Connect with us

DAKSHINA KANNADA

ಬಿಜೆಪಿಯವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡೋದು ಸರಿ, ನಾವು ಪೋಸ್ಟರ್ ಹಾಕೋದು ತಪ್ಪಾ-ಖಾದರ್ ವಾಗ್ದಾಳಿ

Published

on

ಮಂಗಳೂರು: ಇತ್ತೀಚೆಗೆ ನಾವು ಪೇ ಸಿಎಂ ಪೋಸ್ಟರ್ ಅಂಟಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಬಿಜೆಪಿಯವರು ಸೋಶಿಯಲ್ ‌ಮೀಡಿಯಾದಲ್ಲಿ ರಾಹುಲ್, ಸೋನಿಯಾ, ಸಿದ್ದರಾಮಯ್ಯ ಬಗ್ಗೆ ಇವರು ಏನೇನೂ ಹಾಕಿಲ್ವಾ? ಆಗ ಯಾಕೆ ತನಿಖೆ ಮಾಡಿಲ್ಲ. ಇದು ಕಾಂಗ್ರೆಸ್‌ನವರು ಮಾಡಿದರೆ ಮಾತ್ರ ತಪ್ಪಾ? ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು.


ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪೋಸ್ಟರ್ ವಾರ್‌ಗೆ ಸಂಬಂಧಿಸಿ ಮಾತನಾಡಿ ‘ಬಿಜೆಪಿಯವರು ಸಾಮಾಜಿಕ ಜಾಲತಾಣದಲ್ಲಿ ಏನು ಬೇಕಾದರು ಹಾಕಬಹುದು. ಆಗ ಯಾಕೆ ತನಿಖೆ ಮಾಡಿಲ್ಲ, ನಾವು ಹಾಕಿದ್ರೆ ಮಾತ್ರ ತಪ್ಪಾ, ಅವರು ಮಾಡೋದು ಎಲ್ಲಾನೂ ಸರೀನಾ ಆ ಬಗ್ಗೆಯೂ ತನಿಖೆ ಆಗಲಿ ಎಂದು ವಾಗ್ದಾಳಿ ನಡೆಸಿದರು.

ಇನ್ನು ಪಿಎಫ್ ಐ ಮತ್ತು ಎಸ್ ಡಿಪಿಐ ಕಾರ್ಯಕರ್ತರ ಕಚೇರಿ ಮೇಲೆ ಎನ್‌ಐಎ ದಾಳಿ ವಿಚಾರಕ್ಕೆ ಸಂಬಂಧಿಸಿ ಸಮಾಜದಲ್ಲಿ ಅಶಾಂತಿ, ಭಯ, ಕೊಲೆ ಇವತ್ತು ಹೆಚ್ಚಾಗಿದೆ. ಈ ರೀತಿ ಭಯ ಹುಟ್ಟಿಸೋ ಕೆಲಸ ಯಾರೇ ಮಾಡಿದರೂ ಸಾಕ್ಷಿ ಇದ್ದರೆ ತಾರತಮ್ಯ ಮಾಡದೇ ಕಾನೂನು ಕ್ರಮ ಕೈಗೊಳ್ಳಲಿ. ಆದರೆ ಕಾನೂನು ಪಾಲಿಸುವಾಗ ಯಾವುದೇ ತಾರತಮ್ಯ ಬೇಡ.


ಸರ್ಕಾರ ಬಿಜೆಪಿ ಕೈಯ್ಯಲಿದೆ, ಸಾಕ್ಷಿ ಒದಗಿಸಿ ಕ್ರಮ ತೆಗೆದುಕೊಳ್ಳಲಿ. ಈ ದೇಶದಲ್ಲಿ ಕಾನೂನು ಇರುವಾಗ ಯಾರ ಕೇಸನ್ನೂ ಹಾಗೆ ತೆಗೆಯಲು ಆಗಲ್ಲ.

