Friday, May 20, 2022

‘ಕಾಶ್ಮೀರಿ ಫೈಲ್ಸ್’ ಚಿತ್ರಕ್ಕಾಗಿ ‘ಜೇಮ್ಸ್’ ಚಿತ್ರವನ್ನು ನಿಲ್ಲಿಸಲು ಬಿಜೆಪಿ ಶಾಸಕರ ಒತ್ತಡ: ಮಾಜಿ ಸಿಎಂ ಆರೋಪ

ಬೆಂಗಳೂರು: ದಿ. ನಟ ಪುನೀತ್‌ ರಾಜ್‌ಕುಮಾರ್‌ ನಟನೆಯ ಜೇಮ್ಸ್ ಚಿತ್ರದ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ ‘ಕಾಶ್ಮೀರಿ ಫೈಲ್ಸ್’ ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಚಿತ್ರಮಂದಿರಗಳ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಈ ಬಗ್ಗೆ ಸರಣಿ ಟ್ವೀಟ್‌ ಮಾಡಿದ ಅವರು, ಪ್ರತಿಯೊಬ್ಬ ಕನ್ನಡಿಗನೂ ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ ‘ಕಾಶ್ಮೀರಿ ಫೈಲ್ಸ್’ ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಚಿತ್ರಮಂದಿರಗಳ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ.

ಮುಖ್ಯಮಂತ್ರಿಯವರು ತಕ್ಷಣ ಮಧ್ಯಪ್ರವೇಶಿಸಿ ಜೇಮ್ಸ್ ಚಿತ್ರದ ಪ್ರದರ್ಶನಕ್ಕೆ ತಡೆಯೊಡ್ಡುತ್ತಿರುವುದರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು.

ಇದಕ್ಕೆ ತಪ್ಪಿದಲ್ಲಿ ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಲು ನಡೆಯುತ್ತಿರುವ ಹುನ್ನಾರದಲ್ಲಿ ಸರ್ಕಾರವೂ ಷಾಮೀಲಾಗಿದೆ ಎಂದು ತಿಳಿದುಕೊಳ್ಳಬೇಕಾಗುತ್ತದೆ.

ಪುನೀತ್ ರಾಜ್ ಕುಮಾರ್ ಅಗಲಿಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಶಾಸಕರು ಮತ್ತು ನಾಯಕರು ಕಣ್ಣೀರು ಸುರಿಸಿದ್ದಾರೆ, ಅಪಾರ ಶೋಕ ವ್ಯಕ್ತಪಡಿಸಿದ್ದಾರೆ.

ಆ ಎಲ್ಲ ಭಾವನೆಗಳು ಪ್ರಾಮಾಣಿಕವಾದುದೆಂದು ನಾನು ನಂಬಿದ್ದೇನೆ. ಅದನ್ನು ಸಾಬೀತುಪಡಿಸುವ ಕಾಲ ಈಗ ಬಂದಿದೆ.
ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಉಂಟು ಮಾಡುತ್ತಿರುವುದು ಕೇವಲ ಪುನೀತ್ ರಾಜ್ ಕುಮಾರ್ ಅವರಿಗೆ ಮಾಡುತ್ತಿರುವ ದ್ರೋಹ ಮಾತ್ರವಲ್ಲ ಸಮಸ್ತ ಕನ್ನಡಿಗರಿಗೆ ಮಾಡುತ್ತಿರುವ ಅವಮಾನವೂ ಹೌದು. ಈ ಅನ್ಯಾಯವನ್ನು ಖಂಡಿಸಿ ಕನ್ನಡಿಗರೆಲ್ಲರೂ ಬೀದಿಗೆ ಇಳಿಯುವ ಮೊದಲು ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡರೆ ಒಳಿತು.

