Connect with us

    LATEST NEWS

    ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜೀನಾಮೆ..!?

    Published

    on

    ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜೀನಾಮೆ(Nalin Kumar Kateel) ನೀಡಿದ್ದಾರೆ. ನೈತಿಕವಾಗಿ ನಾನು ವಿಧಾನಸಭಾ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಿಗೆ ಜವಾಬ್ದಾರಿ ಹೊತ್ತು ರಾಜೀನಾಮೆ ಪತ್ರ ನೀಡಿದ್ದೇನೆ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.
    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ನಾನು ಈಗಾಗಲೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel)  ಹೇಳಿದ್ದಾರೆ.
    ಬಳ್ಳಾರಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

    ನೈತಿಕವಾಗಿ ನಾನು ವಿಧಾನಸಭಾ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಿಗೆ ಜವಾಬ್ದಾರಿ ಹೊತ್ತು ರಾಜೀನಾಮೆ ಪತ್ರ ನೀಡಿದ್ದೇನೆ. ಮೌಖಿಕವಾಗಿಯೂ ರಾಷ್ಟ್ರೀಯ ಅಧ್ಯಕ್ಷ ರಿಗೆ ತಿಳಿಸಿದ್ದೇನೆ ಎಂದು ಹೇಳಿದರು.

     ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್ ಸ್ಪಷ್ಟನೆ..!
    ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

    ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

    ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending