Connect with us

DAKSHINA KANNADA

ಕೊರೊನಾ ಮಹಾಮಾರಿ ತಡೆಯುವಲ್ಲಿ ಬಿಜೆಪಿ ಸೋತಿದೆ: ಎ.ಸಿ ವಿನಯ್ ರಾಜ್ ಬಿಜೆಪಿ ವಿರುದ್ಧ ಕಿಡಿ.

Published

on

ಮಂಗಳೂರು: ಕೊರೊನಾ ಮಹಾಮಾರಿ ಒಂದನೇ ಅಲೆ ಮತ್ತು ಎರಡನೇ ಅಲೆಯನ್ನು ತಡೆಯುವಲ್ಲಿ ಮತ್ತು ನಿಭಾಯಿಸುವಲ್ಲಿ ಬಿಜೆಪಿ ಕೇಂದ್ರ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ.  ದೇಶದ್ಯಾದಂತ ಜನ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಂತಹ ಸಂದರ್ಭದಲ್ಲಿ ಜನರ ಗಮನವನ್ನ ಬೇರೆ ಕಡೆ ಸೆಳೆಯಲು ಬಿಜೆಪಿ ಪಕ್ಷ ಮೋದಿಜಿಯವರ ವರ್ಚಸ್ಸನ್ನು ಕುಗ್ಗಿಸಲು ಕಾಂಗ್ರೆಸ್ ಟೂಲ್ ಕಿಟ್ ಮಾಡಿದೆ ಎಂದು ಸುಳ್ಳು ಪ್ರಚಾರ ಮಾಡಿದ್ದಾರೆ. ಎಂದು ವಿಪಕ್ಷ ನಾಯಕ, ಮ.ನ.ಪಾ ಹಾಗೂ ಕೆಪಿಸಿಸಿ ವಕ್ತಾರ ಎ.ಸಿ.ವಿನಯರಾಜ್ ಆರೋಪಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಅವರು, “ಬಿಜೆಪಿ ವೈಫಲ್ಯವನ್ನು ಮರೆ ಮಾಚಲು ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಪಕ್ಷ ಮಾಡಿದ ನಕಲಿ ಟೂಲ್ ಕಿಟ್ ಇದಾಗಿದ್ದು, ಕೇಂದ್ರದ ಅಧೀನದಲ್ಲಿ ವಿವಿಧ ತನಿಖಾ ಸಂಸ್ಥೆಗಳು ಇರುವಾಗ ನಿಜವಾಗಿಯೂ ಕಾಂಗ್ರೆಸ್ ಪಕ್ಷ ಈ ರೀತಿ ಮಾಡಿದ್ದರೆ ಯಾಕೆ ಆರೋಪಿಗಳನ್ನು ಬಂಧಿಸಿಲ್ಲ.

ಟಿವಿ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳ ಮುಖಾಂತರ ಇಂತಹ ಸುಳ್ಳು ಸುದ್ದಿಯನ್ನು ಹರಿಯಬಿಟ್ಟು ದೇಶದ ಪ್ರಸ್ತುತ ನೈಜ ವಾಸ್ತವಾಂಶವನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ.

ಸ್ವತಂತ್ರ ಭಾರತದ ಯಾವೊಬ್ಬ ಪ್ರಧಾನಿಯೂ ವಿರೋಧ ಪಕ್ಷದ ವಿರುದ್ಧ ವಿದೇಶಗಳಿಗೆ ಹೋಗಿ ಆರೋಪ ಮಾಡಿದ ಚರಿತ್ರೆ ಇಲ್ಲ. ಇಂತಹ ಚರಿತ್ರೆ ಇದ್ದಲ್ಲಿ ಅದು ನರೇಂದ್ರ ಮೋದಿಯವರಿಗೆ ಮಾತ್ರ.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಎಲ್ಲಾ ಪ್ರಾಥಮಿಕ ಹಾಗೂ ನಗರ ಆರೋಗ್ಯ ಕೇಂದ್ರಗಳನ್ನು ಮಂಗಳೂರು ಶಾಸಕರಾದ ವೇದವ್ಯಾಸ್ ಕಾಮತ್ ರವರು ಬಿಜೆಪಿ ಪಕ್ಷದ ಕಚೇರಿಗಳನ್ನಾಗಿ ಮಾರ್ಪಡಿಸಿದ್ದಾರೇ ಎನ್ನುವ ಸಂಶಯ ಬರುತ್ತಿದ್ದು, ಲಸಿಕೆ ಟೋಕನ್ ಗಳನ್ನು ಶಾಸಕ ವೇದವ್ಯಾಸ್ ಕಾಮತ್ ರವರ ಚೇಲಾಗಳು ಮತ್ತು ಬಿಜೆಪಿ ಮ.ನ.ಪಾ ಸದಸ್ಯರುಗಳು ಅವರ ಜನರಿಗೆ ಬೇಕಾಬಿಟ್ಟಿ ನೀಡುವುದರ ಮೂಲಕ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸುತ್ತಿದ್ದಾರೆ.

ಅಧಿಕಾರಿಗಳು ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತುಟಿ ಬಿಚ್ಚುತ್ತಿಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಜರಗಿಸಿಲ್ಲ. ಅವರು ಬಿಜೆಪಿ ಏಂಜಟರಂತೆ ವರ್ತಿಸುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಮಂತ್ರಿಗಳು ನಾಪತ್ತೆ ಆಗಿದ್ದಾರೆ. ಎಲ್ಲಾ ಜನರನ್ನು ಸಮಾನವಾಗಿ ಕಾಣಬೇಕಾದ ಇಲ್ಲಿಯ ಶಾಸಕರು ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದ್ರು.

“ದೇಶದಲ್ಲಿ ಉತ್ದಾದಿಸಿದ ಎಲ್ಲಾ ಲಸಿಕೆಗಳನ್ನು ವಿದೇಶಕ್ಕೆ ರಫ್ತು ಮಾಡಿದ್ದೇ ಎಲ್ಲಾ ಅವಾಂತರಗಳಿಗೆ ಕಾರಣವಾಗಿದ್ದು, ಬೇರೆ ಬೇರೆ ಲಸಿಕಾ ಕಂಪೆನಿಗಳಿಗೆ ಲಸಿಕೆಯನ್ನು ತಯಾರಿಸಲು ಕೇಂದ್ರ ಸರಕಾರ ಅನುಮತಿ ನೀಡಲು ನಿರಾಕರಿಸಿದ್ದು ಕೂಡ ಲಸಿಕಾ ಕೊರತೆಗೆ ಕಾರಣವಾಗಿದೆ.

ಅವರ ವೈಫಲ್ಯವನ್ನು  ಮರೆ ಮಾಚಲು ನಳಿನ್ ಕುಮಾರ್ ಕಟೀಲ್ ಮತ್ತು ವೇದವ್ಯಾಸ್ ಕಾಮತ್ ಕಾಂಗ್ರೆಸ್ ಪಕ್ಷದ ಹೆಸರನ್ನು ಕೆಡಿಸಲು ಸ್ಥಳೀಯ ನಕಲಿ ಟೂಲ್ ಕಿಟ್  ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ವಿಶ್ವಾಸ್ ಕುಮಾರ್ ದಾಸ್, ಮಹಾಬಲ ಮಾರ್ಲ, ಶಾಹುಲ್ ಹಮೀದ್, ಮ.ನ.ಪಾ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಅನಿಲ್ ಪೂಜಾರಿ, ಪ್ರಕಾಶ್ ಬಿ.ಸಾಲ್ಯಾನ್, ಶಭೋದಯ ಆಳ್ವ, ಅಪ್ಪಿ, ಸಂಶುದ್ದೀನ್, ಆರೀಫ್ ಬಾವಾ, ಯೋಗೀಶ್ ಕುಮಾರ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು ಮೇಯರ್ ಫೋನ್‌ ಇನ್ ಕಾರ್ಯಕ್ರಮ; ಬಿಲ್‌ಗಳನ್ನು ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಜಾರಿ

Published

on

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಜನರ ಸಮಸ್ಯೆ ಆಲಿಸಲು ಮೇಯರ್ ಇಂದು ಫೋನ್‌ ಇನ್ ಕಾರ್ಯಕ್ರಮ ನಡೆಸಿದ್ದಾರೆ. ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು ಅವರು ಪ್ರತಿ ತಿಂಗಳು ಈ ಫೋನ್ ಇನ್ ಕಾರ್ಯಕ್ರಮ ನಡೆಸಿ ಜನಸ್ನೇಹಿ ಆಡಳಿತ ನೀಡಲು ಪ್ರಯತ್ನಿಸಿದ್ದಾರೆ. ಫೋನ್ ಮೂಲಕ ಬರುವ ದೂರುಗಳನ್ನು ಸ್ವೀಕರಿಸಿ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಸಮಸ್ಯೆಯನ್ನು ತಕ್ಷಣ ಬಗೆ ಹರಿಸಲು ಇದರಿಂದ ಸಾಧ್ಯವಾಗಿದೆ. ಕಳೆದ ತಿಂಗಳು ನಡೆದಿದ್ದ ಫೋನ್‌ ಇನ್ ಕಾರ್ಯಕ್ರಮದಲ್ಲಿ ಸುಮಾರು 27 ದೂರುಗಳಲ್ಲಿ 24 ದೂರುಗಳನ್ನು ತಕ್ಷಣ ಬಗೆ ಹರಿಸಿದ್ದಾರೆ. ಈ ಬಾರಿಯೂ ಕೂಡಾ ಸುಮಾರು 26 ಕರೆಗಳು ಬಂದಿದ್ದು ಬಹುತೇಕ ಕರೆಗಳು ನಗರದ ಸ್ವಚ್ಚತೆ , ಸ್ವಯಂ ಘೋಷಿತ ಆಸ್ತಿ ತೆರಿಗೆ , ಹಾಗೂ ಲೈಸೆನ್ಸ್‌ ವಿಚಾರವಾಗಿತ್ತು.