ಕಾಶ್ಮೀರಿ ಫೈಲ್ಸ್ ಇರಲಿ, ಇನ್ನೊಂದಿರಲಿ. ಒಂದು ಚಿತ್ರವನ್ನು ಬಲವಂತದಿಂದ ಪ್ರದರ್ಶನ ಮಾಡಿ ಜನ ನೋಡುವಂತೆ ಒತ್ತಡ ಹೇರುವುದು ಸರಿ ಅಲ್ಲ.

ಗಾಂಧೀಜಿ ಬಗ್ಗೆಯೂ ಚಿತ್ರ ಬಂದಿದೆ. ಇತ್ತೀಚೆಗೆ ಜೈಭೀಮ್ ಎಂಬ ಚಿತ್ರವೂ ಬಂದಿದೆ. ಅವುಗಳನ್ನು ನೋಡಬೇಕೆಂದು ಯಾರಾದರೂ ಬಲವಂತ ಮಾಡಿದ್ದಾರಾ?

ಅಪ್ಪು ಅಭಿನಯದ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ಕನ್ನಡಿಗರೆಲ್ಲರೂ ನೋಡಲು ಪ್ರೊತ್ಸಾಹ ನೀಡಬೇಕಾಗಿತ್ತು.

ಕಾಶ್ಮೀರಿ ಫೈಲ್ಸ್ ಎಂಬ ಹಿಂದಿ ಸಿನೆಮಾಕ್ಕೆ ತೆರಿಗೆ ವಿನಾಯಿತಿ ನೀಡುವಾಗ ಕನ್ನಡಿಗನೆಂದು ಹೇಳಿಕೊಳ್ಳುವ ಸಿಎಂ ಅವರಿಗೆ ಕನ್ನಡದ ಜೇಮ್ಸ್ ನೆನಪಾಗಲಿಲ್ಲವೇ? ಎಂದು ಪ್ರಶ್ನಿಸಿ ಟ್ವೀಟ್‌ ಮಾಡಿದ್ದಾರೆ.

 

 

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ಗೆ ಪೆಟ್ರೋಲ್ ಹಾಕಿ ಸುಟ್ಟ ಕಿಡಿಗೇಡಿಗಳು

ಬಂಟ್ವಾಳ: ದಾರಿ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ ಹಾಕಿ ಸುಟ್ಟ ಘಟನೆ ನಿನ್ನೆ ಸಜೀಪಮುನ್ನೂರಿನ ಮಿತ್ತಕಟ್ಟದಲ್ಲಿ ನಡೆದಿದೆ.ಮಿತ್ತಕಟ್ಟ ನಿವಾಸಿ ಗೌತಮ್ ಅವರಿಗೆ ಸೇರಿದ ವಾಹನ ಇದಾಗಿದ್ದು ಅವರು ಬುಧವಾರ...

ಆಂಟಿಯೊಂದಿಗೆ ಸರಸವಾಡಿ ಉಂಡು ಹೋದ ಕೊಂಡು ಹೋದ ಫಯಾಝ್‌..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರಿಗೆ ಸಹಾಯದ ನೆಪದಲ್ಲಿ ಬಲೆಗೆ ಬೀಳಿಸಿ ನಿರಂತರ ಅತ್ಯಾಚಾರಗೈದು 1.50 ಕೋಟಿ ವಂಚನೆಗೈದ ಪ್ರಕರಣದಲ್ಲಿ ಮಂಗಳೂರು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಫಯಾಝ್ (30) ಬಂಧಿತ ಆರೋಪಿ. ಈತ ಮೂಲತಃ...

ಮಲ್ಪೆ: ಸ್ಕೂಟರ್‌ನಲ್ಲಿ ಚಲಿಸುತ್ತಿದ್ದಾಗ ಹಾರ್ಟ್ ಅಟ್ಯಾಕ್-ವ್ಯಕ್ತಿ ಸಾವು

ಮಲ್ಪೆ: ಕೆಲಸ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ನಡೆದಿದೆ.ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತ...