Connect with us

DAKSHINA KANNADA

ಬಿಜೆಪಿಯಿಂದ ಎಎಪಿ ಶಾಸಕರಿಗೆ 800 ಕೋಟಿ ರೂ ಆಫರ್‌: ಕೇಜ್ರಿವಾಲ್‌ ಗಂಭೀರ ಆರೋಪ

Published

on

ನವದೆಹಲಿ: ಎಎಪಿ ತೊರೆದು ಬಿಜೆಪಿ ಪಕ್ಷ ಸೇರಿದರೆ ತಲಾ 20 ಕೋಟಿ ರೂ.ನತೆ, 800 ಕೋಟಿ ರೂ ನೀಡುವುದಾಗಿ ಆಮ್‌ ಆದ್ಮಿ ಪಕ್ಷದ 40 ಶಾಸಕರಿಗೆ ಬಿಜೆಪಿ ಆಮಿಷ ಒಡ್ಡಲಾಗಿದೆ. ಈ ಹಣದ ಮೂಲ ಯಾವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.


ಪಕ್ಷದ ಶಾಸಕರದೊಂದಿಗೆ ತಮ್ಮ ನಿವಾಸದಲ್ಲಿ ಗುರುವಾರ ಸಭೆ ನಡೆಸಿದರು. ನಂತರ ಎಲ್ಲರ ಜೊತೆ ರಾಜ್‌ಘಾಟ್‌ಗೆ ತೆರಳಿ ‘ಆಪರೇಷನ್ ಕಮಲ’ ವಿಫಲವಾಗಲಿ ಎಂದು ಪ್ರಾರ್ಥಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಮನೆಯ ನೆಲಹಾಸು ಮತ್ತು ಗೋಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದರೂ, ದಾಖಲೆ ಇಲ್ಲದ ಒಂದೇಒಂದು ರೂಪಾಯಿ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿಲ್ಲ.

ಸಿಬಿಐ ದಾಳಿಯ ಒಂದು ದಿನದ ಬಳಿಕ ಸಿಸೋಡಿಯಾ ಅವರನ್ನು ಸಂಪರ್ಕಿಸಿರುವ ಬಿಜೆಪಿ, ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಆಮಿಷ ಒಡ್ಡಿದೆ.

ಎಲ್ಲ ಪ್ರಕರಣಗಳನ್ನು ಕೈಬಿಡುವುದಾಗಿ ಹೇಳಿದೆ. ಆದರೆ, ಸಿಎಂ ಸ್ಥಾನದ ದುರಾಸೆ ಹೊಂದಿರದ ಸಿಸೋಡಿಯಾ ಅವರಂಥವರು ಜೊತೆಗಿರುವುದು ನನ್ನ ಅದೃಷ್ಟ’ ಎಂದು ಹೇಳಿದ್ದಾರೆ.
ಜನರು ‘ಅತ್ಯಂತ ಪ್ರಮಾಣಿಕ’ ಸರ್ಕಾರವನ್ನು ದೆಹಲಿಯಲ್ಲಿ ಆಯ್ಕೆ ಮಾಡಿದ್ದಾರೆ. ಅವರಿಗೆ ದ್ರೋಹ ಬಗೆಯುವುದಿಲ್ಲ ಎಂದೂ ಭರವಸೆ ನೀಡಿದ್ದಾರೆ.

ಶಾಸಕರಾದ ಅಜಯ್ ದತ್, ಸಂಜೀವ್ ಜಾ, ಸೋಮನಾಥ ಭಾರತಿ ಮತ್ತು ಕುಲದೀಪ್ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಎಎಪಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದರು.

ಅಷ್ಟಲ್ಲದೆ, ಬಿಜೆಪಿಗೆ ಸೇರಿದರೆ ತಲಾ 20 ಕೋಟಿ ರೂ ಮತ್ತು ಇತರೆ ಶಾಸಕರನ್ನು ಕರೆತಂದರೆ 25 ಕೋಟಿ ರೂ ನೀಡುವುದಾಗಿ ಆಮಿಷ ಒಡ್ಡಲಾಗಿದೆ ಎಂದೂ ದೂರಿದ್ದರು.
ಸಭೆಗೆ ಶಾಸಕರು ಗೈರಿನ ಬಗ್ಗೆ ಸ್ಪಷ್ಟನೆ
ಇಂದಿನ ಸಭೆಗೆ 8 ಶಾಸಕರು ಹಾಜರಾಗಿರಲಿಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಎಪಿ ನಾಯಕ ಸೌರಭ್‌ ಭಾರದ್ವಾಜ್‌, ಪಕ್ಷದ 62 ಶಾಸಕರ ‍ಪೈಕಿ 54 ಮಂದಿ ಸಭೆಗೆ ಹಾಜರಾಗಿದ್ದರು. ದೆಹಲಿಯಿಂದ ಹೊರಗಿರುವ ಏಳು ಮಂದಿ ಮತ್ತು ಜೈಲಿನಲ್ಲಿರುವ ಸಚಿವ ಸತ್ಯೇಂದ್ರ ಜೈನ್‌ ಗೈರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending