DAKSHINA KANNADA
ಬಿಜೆಪಿಯವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡೋದು ಸರಿ, ನಾವು ಪೋಸ್ಟರ್ ಹಾಕೋದು ತಪ್ಪಾ-ಖಾದರ್ ವಾಗ್ದಾಳಿ
Published
2 years agoon
By
Adminಮಂಗಳೂರು: ಇತ್ತೀಚೆಗೆ ನಾವು ಪೇ ಸಿಎಂ ಪೋಸ್ಟರ್ ಅಂಟಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಬಿಜೆಪಿಯವರು ಸೋಶಿಯಲ್ ಮೀಡಿಯಾದಲ್ಲಿ ರಾಹುಲ್, ಸೋನಿಯಾ, ಸಿದ್ದರಾಮಯ್ಯ ಬಗ್ಗೆ ಇವರು ಏನೇನೂ ಹಾಕಿಲ್ವಾ? ಆಗ ಯಾಕೆ ತನಿಖೆ ಮಾಡಿಲ್ಲ. ಇದು ಕಾಂಗ್ರೆಸ್ನವರು ಮಾಡಿದರೆ ಮಾತ್ರ ತಪ್ಪಾ? ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪೋಸ್ಟರ್ ವಾರ್ಗೆ ಸಂಬಂಧಿಸಿ ಮಾತನಾಡಿ ‘ಬಿಜೆಪಿಯವರು ಸಾಮಾಜಿಕ ಜಾಲತಾಣದಲ್ಲಿ ಏನು ಬೇಕಾದರು ಹಾಕಬಹುದು. ಆಗ ಯಾಕೆ ತನಿಖೆ ಮಾಡಿಲ್ಲ, ನಾವು ಹಾಕಿದ್ರೆ ಮಾತ್ರ ತಪ್ಪಾ, ಅವರು ಮಾಡೋದು ಎಲ್ಲಾನೂ ಸರೀನಾ ಆ ಬಗ್ಗೆಯೂ ತನಿಖೆ ಆಗಲಿ ಎಂದು ವಾಗ್ದಾಳಿ ನಡೆಸಿದರು.
ಇನ್ನು ಪಿಎಫ್ ಐ ಮತ್ತು ಎಸ್ ಡಿಪಿಐ ಕಾರ್ಯಕರ್ತರ ಕಚೇರಿ ಮೇಲೆ ಎನ್ಐಎ ದಾಳಿ ವಿಚಾರಕ್ಕೆ ಸಂಬಂಧಿಸಿ ಸಮಾಜದಲ್ಲಿ ಅಶಾಂತಿ, ಭಯ, ಕೊಲೆ ಇವತ್ತು ಹೆಚ್ಚಾಗಿದೆ. ಈ ರೀತಿ ಭಯ ಹುಟ್ಟಿಸೋ ಕೆಲಸ ಯಾರೇ ಮಾಡಿದರೂ ಸಾಕ್ಷಿ ಇದ್ದರೆ ತಾರತಮ್ಯ ಮಾಡದೇ ಕಾನೂನು ಕ್ರಮ ಕೈಗೊಳ್ಳಲಿ. ಆದರೆ ಕಾನೂನು ಪಾಲಿಸುವಾಗ ಯಾವುದೇ ತಾರತಮ್ಯ ಬೇಡ.
ಸರ್ಕಾರ ಬಿಜೆಪಿ ಕೈಯ್ಯಲಿದೆ, ಸಾಕ್ಷಿ ಒದಗಿಸಿ ಕ್ರಮ ತೆಗೆದುಕೊಳ್ಳಲಿ. ಈ ದೇಶದಲ್ಲಿ ಕಾನೂನು ಇರುವಾಗ ಯಾರ ಕೇಸನ್ನೂ ಹಾಗೆ ತೆಗೆಯಲು ಆಗಲ್ಲ.
ಗುಂಪು ಗಲಭೆ ಆದಾಗ ಕೆಲವರ ಮೇಲೆ ಕೇಸ್ ಆದಾಗ ವಾಪಾಸ್ ತೆಗೆಯಲು ಅವಕಾಶ ಇದೆ. ಸುಮ್ಮನೆ ಆರೋಪ ಮಾಡೋದು ಸರಿಯಲ್ಲ, ದಾಖಲೆ ತೋರಿಸಲಿ’ ಎಂದು ಹೇಳಿದರು.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಬಗ್ಗೆ ಮಾತನಾಡಿ ‘ಈ ಪಾದಯಾತ್ರೆಯು ತಿಂಗಳ ಕೊನೆಗೆ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಬರಲಿದೆ. ರಾಹುಲ್ ಗಾಂಧಿಯವರ ಪಾದಯಾತ್ರೆ ಐತಿಹಾಸಿಕ ಪಾದಯಾತ್ರೆ.
ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಮೂರುವರೆ ಸಾವಿರ ಕಿ.ಮೀ ಐತಿಹಾಸಿಕ ಪಾದಯಾತ್ರೆ. ಭಾರತ್ ಜೋಡೋ ಯಾತ್ರೆಯ ಉದ್ದೇಶ ಸರ್ವ ಜನರನ್ನ ಬೆಸೆಯೋದು. ಈ ದೇಶದಲ್ಲಿ ಯಾರೂ ಸಮಾಧಾನ, ನೆಮ್ಮದಿ ಮತ್ತು ಸೌಹಾರ್ದತೆಯಿಂದ ಇಲ್ಲ. ಆತಂಕದಲ್ಲಿ ಇರೋ ಸರ್ವರಿಗೂ ಆತ್ಮವಿಶ್ವಾಸ ಕೊಡೋ ಯಾತ್ರೆ ಇದು.
ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಲ್ಲಿದೆ, ಸಿದ್ದರಾಮಯ್ಯ ಮತ್ತು ಡಿಕೆಶಿ ಒಗ್ಗಟ್ಟಿನಲ್ಲಿದ್ದಾರೆ. ಜೋಡೋ ಯಾತ್ರೆಯಲ್ಲೂ ಜೊತೆ ಸೇರಿ ಎಲ್ಲರೂ ಕೈ ಜೋಡಿಸಲಿದ್ದಾರೆ. ಪಕ್ಷದಲ್ಲಿ ಒಗ್ಗಟ್ಟಿಲ್ಲ ಎಂಬ ಅಪಪ್ರಚಾರ ಬಿಜೆಪಿಯ ಅಜೆಂಡಾ.
ಕಾರ್ಯಕರ್ತರು ಮತ್ತು ಜನರ ಮಧ್ಯೆ ಗೊಂದಲ ಸೃಷ್ಟಿಸುವ ಕೆಲಸ ಮಾಡ್ತಿದಾರೆ. ಕಾಂಗ್ರೆಸ್ ನ ಶಾಸಕರು, ಸಂಸದರು ಪಕ್ಷ ಬಿಟ್ಟು ಹೋದರೂ ತತ್ವದರ್ಶ ಬದಲಾಗಲ್ಲ.
ನಮ್ಮ ತತ್ವ ಒಂದು ರಾಜ್ಯಕ್ಕೆ ಸೀಮಿತವಾಗಿಲ್ಲ, ಇಡೀ ದೇಶಕ್ಕೆ ಒಂದೇ ಆಗಿದೆ. ಕಾಂಗ್ರೆಸ್ ಮುಖಂಡರು ಮತ್ತು ನಾಯಕರು ತಪ್ಪಿದರೂ ಪಕ್ಷ ಯಾವತ್ತೂ ಸಿದ್ದಾಂತ ತಪ್ಪಿಲ್ಲ.
ಏಕ್ ಭಾರತ್ ಶ್ರೇಷ್ಠ ಭಾರತ್ ಅಂತ ಮಹಾತ್ಮಾ ಗಾಂಧಿಯವರೇ ಹೇಳಿದ್ದಾರೆ’ ಎಂದು ಹೇಳಿದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
1 day agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