DAKSHINA KANNADA
ಕೊರೊನಾ ಮಹಾಮಾರಿ ತಡೆಯುವಲ್ಲಿ ಬಿಜೆಪಿ ಸೋತಿದೆ: ಎ.ಸಿ ವಿನಯ್ ರಾಜ್ ಬಿಜೆಪಿ ವಿರುದ್ಧ ಕಿಡಿ.
Published
4 years agoon
By
Adminಮಂಗಳೂರು: ಕೊರೊನಾ ಮಹಾಮಾರಿ ಒಂದನೇ ಅಲೆ ಮತ್ತು ಎರಡನೇ ಅಲೆಯನ್ನು ತಡೆಯುವಲ್ಲಿ ಮತ್ತು ನಿಭಾಯಿಸುವಲ್ಲಿ ಬಿಜೆಪಿ ಕೇಂದ್ರ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ದೇಶದ್ಯಾದಂತ ಜನ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಂತಹ ಸಂದರ್ಭದಲ್ಲಿ ಜನರ ಗಮನವನ್ನ ಬೇರೆ ಕಡೆ ಸೆಳೆಯಲು ಬಿಜೆಪಿ ಪಕ್ಷ ಮೋದಿಜಿಯವರ ವರ್ಚಸ್ಸನ್ನು ಕುಗ್ಗಿಸಲು ಕಾಂಗ್ರೆಸ್ ಟೂಲ್ ಕಿಟ್ ಮಾಡಿದೆ ಎಂದು ಸುಳ್ಳು ಪ್ರಚಾರ ಮಾಡಿದ್ದಾರೆ. ಎಂದು ವಿಪಕ್ಷ ನಾಯಕ, ಮ.ನ.ಪಾ ಹಾಗೂ ಕೆಪಿಸಿಸಿ ವಕ್ತಾರ ಎ.ಸಿ.ವಿನಯರಾಜ್ ಆರೋಪಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಅವರು, “ಬಿಜೆಪಿ ವೈಫಲ್ಯವನ್ನು ಮರೆ ಮಾಚಲು ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಪಕ್ಷ ಮಾಡಿದ ನಕಲಿ ಟೂಲ್ ಕಿಟ್ ಇದಾಗಿದ್ದು, ಕೇಂದ್ರದ ಅಧೀನದಲ್ಲಿ ವಿವಿಧ ತನಿಖಾ ಸಂಸ್ಥೆಗಳು ಇರುವಾಗ ನಿಜವಾಗಿಯೂ ಕಾಂಗ್ರೆಸ್ ಪಕ್ಷ ಈ ರೀತಿ ಮಾಡಿದ್ದರೆ ಯಾಕೆ ಆರೋಪಿಗಳನ್ನು ಬಂಧಿಸಿಲ್ಲ.
ಟಿವಿ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳ ಮುಖಾಂತರ ಇಂತಹ ಸುಳ್ಳು ಸುದ್ದಿಯನ್ನು ಹರಿಯಬಿಟ್ಟು ದೇಶದ ಪ್ರಸ್ತುತ ನೈಜ ವಾಸ್ತವಾಂಶವನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ.
ಸ್ವತಂತ್ರ ಭಾರತದ ಯಾವೊಬ್ಬ ಪ್ರಧಾನಿಯೂ ವಿರೋಧ ಪಕ್ಷದ ವಿರುದ್ಧ ವಿದೇಶಗಳಿಗೆ ಹೋಗಿ ಆರೋಪ ಮಾಡಿದ ಚರಿತ್ರೆ ಇಲ್ಲ. ಇಂತಹ ಚರಿತ್ರೆ ಇದ್ದಲ್ಲಿ ಅದು ನರೇಂದ್ರ ಮೋದಿಯವರಿಗೆ ಮಾತ್ರ.
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಎಲ್ಲಾ ಪ್ರಾಥಮಿಕ ಹಾಗೂ ನಗರ ಆರೋಗ್ಯ ಕೇಂದ್ರಗಳನ್ನು ಮಂಗಳೂರು ಶಾಸಕರಾದ ವೇದವ್ಯಾಸ್ ಕಾಮತ್ ರವರು ಬಿಜೆಪಿ ಪಕ್ಷದ ಕಚೇರಿಗಳನ್ನಾಗಿ ಮಾರ್ಪಡಿಸಿದ್ದಾರೇ ಎನ್ನುವ ಸಂಶಯ ಬರುತ್ತಿದ್ದು, ಲಸಿಕೆ ಟೋಕನ್ ಗಳನ್ನು ಶಾಸಕ ವೇದವ್ಯಾಸ್ ಕಾಮತ್ ರವರ ಚೇಲಾಗಳು ಮತ್ತು ಬಿಜೆಪಿ ಮ.ನ.ಪಾ ಸದಸ್ಯರುಗಳು ಅವರ ಜನರಿಗೆ ಬೇಕಾಬಿಟ್ಟಿ ನೀಡುವುದರ ಮೂಲಕ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸುತ್ತಿದ್ದಾರೆ.
ಅಧಿಕಾರಿಗಳು ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತುಟಿ ಬಿಚ್ಚುತ್ತಿಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಜರಗಿಸಿಲ್ಲ. ಅವರು ಬಿಜೆಪಿ ಏಂಜಟರಂತೆ ವರ್ತಿಸುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಮಂತ್ರಿಗಳು ನಾಪತ್ತೆ ಆಗಿದ್ದಾರೆ. ಎಲ್ಲಾ ಜನರನ್ನು ಸಮಾನವಾಗಿ ಕಾಣಬೇಕಾದ ಇಲ್ಲಿಯ ಶಾಸಕರು ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದ್ರು.
“ದೇಶದಲ್ಲಿ ಉತ್ದಾದಿಸಿದ ಎಲ್ಲಾ ಲಸಿಕೆಗಳನ್ನು ವಿದೇಶಕ್ಕೆ ರಫ್ತು ಮಾಡಿದ್ದೇ ಎಲ್ಲಾ ಅವಾಂತರಗಳಿಗೆ ಕಾರಣವಾಗಿದ್ದು, ಬೇರೆ ಬೇರೆ ಲಸಿಕಾ ಕಂಪೆನಿಗಳಿಗೆ ಲಸಿಕೆಯನ್ನು ತಯಾರಿಸಲು ಕೇಂದ್ರ ಸರಕಾರ ಅನುಮತಿ ನೀಡಲು ನಿರಾಕರಿಸಿದ್ದು ಕೂಡ ಲಸಿಕಾ ಕೊರತೆಗೆ ಕಾರಣವಾಗಿದೆ.
ಅವರ ವೈಫಲ್ಯವನ್ನು ಮರೆ ಮಾಚಲು ನಳಿನ್ ಕುಮಾರ್ ಕಟೀಲ್ ಮತ್ತು ವೇದವ್ಯಾಸ್ ಕಾಮತ್ ಕಾಂಗ್ರೆಸ್ ಪಕ್ಷದ ಹೆಸರನ್ನು ಕೆಡಿಸಲು ಸ್ಥಳೀಯ ನಕಲಿ ಟೂಲ್ ಕಿಟ್ ಮಾಡಿದ್ದಾರೆ” ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ವಿಶ್ವಾಸ್ ಕುಮಾರ್ ದಾಸ್, ಮಹಾಬಲ ಮಾರ್ಲ, ಶಾಹುಲ್ ಹಮೀದ್, ಮ.ನ.ಪಾ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಅನಿಲ್ ಪೂಜಾರಿ, ಪ್ರಕಾಶ್ ಬಿ.ಸಾಲ್ಯಾನ್, ಶಭೋದಯ ಆಳ್ವ, ಅಪ್ಪಿ, ಸಂಶುದ್ದೀನ್, ಆರೀಫ್ ಬಾವಾ, ಯೋಗೀಶ್ ಕುಮಾರ್ ಉಪಸ್ಥಿತರಿದ್ದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
1 day agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