ಗುಂಪು ಗಲಭೆ ಆದಾಗ ಕೆಲವರ ಮೇಲೆ ಕೇಸ್ ಆದಾಗ ವಾಪಾಸ್ ತೆಗೆಯಲು ಅವಕಾಶ ಇದೆ. ಸುಮ್ಮನೆ ಆರೋಪ ‌ಮಾಡೋದು ಸರಿಯಲ್ಲ, ದಾಖಲೆ ತೋರಿಸಲಿ’ ಎಂದು ಹೇಳಿದರು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಬಗ್ಗೆ ಮಾತನಾಡಿ ‘ಈ ಪಾದಯಾತ್ರೆಯು ತಿಂಗಳ ಕೊನೆಗೆ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಬರಲಿದೆ. ರಾಹುಲ್ ಗಾಂಧಿಯವರ ಪಾದಯಾತ್ರೆ ಐತಿಹಾಸಿಕ ಪಾದಯಾತ್ರೆ.

ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಮೂರುವರೆ ಸಾವಿರ ಕಿ.ಮೀ ಐತಿಹಾಸಿಕ ಪಾದಯಾತ್ರೆ. ಭಾರತ್ ಜೋಡೋ ಯಾತ್ರೆಯ ಉದ್ದೇಶ ಸರ್ವ ಜನರನ್ನ ಬೆಸೆಯೋದು. ಈ ದೇಶದಲ್ಲಿ ಯಾರೂ ಸಮಾಧಾನ, ನೆಮ್ಮದಿ ಮತ್ತು ಸೌಹಾರ್ದತೆಯಿಂದ ಇಲ್ಲ. ಆತಂಕದಲ್ಲಿ ಇರೋ ಸರ್ವರಿಗೂ ಆತ್ಮವಿಶ್ವಾಸ ಕೊಡೋ ಯಾತ್ರೆ ಇದು.

ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಲ್ಲಿದೆ, ಸಿದ್ದರಾಮಯ್ಯ ಮತ್ತು ಡಿಕೆಶಿ ಒಗ್ಗಟ್ಟಿನಲ್ಲಿದ್ದಾರೆ. ಜೋಡೋ ಯಾತ್ರೆಯಲ್ಲೂ ಜೊತೆ ಸೇರಿ ಎಲ್ಲರೂ ಕೈ ಜೋಡಿಸಲಿದ್ದಾರೆ. ಪಕ್ಷದಲ್ಲಿ ಒಗ್ಗಟ್ಟಿಲ್ಲ ಎಂಬ ಅಪಪ್ರಚಾರ ಬಿಜೆಪಿಯ ಅಜೆಂಡಾ.

ಕಾರ್ಯಕರ್ತರು ಮತ್ತು ಜನರ ಮಧ್ಯೆ ಗೊಂದಲ ಸೃಷ್ಟಿಸುವ ಕೆಲಸ ಮಾಡ್ತಿದಾರೆ. ಕಾಂಗ್ರೆಸ್ ನ ಶಾಸಕರು, ಸಂಸದರು ಪಕ್ಷ ಬಿಟ್ಟು ಹೋದರೂ ತತ್ವದರ್ಶ ಬದಲಾಗಲ್ಲ.

ನಮ್ಮ ತತ್ವ ಒಂದು ರಾಜ್ಯಕ್ಕೆ ಸೀಮಿತವಾಗಿಲ್ಲ, ಇಡೀ ದೇಶಕ್ಕೆ ಒಂದೇ ಆಗಿದೆ. ಕಾಂಗ್ರೆಸ್ ಮುಖಂಡರು ಮತ್ತು‌ ನಾಯಕರು ತಪ್ಪಿದರೂ ಪಕ್ಷ ಯಾವತ್ತೂ ಸಿದ್ದಾಂತ ತಪ್ಪಿಲ್ಲ.

ಏಕ್ ಭಾರತ್ ಶ್ರೇಷ್ಠ ಭಾರತ್ ಅಂತ ಮಹಾತ್ಮಾ ಗಾಂಧಿಯವರೇ ಹೇಳಿದ್ದಾರೆ’ ಎಂದು ಹೇಳಿದರು.

 

 

Click to comment

Leave a Reply

Your email address will not be published. Required fields are marked *

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending