Connect with us

DAKSHINA KANNADA

ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರಿಗೆ ಬಿಜೆಪಿ ವತಿಯಿಂದ ಗೌರವಾರ್ಪಣೆ

Published

on

ಮಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನದ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರುವ ಮೂಲಕ ಕೊಡಲು ಏಟು ಹಾಕುವುದಕ್ಕೆ ಪ್ರಯತ್ನಿಸಿದ್ದರು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಡೊಂಗರಕೇರಿ ಭುವನೇಂದ್ರ ಸಭಾ ಭವನದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದ್ದ ಹಿರಿಯರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು, ರಾಜಕೀಯ ನೆಲೆ ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಮಾಡಿದ್ದರು. ಸರಕಾರದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲರನ್ನೂ ಜೈಲಿಗೆ ಹಾಕುವ ಮೂಲಕ‌ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಧಮನಿಸಿದ್ದರು. ಸಂವಿಧಾನದ ಭಾಗವಾಗಿರುವ ಪತ್ರಿಕಾ ರಂಗವನ್ನೂ ಕೂಡ ಧಮನಿಸಿ ಸರ್ವಾಧಿಕಾರ ಮನೋಭಾವವನ್ನು ಪ್ರದರ್ಶಿಸಿದ್ದರು. ಆ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಿದ ಹಿರಿಯರನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಬಳಿಕ ಮಾತನಾಡಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ತುರ್ತು ಪರಿಸ್ಥಿತಿಯ ಕರಾಳ ದಿನಗಳಲ್ಲಿ ಇಂದಿರಾ ಗಾಂಧಿಯವರ ಸರ್ವಾಧಿಕಾರಿ ಮನೋಭಾವವನ್ನು ವಿರೋಧಿಸಿ ಜನ ಸಂಘದ ಪ್ರಮುಖರಾಗಿದ್ದ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಮುಂತಾದ ನಾಯಕರ ಹೋರಾಟ ಅವಿಸ್ಮರಣೀಯ. ಅಂದಿನ ಹೋರಾಟದ ಫಲವಾಗಿ ಭಾರತದಲ್ಲಿ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ವಹಿಸಿದ್ದರು. ಬಿಜೆಪಿ ಮಂಡಲ‌ ಪ್ರಧಾನ ಕಾರ್ಯದರ್ಶಿಗಳಾದ ರೂಪಾ ಡಿ ಬಂಗೇರ, ಸುರೇಂದ್ರ ಜಪ್ಪಿನಮೊಗರು, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಜಯಶ್ರೀ ಕುಡ್ವ, ಪೂರ್ಣಿಮಾ ಎಂ, ಜಗದೀಶ್ ಶೆಟ್ಟಿ ಬೋಳೂರು,ಜಯಲಕ್ಷ್ಮಿ ಶೆಟ್ಟಿ, ಲೀಲಾವತಿ ಪ್ರಕಾಶ್, ಚಂದ್ರಾವತಿ ವಿಶ್ವನಾಥ್, ಸಂಧ್ಯಾ ಮೋಹನ್ ಆಚಾರ್, ರೇವತಿ ಶ್ಯಾಮ್ ಸುಂದರ್, ಬಿಜೆಪಿ ಮುಖಂಡರಾದ ಅಜಯ್ ಕುಲಶೇಖರ, ನಾರಾಯಣ ಗಟ್ಟಿ, ಪ್ರಶಾಂತ್ ಆಳ್ವ, ಅರ್ಶಾದ್ ಪೋಪಿ, ವಸಂತ್ ಜೆ ಪೂಜಾರಿ, ಕಿರಣ್ ಮರೋಳಿ, ನಿಲೇಶ್ ಕಾಮತ್, ಸಂಜಯ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending