‌ಎಸ್‌ನ ಸಂಘನಿಕೇತನದಲ್ಲಿ ಈ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದಾರೆ.
ಮಕ್ಕಳ ಪ್ರತಿಭಾ ಪ್ರದರ್ಶನ ಮಾಡಲು ಡಿಡಿಪಿಐ ಸುತ್ತೋಲೆ ಕಳುಹಿಸಿದ್ದಾರೆ. ಈ ಕಾರ್ಯಕ್ರಮವನ್ನು ಸರಕಾರಿ ಶಾಲೆಯಲ್ಲಿ ಮಾಡಬಹುದಾಗಿತ್ತಲ್ಲವೇ ಎಂದು ಪ್ರಶ್ನಿಸಿದರು.
ಇಲಾಖೆಯನ್ನು ಆಡಳಿತ ಯಂತ್ರವನ್ನು ದುರುಪಯೋಗವನ್ನು ಮಾಡುವುದನ್ನು ನಾವು ಬಿಡಲಾರೆವು ಎಂದರು.
ಸುದ್ದಿಗೋಷ್ಠಿಯಲ್ಲಿ ನಾಯಕರಾದ ಕೋಡಿಜಾಲ್ ಇಬ್ರಾಹಿಂ , ಚಂದ್ರಪ್ರಕಾಶ್ ಶೆಟ್ಟಿ ಮೊದಲಾದವರಿದ್ದರು.