Thursday, April 22, 2021

 ಕೃಷಿ ಕಾಯ್ದೆ ವಿರುದ್ಧ ಸಿಡಿದೆದ್ದ ರೈತರಿಂದ ಬಿಜೆಪಿ ಶಾಸಕನ ಬಟ್ಟೆ ಹರಿದು ಹಲ್ಲೆ..! 

ಪಂಜಾಬ್: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ತೀವ್ರಗೊಂಡು ಬಿಜೆಪಿ ಶಾಸಕನೋರ್ವನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ.

ಪಂಜಾಬ್ ನ ಮುಕ್ತಸರ್ ಜಿಲ್ಲೆಯ ಮಾಲೌಟ್ ತಾಲೂಕಿನಲ್ಲಿ ರೈತರ ಗುಂಪೊಂದು ಬಿಜೆಪಿ ಶಾಸಕ ಅರುಣ್ ನಾರಾಂಗ್ ರ ಬಟ್ಟೆ ಹರಿದು ಕಪ್ಪು ಮಸಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.

ಪಕ್ಷದ ನಾಯಕರು ಬಿಜೆಪಿ ಮುಖಂಡರಿಗೆ ಯಾವುದೇ ಕಾರ್ಯಕ್ರಮಕ್ಕೂ ಅವಕಾಶ ನೀಡುತ್ತಿಲ್ಲ ಇದರ ನಡುವೆ ಅಬೋಹರ್ ಕ್ಷೇತ್ರದ ಶಾಸಕ ಅರುಣ್ ನಾರಂಗ್ ಮಾಲೌಟ್ ನಲ್ಲಿ ಸುದ್ದಿಗೋಷ್ಟಿ ನಡೆಸುವ ಸಲುವಾಗಿ ಆಗಮಿಸಿದ್ದರು ಆ ತಕ್ಷಣ ಅಲ್ಲಿದ್ದ ರೈತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿಗಾಗಮಿಸಿದ ಪೊಲೀಸರು ಶಾಸಕರನ್ನು ಅಂಗಡಿಯೊಂದಕ್ಕೆ ಕರೆದೊಯ್ದು ರಕ್ಷಣೆ ನೀಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಹಿರಿಯ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...