Wednesday, September 28, 2022

ಪುಂಡ ಕಾಂಗ್ರೆಸ್ಸಿಗರೇ ನಿಮಗೆ ಎಚ್ಚರಿಕೆ ಕೊಡ್ತೇನೆ ಎಂದ ಯಶ್ಪಾಲ್‌ ಸುವರ್ಣ

ಮಂಗಳೂರು: ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಫ್ಲೆಕ್ಸ್ ಮಾತ್ರವಲ್ಲ,

ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.


ಉಡುಪಿ ಅಜ್ಜರಕಾಡಿನ ಬ್ರಹ್ಮಗಿರಿಯಲ್ಲಿ ವೀರ ಸಾವರ್ಕರ್‌ ಬ್ಯಾನರ್‌ ಅಳವಡಿಸಿ ವಿವಾದ ಉಂಟಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು,

ಪುತ್ಥಳಿ ನಿರ್ಮಾಣದ ಬಗ್ಗೆ ಕೆಲ ಪುಂಡ ಕಾಂಗ್ರೆಸ್ಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಅವರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಕಾಂಗ್ರೆಸ್ ನಾಯಕರ ಸಾವರ್ಕರ್‌ ಬಗ್ಗೆ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ.

1970 ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ವೀರ್ ಸರ್ಕಾರ ಅವರ ಭಾವಚಿತ್ರವನ್ನು ಪೋಸ್ಟ್ ಸ್ಟ್ಯಾಂಪ್ ಅನ್ನು ಬಿಡುಗಡೆ ಮಾಡುವ ಮೂಲಕ ದೇಶಕ್ಕೆ ಅವರ ಕೊಡುಗೆ, ವಿಚಾರ ತಿಳಿಸುವ ಕೆಲಸವನ್ನು ಮಾಡಿದ್ದರು ಎಂದ ಯಶ್ಪಾಲ್‌, ಮಾಜಿ ಸಿಎಂ ಸಿದ್ದರಾಮಯ್ಯನವರೇ ನಾನು ನಿಮಗೆ ನೇರವಾಗಿ ಸವಾಲು ಹಾಕುತ್ತಿದ್ದೇನೆ.

ನಿಮಗೆ ತಾಕತ್ತಿದ್ದರೆ ನಿಮ್ಮ ಕಾಂಗ್ರೆಸ್ ಕಛೇರಿಯಲ್ಲಿರುವ ಇಂದಿರಾ ಗಾಂಧಿಯವರ ಭಾವಚಿತ್ರವನ್ನು ತೆಗೆದು ಹಾಕಿ. ಮತ್ತೆ ಈ ಬಗ್ಗೆ ಮಾತನಾಡುವ ನೈತಿಕತೆ ನೀವು ಬನ್ನಿ .ಆ ಸಂದರ್ಭದಲ್ಲಿ ನಾವು ನಿಮಗೆ ಉತ್ತರ ಕೊಡಲು ನಾವು ಸಿದ್ಧರಿದ್ದೇವೆ.

75 ವರ್ಷದ ಈ ಇಳಿ ವಯಸ್ಸಿನಲ್ಲಿ ಇಂತಹ ಮಾತುಗಳನ್ನು ಆಡುವುದು ಮಾಜಿ ಸಿಎಂ ಆದ ನಿಮಗೆ ಶೋಭೆ ತರುವಂಥದ್ದು ಅಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...