Connect with us

LATEST NEWS

ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿಧಿವಶ..!

Published

on

ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿಧಿವಶ..!

ನವದೆಹಲಿ : ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. 82 ವಯಸ್ಸಿನ ಸಿಂಗ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಜೂನ್.25 ರಂದು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಮಲ್ಟಿಆರ್ಗನ್ ಡಿಸ್ಫಂಕ್ಷನ್ ಸಿಂಡ್ರೋಮ್’ನಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಹೃದಯಸ್ತಂಭನ ಕೊನೆಯುಸಿರೆಳೆದಿದ್ದಾರೆ.

ಜಸ್ವಂತ್ ಅವರಿಗೆ ಕೊರೋನಾ ಸೋಂಕು ತಗುಲಿರಲಿಲ್ಲ ಎಂದು ದೆಹಲಿಯ ಸೇನಾ ಆಸ್ಪತ್ರೆ ಸ್ಪಷ್ಟಪಡಿಸಿದೆ.ರಾಜಸ್ಥಾನದ ಜೋಧ್ ಪುರ ಮೂಲದವರಾದ ಜಸ್ವಂತ್ ಸಿಂಗ್ ಅವರು, ಆರಂಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು.

ರಾಜಕೀಯ ಆಕಾಂಕ್ಷೆಯಿಂದ ಸೇನೆಗೆ ನಿವೃತ್ತಿ ಘೋಷಿಸಿ ಸಕ್ರಿಯ ರಾಜಕೀಯಕ್ಕೆ ಸೇರ್ಪಡೆಯಾಗಿದ್ದರು. ಜಸ್ವಂತ್ ಸಿಂಗ್ ಅವರು ಬಿಜೆಪಿ ಪಕ್ಷದಿಂದ ಐದು ಬಾರಿ ರಾಜ್ಯ ಸಭೆಗೆ ಆಯ್ಕೆಯಾಗಿದ್ದರು.

( 1980, 1986, 1998, 1999, 2004 ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. 1990, 1991,1996, 2009. ಕೇಂದ್ರ ಹಣಕಾಸು, ವಿದೇಶಾಂಗ, ಮತ್ತು ರಕ್ಷಣಾ ಖಾತೆಗಳಂತಹ ಪ್ರಮುಖ ಖಾತೆಗಳನ್ನು ಜಸ್ವಂತ್ ಸಿಂಗ್ ನಿಭಾಯಿಸಿದ್ದರು.

ಜಸ್ವಂತ್ ಸಿಂಗ್ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ಜಸ್ವಂತ್ ಅವರು ದೇಶಕ್ಕಾಗಿ ಮೊದಲು ಸೈನಿಕರಾಗಿ ಸೇವೆ ಸಲ್ಲಿಸಿದ್ದು, ನಂತರ ರಾಜಕೀಯದೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಅವಧಿಯಲ್ಲಿ ಅವರು ಪ್ರಮುಖ ಖಾತೆಗಳನ್ನು ನಿಭಾಯಿಸಿ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಅವರ ಈ ನಿಧನದ ವಾರ್ತೆ ಕೇಳಿ ದುಃಖವಾಯಿತು ಎಂದು ಹೇಳಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡಿ, ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಚಿವ ಜಸ್ವಂತ್ ಸಿಂಗ್ ಜಿ ಅವರ ನಿಧನದಿಂದ ತೀವ್ರ ನೋವಾಗಿದೆ.

ರಕ್ಷಣಾ ಮಂತ್ರಿ ಉಸ್ತುವಾರಿ ಸೇರಿದಂತೆ ಹಲವಾರು ಹುದ್ದೆಗಳಲ್ಲಿ ಅವರು ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದರು. ಜಸ್ವಂತ್ ಅವರು ಪರಿಣಾಮಕಾರಿ ಸಚಿವರು ಮತ್ತು ಸಂಸದರು ಎಂದು ಗುರ್ತಿಸಿಕೊಂಡ ನಾಯಕರಾಗಿದ್ದರು ಎಂದಿದ್ದಾರೆ.

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

LATEST NEWS

ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

Published

on

ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.

murder

ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.

Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Continue Reading

LATEST NEWS

ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Published

on

ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.

ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.

ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Continue Reading

LATEST NEWS

Trending