ನಗರದ ಪಂಪ್‌ವೆಲ್‌ನ ಮಹಾವೀರ ವೃತ್ತವನ್ನು ಸುಂದರವಾಗಿಸಿದ್ರೂ ಅಲ್ಲಿ ಅಲೆಮಾರಿ ಕುಟುಂಬಗಳು ನಗರ ಸೌಂದರ್ಯ ಕೆಡಿಸಿರುವ ಬಗ್ಗೆ ದೂರು ಬಂದಿದೆ. ಅವರನ್ನು ಪೊಲೀಸರ ಸಹಾಯದಿಂದ ತೆರವು ಗೊಳಿಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.

ಅಲ್ಲದೇ, ಆಸ್ತಿ ತೆರಿಗೆ ವಿಚಾರದಲ್ಲಿ ಜನರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಎಲ್ಲಾ ಬಿಲ್‌ಗಳನ್ನು ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ನಾಳೆ ನಡೆಯುವ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಮೇಯರ್ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಜನಸ್ನೇಹಿ ಆಡಳಿತ ನೀಡಲು ಪೋನ್ ಇನ್ ಕಾರ್ಯಕ್ರಮ ಸಹಕಾರಿಯಾಗಿದ್ದು, ಜನರು ಸಮಸ್ಯೆಗಳನ್ನು ಗಮನಕ್ಕೆ ತಂದಾಗ ತಕ್ಷಣ ಕ್ರಮ ಕೈಗೊಳ್ಳಲು ಸಹಕಾರಿ ಆಗುತ್ತದೆ ಎಂದು ಅವರು ಹೇಳಿದ್ದಾರೆ.

Continue Reading

DAKSHINA KANNADA

Mangaluru: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ಯುವಮೋರ್ಚಾ

Published

on

ಮಂಗಳೂರು : ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

 


ನಾಸಿರ್ ಹುಸೇನ್ ರಾಜೀನಾಮೆ ನೀಡಬೇಕು ಹಾಗೂ ಘೋಷಣೆ ಕೂಗಿದ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕುವ ವಿಚಾರ ತಿಳಿದ ಪೊಲೀಸರು ಕಚೇರಿ ಬಳಿ ಹೆಚ್ಚಿನ ಭದ್ರತೆ ಏರ್ಪಡಿಸಿದ್ದರು.

ಕಾಂಗ್ರೆಸ್ ಕಚೇರಿ ಸುತ್ತ ಬ್ಯಾರಿಕೇಡ್ ಅಳವಡಿಸಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕದಂತೆ ತಡೆ ಒಡ್ಡಿದ್ದಾರೆ. ಕಚೇರಿ ಬಳಿ ಬಂದು ನಾಸಿರ್ ಹುಸೇನ್ ಹಾಗೂ ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Continue Reading

DAKSHINA KANNADA

ಕಾಗೆ ರಾಷ್ಟ್ರೀಯ ಪಕ್ಷಿಯಾಗಬೇಕಿತ್ತು, ಹಸು ರಾಷ್ಟ್ರೀಯ ಪ್ರಾಣಿಯಾಗಬೇಕಿತ್ತು- ನಟ ಪ್ರಕಾಶ್ ರಾಜ್

Published

on

ಉಳ್ಳಾಲ: ತೊಕ್ಕೊಟ್ಟಿನಲ್ಲಿ ನಡೆದ ಡಿವೈಎಫ್‌ಐನ 12ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾವೇಶಕ್ಕೆ ಅತಿಥಿಯಾಗಿ ಆಗಮಿಸಿದ ಬಹುಬಾಷಾ ನಟ ಪ್ರಕಾಶ್ ರಾಜ್‌ ಭಾಷಣದ ಉದ್ದಕ್ಕೂ ಪ್ರಧಾನಿ ಮೋದಿಯವರನ್ನು ಏಕವಚನದಲ್ಲೇ ಸಂಭೋದಿಸಿ ಟೀಕೆ ಮಾಡಿದ್ದಾರೆ.

ಅಲ್ಲದೇ  ಬಹುಮತ ಎಲ್ಲ ದೇಶದಲ್ಲಿ ನಡೆಯಲ್ಲ, ಪ್ರಕೃತಿಗೆ ಬಹುಮತ ಸರಿಯಲ್ಲ, ಬಹುಮತನೇ ಆಗಬೇಕಾದ್ರೆ ಕಾಗೆ ರಾಷ್ಟ್ರೀಯ ಪಕ್ಷಿಯಾಗಬೇಕಿತ್ತು. ಹಸು ರಾಷ್ಟ್ರೀಯ ಪ್ರಾಣಿಯಾಗಬೇಕಿತ್ತು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

Continue Reading

LATEST NEWS

Trending